ಕೃಷಿ

Free Mushroom Training: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ | ಊಟ ಮತ್ತು ವಸತಿ ಕೂಡ ಉಚಿತ

WhatsApp Group Join Now
Telegram Group Join Now

ರುಡ್‌ಸೆಟ್ ಸಂಸ್ಥೆಯಿ೦ದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು.

ಇದನ್ನೂ ಓದಿ: Tarpaulin: ಟಾರ್ಪಲಿನ್ (ತಾಡಪತ್ರಿ) ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ…

ಕೊನೆಯ ದಿನಾಂಕ

ಅಣಬೆ ಬೇಸಾಯ ಕುರಿತ ತರಬೇತಿಯಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್ 2ನೇ ತಾರೀಖಿನ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಊಟ, ವಸತಿ ಉಚಿತ

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಇದನ್ನೂ ಓದಿ: Bele Vime: ಈ ರೈತರಿಗೆ ₹1.33 ಕೋಟಿ ಬೆಳೆ ವಿಮೆ ಪರಿಹಾರ ವಿತರಣೆ…

ಹೆಚ್ಚಿನ ಮಾಹಿತಿಗೆ

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9113880324, 9740982585 ಸಂಪರ್ಕಿಸಬಹುದು ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ರೇಷನ್ ಕಾಡ್೯ ಅರ್ಜಿ ಸ್ವೀಕಾರ

WhatsApp Group Join Now
Telegram Group Join Now

Related Posts

error: Content is protected !!