ಉದ್ಯೋಗ

SSLC, PUC ಪಾಸಾದವರಿಂದ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್, ಕ್ಲರ್ಕ್, ಡೇಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Bagalkot Zilla Panchayat Recruitment 2022

WhatsApp Group Join Now
Telegram Group Join Now

SSLC ಹಾಗೂ PUC ಪಾಸಾದ ಅಭ್ಯರ್ಥಿಗಳಿಂದ ವಿವಿದ ಹುದ್ದೆಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ಇಲಾಖೆ ಅರ್ಜಿ ಆಹ್ವಾನಿಸಿದೆ. ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಅರ್ಜಿ ಸಲ್ಲಿಕೆ ದಿನಾಂಕ, ಆನ್‌ಲೈನ್ ಲಿಂಕ್ ಸಹಿತ ಸಂಪೂರ್ಣ ಮಾಹಿತ ಇಲ್ಲಿದೆ…

SSLC ಹಾಗೂ PUC ಪಾಸಾದ ಅಭ್ಯರ್ಥಿಗಳಿಗೆ ಶುದ್ಧ ಗ್ರಾಮೀಣ ವಾತಾವರಣದಲ್ಲಿ ನೌಕರಿ ನಿರ್ವಹಿಸುವ ಸದಾವಕಾಶವನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ಇಲಾಖೆ ಒದಗಿಸಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 23, 2022ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸದಾವಕಾಶ ಬಳಸಿಕೊಳ್ಳಬಹುದು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ಇಲಾಖೆ ನಿಯಮಗಳ ಅನ್ವಯ ಬಾಗಲಕೋಟ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಬಾದಾಮಿ, ಬೀಳಗಿ, ಗುಳೆದಗುಡ್ಡ, ಹುನಗುಂದ, ಇಳಕಲ್, ಜಮಖಂಡಿ, ಮುಧೋಳ, ರಬಕವಿ-ಬನಹಟ್ಟಿ, ಬಾಗಲಕೋಟೆ ಸೇರಿ 9 ತಾಲ್ಲೂಕುಗಳ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 54 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ ವಸೂಲಿಗಾರ, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಮತ್ತು ಅಟೆಂಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಕೋರಲಾಗಿದೆ. ಇದನ್ನೂ ಓದಿ: ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ

ಹುದ್ದೆಗಳ ವಿವರ:

  1. ಕರ ವಸೂಲಿಗಾರ-10 ಹುದ್ದೆಗಳು
  2. ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್- 12 ಹುದ್ದೆಗಳು
  3. ಅಟೆಂಡರ್- 32 ಹುದ್ದೆಗಳು

ಒಟ್ಟು ಹುದ್ದೆಗಳು – 54

ವಿದ್ಯಾರ್ಹತೆ:

ಕರ ವಸೂಲಿಗಾರ (ಬಿಲ್ ಕಲೆಕ್ಟರ್) : ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು.ಕಂಪ್ಯೂಟರ್ ತರಬೇತಿ ಕೋರ್ಸ್‌ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಹೊಂದಿರಬೇಕು.

ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ : ಈ ಹುದ್ದೆಗೂ ಕೂಡ ಕನ್ನಡವನ್ನು ಒಂದು ಭಾಷೆಯನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ತರಬೇತಿಯಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಮಾನ್ಯತೆ ಪಡೆದ ಯಾವುದೇ ಸಂಸಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಹೊಂದಬೇಕು

ಅಟೆಂಡರ್ (ಜವಾನ) : ಈ ಹುದ್ದೆಗೆ ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆ ಹೊಂದಿರಬೇಕು. ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಆಯ್ಕೆ ವಿಧಾನ: ಮೇಲ್ಕಾಣಿಸಿದ ಈ ಮೂರು ವಿಧದ ಹುದ್ದೆಗಳ ನೇಮಕಾತಿಯನ್ನು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು/ ಮೆರಿಟ್ ಆಧಾರದಲ್ಲಿ ಮಾಡಿಕೊಳ್ಳಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮಾಡಿ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಮಾನದಂಡಗಳೇನು?

ವೃತ್ತಿಪರ ಕೋರ್ಸ್ ಹಾಗೂ ಇತರೆ ತತ್ಸಮಾನ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ. JOC ಮತ್ತು ಡಿಪ್ಲೋಮಾ ಇನ್ನಿತರ ಯಾವುದೇ ವಿದ್ಯಾರ್ಹತೆಗಳನ್ನು ಈ ಹುದ್ದೆಗೆ ಪರಿಗಣಿಸಲಾಗುವುದಿಲ್ಲ. ವಿದ್ಯಾರ್ಹತೆಯ ದಾಖಲಾತಿಗಳ ನೈಜತೆ ಬಗ್ಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ದೃಢಪಡಿಸಿಕೊಂಡ ನಂತರ ನೇಮಕಾತಿಗೆ ಪರಿಗಣಿಸಲಾಗುವುದು. ಇದನ್ನೂ ಓದಿ: ತೆಂಗು ಬೆಲೆ ಕುಸಿತ: ಅಧಿಕ ಆದಾಯಕ್ಕೆ ಹೊಸ ತಂತ್ರ ಕಂಡುಕೊಂಡ ತೆಂಗು ರೈತ

ಅಭ್ಯರ್ಥಿಯು ಭಾರತೀಯ ನಾಗರೀಕನಾಗಿರತಕ್ಕದ್ದು, ಶೈಕ್ಷಣಿಕ ವಿದ್ಯಾರ್ಹತೆಯನ್ನು ಕರ್ನಾಟಕ ರಾಜ್ಯದಲ್ಲಿ ಪೂರೈಸಿರಬೇಕು.. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಯಾವುದೇ ಮಾನಸಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

ನೈತಿಕ ದುರ್ನಡತೆಯಿಂದಾಗಿ ನೀತಿಬಾಹಿರ ಚಟುವಟಿಕೆಗಳಿಂದಾಗಿ ನ್ಯಾಯಾಲಯದಿಂದ ಶಿಕ್ಷೆಗೆ ಒಳಪಟ್ಟಿರುವ ವ್ಯಕ್ತಿ ಅಥವಾ ಕಚೇರಿಗಳಲ್ಲಿ ನೈತಿಕ ದುರ್ನಡತೆಯಿಂದಾಗಿ ಅಥವಾ ನೀತಿಬಾಹಿರ ಚಟುವಟಿಕೆಗಳಲ್ಲಿ ಒಳಗಾಗಿ ಅಥವಾ ಆಯ್ಕೆಯಾದ ಅಭ್ಯರ್ಥಿಯು ಬದಲಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾನೂನುಬಾಹಿರ, ನೀತಿಬಾಹಿರ ಚಟುವಟಿಕೆಗಳಲ್ಲಿ ತೊಡಗಿ ಸೇವೆಯಿಂದ ತೆಗೆದು ಹಾಕಿದ್ದಲ್ಲಿ ಅಥವಾ ವಜಾ ಮಾಡಲ್ಪಟ್ಟಿದ್ದು ಕಂಡು ಬಂದಲ್ಲಿ ನೇಮಕಾತಿಗೆ ಅನರ್ಹರಾಗಿರುತ್ತಾರೆ. ಇದನ್ನೂ ಓದಿ: ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಅರ್ಜಿ ಸಲ್ಲಿಸುವಾಗ ಸುಳ್ಳು ಮಾಹಿತಿ/ದಾಖಲೆ ನೀಡಿ ಉದ್ಯೋಗ ಪಡೆದುಕೊಳ್ಳುವ ಅಭ್ಯರ್ಥಿಗಳನ್ನು ಯಾವುದೇ ಸಮಯದಲ್ಲಾದರೂ ವಜಾ ಮಾಡಲಾಗುತ್ತದೆ ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಇದನ್ನೂ ಓದಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವೇತನಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಕಾರ್ಮಿಕ ಇಲಾಖೆ ನಿಯಮದನ್ವಯ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 500/- ರೂಪಾಯಿ

ಪ್ರವರ್ಗ2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ: 300/- ರೂಪಾಯಿ

ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿಸೈನಿಕ ಅಭ್ಯರ್ಥಿಗಳಿಗೆ: 200/- ರೂಪಾಯಿ

ವಿಶೇಷ ಚೇತನ ಅಭ್ಯರ್ಥಿಗಳಿಗೆ: 100/- ರೂಪಾಯಿ

ಇದನ್ನೂ ಓದಿ: ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶುಲ್ಕ ಪಾವತಿಸುವ ವಿಧಾನ:

ಶುಲ್ಕ ಪಾವತಿಸಿದ ಬಗ್ಗೆ ಶುಲ್ಕ ಪಾವತಿ ಮಾಡಿ (Print Optionನಲ್ಲಿ) ಚಲನ್ ಪ್ರಿಂಟ್ ತೆಗೆದುಕೊಂಡು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಬ್ಯಾಂಕಿನ ಹೆಸರು, ರಶೀದಿ ಸಂಖ್ಯೆ, ರಶೀದಿ ದಿನಾಂಕ, ಪಾವತಿಸಿದ ಮೊತ್ತ (ರೂಪಾಯಿಗಳಲ್ಲಿ)ವನ್ನು ಸ್ಪಷ್ಟವಾಗಿ ನಮೂದಿಸಿರಬೇಕು.

ಬ್ಯಾಂಕ್ ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು ಭಾವಚಿತ್ರ/ಸಹಿಯನ್ನು ಅಪ್ಲೋಡ ಮಾಡದೇ ಇರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಯಾವುದೇ ಸಂದರ್ಭದಲ್ಲೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಇತರ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಶುಲ್ಕವನ್ನು ಸಂದಾಯ ಮಾಡದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಇದನ್ನೂ ಓದಿ: ಸಣ್ಣ ವ್ಯಾಪಾರಕ್ಕೆ 10 ಲಕ್ಷ ರೂಪಾಯಿ ಧನ ಸಹಾಯ : ಇಲ್ಲಿ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17 ನವೆಂಬರ್ 2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಡಿಸೆಂಬರ್ 2022

ಅರ್ಜಿ ಸಲ್ಲಿಕೆಗೆ ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಉದ್ಯೋಗ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ…

ಇದನ್ನೂ ಓದಿ: 2023ನೇ ಸಾಲಿನ ವಾಯುಪಡೆ ಅಗ್ನಿವೀರರ ನೇಮಕಕ್ಕೆ PUC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ: ₹40,000 ಸಂಬಳ

WhatsApp Group Join Now
Telegram Group Join Now

Related Posts

error: Content is protected !!