ಕೃಷಿ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ : ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು? | Anganwadi Recruitment 2023

WhatsApp Group Join Now
Telegram Group Join Now

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ನೇರ ಅರ್ಜಿ ಆಹ್ವಾನಿಸಲಾಗಿದೆ. ಯಾವ್ಯಾವ ಜಿಲ್ಲೆಯಲ್ಲಿ ಅರ್ಜೀ ಆಹ್ವಾನಿಸಲಾಗಿದೆ? ವಿದ್ಯಾರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮಾಹಿತಿ ಇಲ್ಲಿದೆ….

ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕುಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ನೇರ ಅರ್ಜಿ ಆಹ್ವಾನಿಸಲಾಗಿದೆ. ೧೨ನೇ ತರಗತಿ ಮತ್ತು ೧೦ನೇ ತರಗತಿ ಪಾಸಾದ ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಪಡೆಯಬಹುದು.

ಯಾರೆಲ್ಲ ಅರ್ಹರು?

19 ರಿಂದ 35 ವರ್ಷ ವಯೋಮಿತಿ ಒಳಗಿರುವ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ. ಅಂಗವಿಕಲ ಅಭ್ಯರ್ಥಿಗಳಿಗೆ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ. ಆದರೆ ದೈಹಿಕ ಅಂಗವಿಕಲತೆಯ ಪ್ರಮಾಣವು ಶೇ.೪೦ಕ್ಕಿಂತ ಅಧಿಕವಿರಬಾರದು.

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ವಿದ್ಯಾರ್ಹತೆ ಏನು?

ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯಲ್ಲಿ ಅಧ್ಯಯನ ಮಾಡಿರಬೇಕು. ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು.

ಸಂಬಳ, ಸೌಲತ್ತುಗಳೇನು?

ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 8,000 ರೂಪಾಯಿ ಸಂಬಳ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಪ್ರತಿ ತಿಂಗಳು 4,000 ರೂಪಾಯಿ ನಿಗದಿಪಡಿಸಲಾಗಿದೆ. ಆದರೆ ಈಚೆಗೆ ಮಂಡನೆಯಾದ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಈ ವೇತನ ಪರಿಷ್ಕರಣೆ ಮಾಡುವ ಬಗ್ಗೆ ಸರಕಾರ ಘೋಷಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಈಗ ನೀಡುವ ಮಾಸಿಕ ಗೌರವಧನವನ್ನು ಮಾಸಿಕ ತಲಾ 1,000 ರೂಪಾಯಿಯಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ಅಷ್ಟೇ ಅಲ್ಲ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನವನ್ನು (Gratuity) ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 40 ಕೋಟಿ ರೂಪಾಯಿಗಳ ಅನುದಾನ ಮೀಸಲಿಡಲಾಗಿದೆ. ಇನ್ನು, 25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂಪಾಯಿ ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂಪಾಯಿ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಗಡಪತ್ರದಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಕೆ ಹೇಗೆ?

ರಾಜ್ಯ ಸರಕಾರ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳ ಭರ್ತಿಗೆ ನೇರ ಅರ್ಜಿ ಸ್ವೀಕರಿಸಿ ನೇಮಕ ಪ್ರಕ್ರಿಯೆ ಕೈಗೊಳ್ಳುವ ಸಂಬ೦ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸರಕಾರದ ಆಧೀನ ಕರ‍್ಯದರ್ಶಿ ಕಳೆದ ಫೆಬ್ರವರಿ 10, 2023ರಂದು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಈ ಹುದ್ದೆಗಳಿಗೆ ಭೌತಿಕವಾಗಿ (ಅಪ್‌ಲೈನ್) ಅರ್ಜಿ ಸಲ್ಲಿಸಬೇಕಿದೆ.

ಲಕೋಟೆಯ ಮೇಲೆ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ/ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಎಂದು ನಮೂದಿಸಿ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ನೇಮಕಾತಿಗಾಗಿ ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಕೊಡಗು ಜಿಲ್ಲೆ

ಜಿಲ್ಲೆಯ ಮಡಿಕೇರಿ ಯೋಜನೆಯ ೩ ಅಂಗನವಾಡಿ ಕಾರ್ಯಕರ್ತೆ ಹಾಗೂ ೪ ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆಯರು, 12 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ಯೋಜನೆಯ 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಭೌತಿಕವಾಗಿ (ಅಪ್‌ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯನ್ನು ಮಡಿಕೇರಿ, ಸೋಮವಾರಪೇಟೆ ಹಾಗೂ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪಡೆದುಕೊಳ್ಳಬಹುದು. ಅರ್ಜಿಯನ್ನು ಭರ್ತಿ ಮಾಡಿ ಮಡಿಕೇರಿ ತಾಲೂಕಿಗೆ ಒಳಪಡುವವರು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಡಿಕೇರಿ, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನವರು ಪೊನ್ನಂಪೇಟೆ ಯೋಜನೆಯ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 08272-298379, ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08272-295087, 9108810782, ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08276-282281, 9901806823, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08274-249010, 9902323174 ನಂಬರ್ ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಹಾಗೂ ಮಂಗಳೂರು ನಗರ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಳ್ತಂಗಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ 7 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಭೌತಿಕವಾಗಿ (ಆಫ್‌ಲೈನ್) ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಾರ್ಯಕರ್ತ ಹುದ್ದೆ: ಕಾರ್ಯಕರ್ತೆ ಹುದ್ದೆಗೆ ಬಂದಾರು ಗ್ರಾಮದ ಉಳಿಯ ಹಾಗೂ ಕುಂಟಾಲಪಲ್ಕೆ (ಮಿನಿ), ಲಾಲ-ಹಂದೇವೂರು (ಮಿನಿ), ಕಾಶಿಪಟ್ನ-ಕಿರೋಡಿ (ಮಿನಿ), ವೇಣೂರು-ಕೊಪ್ಪದ ಬಾಕಿಮಾರು (ಮಿನಿ), ಮಚ್ಚಿನ, ಕಳೆಂಜ-ಶಿಬರಾಜೆ, ಕುವೆಟ್ಟು-ಮದ್ದಡ್ಕ.

ಸಹಾಯಕಿ ಹುದ್ದೆ: ಪುದುವೆಟ್ಟು ಗ್ರಾಮದ ಬೊಳ್ಮನಾರು, ಮಾಲಾಡಿ-ಪುರಿಯ, ನಡ-ಕನ್ಯಾಡಿ-1, ಬೆಳ್ತಂಗಡಿ ವಾರ್ಡ್ 6-ಉದಯನಗರ, ವೇಣೂರು, ರೆಖ್ಯ-ಅರಸೀನಮಕ್ಕಿ, ತಣೀರುಪಂಥ-ಕಲ್ಲೇರಿ ಇಲ್ಲಿನ ಖಾಲಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬೆಳ್ತಂಗಡಿ ಅವರನ್ನು ಸಂಪರ್ಕಿಸುವAತೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ನೇಮಕ | 10 ಮತ್ತು 8ನೇ ತರಗತಿ ಪಾಸಾದವರಿಗೆ ಅವಕಾಶ | ಸರಕಾರದ ತುರ್ತು ಆದೇ

ಇನ್ನು ಮಂಗಳೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ (ನಗರ) ವ್ಯಾಪ್ತಿಯ 3 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ 14 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಾರ್ಚ್ 17ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಗರದ ಬಿಷಪ್ ವಿಕ್ಟರ್ ಅಡ್ಡ ರಸ್ತೆಯ, ವೆಲೆನ್ಸಿಯಾದಲ್ಲಿರುವ ಸಿಲ್ವಾ ಕ್ರಾಸ್ ರೋಡ್‌ನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ 0824-2959809 ಸಂಪರ್ಕಿಸುವAತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಕುಂದಾಪುರ ತಾಲೂಕು, ಕಾರ್ಕಳ ತಾಲೂಕು ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹಳ್ಳಿಬೈಲು, ಹೊಸಬೆಂಗ್ರೆ, ಕೋಟಶಾಲೆ, ಬೆರ್ಳ್ಳಪಾಡಿ, ಚಿಪ್ಪಿಕಟ್ಟೆ, ತೊಟ್ಟಂ, ಉಪ್ಪೂರು ಸಾಲ್ಮರ, ಹರಾವು ಮತ್ತು ಹೇರಂಜೆ ಅಂಗನವಾಡಿಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಂದಾಡಿ ಗ್ರಾಮ ಪಂಚಾಯತ್ ಹತ್ತಿರ, ಗಾಂಧಿಮೈದಾನ, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಇನ್ನು ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಹರ್ಕೂರು ಗ್ರಾಮ, ಜಪ್ತಿ ಗ್ರಾಮದ ಕರಿಕಲ್ ಕಟ್ಟೆ ಮತ್ತು ಯಡಮೊಗೆ ಗ್ರಾಮದ ಕೊಳಾಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಕರ್ಕುಂಜೆ ಗ್ರಾಮದ ಹೆರ್ಜಾಡಿ, ತೆಕ್ಕಟ್ಟೆ ಗ್ರಾಮ, ತೆಕ್ಕಟ್ಟೆ ಗ್ರಾಮದ ಕೊಮೆ, ಬೇಳೂರು ಗ್ರಾಮದ ದೇವಸ್ಥಾನಬೆಟ್ಟು, ಹೆಸ್ಕತ್ತೂರು ಗ್ರಾಮ, ಹರ್ಕೂರು ಗ್ರಾಮ, ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಕೊಳನ್‌ಕಲ್, ವಾರ್ಡ್-3ರ ಕರ್ನಾಟಕ ಟೈಲ್ಸ್, ಮೊಳಹಳ್ಳಿ ಗ್ರಾಮದ ಮಾಸ್ತಿಕಟ್ಟೆ, ಅಮಾಸೆಬೈಲು ಗ್ರಾಮದ ಬಳ್ಮನೆ, ಕುಳಂಜೆ ಗ್ರಾಮದ ಭರತ್ಕಲ್, ಯಡ್ತರೆ ಗ್ರಾಮದ ಕೊರಾಡಿ ಹಾಗೂ ಕೊಡ್ಲಾಡಿ ಗ್ರಾಮದ ಮಾರ್ಡಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳ ನೇಮಕಾತಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಪಂಚಾಯತ್ ಹತ್ತಿರ, ಶಾಸ್ತ್ರೀ ಪಾಕ್೯, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಅದೇ ರೀತಿ ಕಾರ್ಕಳ ತಾಲೂಕಿನ ನಿಟ್ಟೆ, ಮರ್ಣೆ, ಕಡ್ತಲ, ಇನ್ನಾ, ನಂದಳಿಕೆ, ಮುಂಡೂರು, ದುರ್ಗಾ, ಕಲ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಅರ್ಜಿಗಳನ್ನು ಅವಶ್ಯಕ ದಾಖಲಾತಿಗಳೊಂದಿಗೆ ಮಾರ್ಚ್ 29ರೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಕಾರ್ಕಳ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08258- 230992  ಸಂಪರ್ಕಿಸಬಹುದಾಗಿದೆ ಎಂದು ಯೋಜನಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಉತ್ತರ ಕನ್ನಡ ಜಿಲ್ಲೆ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 18ರೊಳಗೆ ಕಛೇರಿ ವೇಳೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಸಿದ್ದಾಪುರ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಿದ್ದಾಪುರ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಅಥವಾ ದೂರವಾಣಿ ಸಂಖ್ಯೆ: 0839- 231402ಗೆ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

Agriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!