ಉದ್ಯೋಗ

Anganwadi Jobs: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp Group Join Now
Telegram Group Join Now

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯಾಯ ಜಿಲ್ಲೆಯ ಶಿಶು ಅಭಿವೃದ್ಧಿಯ ಯೋಜನಾ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಆಫ್‌ಲೈನ್‌ನಲ್ಲಿ ಅಂದರೆ ಅರ್ಜಿ ನಮೂನೆ ಹಾಗೂ ಸೂಕ್ತ ದಾಖಲೆಗಳೊಂದಿಗೆ ನೇರವಾಗಿ ಶಿಶು ಅಭಿವೃದ್ಧಿಯ ಯೋಜನಾ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.

ಎಲ್ಲೆಲ್ಲಿ ಹುದ್ದೆಗಳು ಖಾಲಿ ಇವೆ?

ಸದ್ಯ ಕಲಬುರಗಿ ಜಿಲ್ಲೆಯ ಅಫಜಲಪುರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಹಾಗೂ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಮಾಸಿಕ ಗೌರವಧನದ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಈ ವರ್ಷ ಮಳೆ ದುರ್ಬಲ: ಬಿತ್ತನೆಗೂ ಮುನ್ನ ತಪ್ಪದೇ ಬೆಳೆ ವಿಮೆ ಮಾಡಿಸಿ

ಖಾಲಿ ಹುದ್ದೆಗಳೆಷ್ಟು?

ಅಫಜಲಪುರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ  17 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 64 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಇತ್ತ ಬಸವನಬಾಗೇವಾಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 44 ಅಂಗನವಾಡಿ ಕಾರ್ಯಕರ್ತೆ ಹಾಗೂ 80 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗೃಹಜ್ಯೋತಿ ಉಚಿತ ಕರೆಂಟ್‌ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸುವ ಸರಳ ವಿಧಾನ

ಯಾರು ಅರ್ಜಿ ಸಲ್ಲಿಸಬಹುದು?

ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ 19 ರಿಂದ 35 ವರ್ಷ ವಯೋಮಿತಿಯೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ

ಮೇಲ್ಕಾಣಿಸಿದ ಅಂಗನವಾಡಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಜುಲೈ ಜುಲೈ 25ರೊಳಗೆ ಸಲ್ಲಿಸಬೇಕು.

ಹೊಸ APL, BPL ರೇಷನ್ ಕಾರ್ಡ್ ಅರ್ಜಿ ಸ್ಥಗಿತ | New Ration Card Application Stop

ಹೆಚ್ಚಿನ ಮಾಹಿತಿಗೆ

ಹೆಚ್ಚಿನ ಮಾಹಿತಿಗಾಗಿ ಅಫಜಲಪುರ ಶಿಶು ಅಭಿವೃದ್ಧಿ ಯೋಜನೆ ಕಚೇರಿ ಅಥವಾ ದೂರವಾಣಿ ಸಂಖ್ಯೆ- 08470-283073

ಬಸವನಬಾಗೇವಾಡಿ ಶಿಶು ಅಭಿವೃದ್ಧಿ ಯೋಜನೆ ಕಚೇರಿ ಅಥವಾ ದೂರವಾಣಿ: 9611414522, 9945466385 ಸಂಪರ್ಕಿಸುವ೦ತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:

ಆಗಸ್ಟ್ 18ರೊಳಗೆ ಮಹಿಳೆಯರ ಖಾತೆಗೆ 2,000 ರೂಪಾಯಿ ಜಮಾ

ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

ಟೊಮೆಟೊ ಬೆಳೆ ಹೆಕ್ಟೇರಿಗೆ 1,41,500 ವಿಮಾ ಪರಿಹಾರ | ವಿಮಾ ನೋಂದಣಿಗೆ ಜೂನ್ 30 ಕೊನೆ ದಿನ

ರೈತರಿಗಾಗಿ ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆಗೆ ಸಿದ್ಧವಾದ ರಾಣಿಬೆನ್ನೂರು ಶಾಸಕ

 

ನಿರಂತರ ಉಚಿತ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

error: Content is protected !!