ಉದ್ಯೋಗ

BMTC Conductor recruitment 2024 : SSLC ಪಾಸಾದವರಿಗೆ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ನೇಮಕಾತಿ | 2,500 ಹುದ್ದೆಗಳು

WhatsApp Group Join Now
Telegram Group Join Now

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ಕಂಡಕ್ಟರ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…

BMTC Conductor recruitment 2024 : ಬೆಂಗಳೂರು ನಗರದ ಪ್ರಮುಖ ಸಾರ್ವಜನಿಕ ಸಾರಿಗೆ ಸಂಸ್ಥೆಯಾದ ಬಿಎಂಟಿಸಿ (Bangalore Metropolitan Transport Corporation- BMTC) ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶವನ್ನು ಹೆಚ್ಚೆಚ್ಚು ಒದಗಿಸುತ್ತಿದೆ. ಸದ್ಯಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2,500 ಕಂಡಕ್ಟರ್ (ನಿರ್ವಾಹಕ) ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಕೆಲ ದಿನಗಳ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ಜಾಲತಾಣದಲ್ಲಿ ಹಲವು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2,500 ನಿರ್ವಾಹಕ ಹುದ್ದೆಗಳು ಖಾಲಿ ಇವೆ. ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು, ವಿದ್ಯಾರ್ಹತೆ, ವಯೋಮಿತಿ, ಮಾಸಿಕ ಸಂಬಳ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ: Shivamogga Gram panchayat recruitment 2024: PUC ಮುಗಿಸಿದವರಿಗೆ ಗ್ರಾಮ ಪಂಚಾಯತಿ ಗ್ರಂಥಾಲಯ ಹುದ್ದೆಗಳು | ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ

ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ ವಿವರ

BMTC ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲಾಖೆಯು ನಿಗಧಿಪಡಿಸಿದ ದಿನಾಂಕಕ್ಕೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಟ ವಯಸ್ಸು 35 ವರ್ಷ ಮೀರಿರಬಾರದು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಇದನ್ನೂ ಓದಿ: Karnataka Village Accountant Recruitment 2024 : 1820 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಗೆ ಅಧಿಕೃತ ಚಾಲನೆ | ಪ್ರತಿ ವರ್ಷ 500 ಹುದ್ದೆಗಳ ನೇಮಕಾತಿಗೆ ಸಹಮತಿ

ಮಾಸಿಕ ಸಂಬಳವೆಷ್ಟು?

BMTC ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳ 30,000 ರೂಪಾಯಿ ಇರುತ್ತದೆ. ಸಂಬಳದ ಜೊತೆಗೆ ಇತರೆ ಭತ್ಯೆಗಳು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕೂಡ ಒದಗಿಸಲಾಗುವುದು.

ಕಂಡಕ್ಟರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹೇಗಿರಲಿದೆ?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಮೊದಲು ಲಿಖಿತ (Written test) ಪರೀಕ್ಷೆ ನಡೆಸಿ ನಂತರ ದೈಹಿಕ ಪರೀಕ್ಷೆ ಮುಖಾಂತರ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: Surveyor recruitment 2024 : PUC ಪಾಸಾದವರಿಗೆ 939 ಸರ್ವೆಯರ್ ಹುದ್ದೆಗಳು | ಭೂಮಾಪಕರ ನೇಮಕಾತಿಗೆ ದಿನಗಣನೆ | ಕಂದಾಯ ಸಚಿವರಿಂದ ಮಹತ್ವದ ಮಾಹಿತಿ

ವಿಶೇಷ ಸೂಚನೆ : ಈ ಎಲ್ಲಾ ಮಾಹಿತಿಯು ಹಿಂದಿನ ನೇಮಕಾತಿಗಳ ಆಧಾರದ ಮೇಲೆ ಲಭ್ಯವಿದ್ದು, ನಿಖರ ಮತ್ತು ಖಚಿತ ಮಾಹಿತಿಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಅಧಿಕೃತ ಅಧಿಸೂಚನೆ ಪ್ರಕಟಿಸಿದ ನಂತರ ನಮ್ಮ ಈ ‘ಸಮಗ್ರ ಕೃಷಿ’ ಜಾಲತಾಣದಲ್ಲಿ ನೀಡಲಾಗುವುದು. ಮುಂದಿನ ಅಪ್ಡೇಟ್’ಗಳಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ರಿoiಟಿ ಆಗಿ.

  • ಖಾಲಿ ಹುದ್ದೆಗಳ ಶಾರ್ಟ್ ನೋಟಿಫಿಕೇಶನ್ : Download
  • ಇಲಾಖೆಯ ಅಧಿಕೃತ ಜಾಲತಾಣ : Click here

ಇದನ್ನೂ ಓದಿ: NIACL Assistant Recruitment 2024 : ಭಾರತೀಯ ವಿಮಾ ಕಂಪನಿಯಲ್ಲಿ 300 ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ

Farmers Loan Waiver : ರಾಜ್ಯ ಬಜೆಟ್‌ನಲ್ಲಿ ಸಿಗುತ್ತಾ ರೈತರಿಗೆ ಸಾಲಮನ್ನಾ ಭಾಗ್ಯ? | ರೈತರ ಬೇಡಿಕೆಗಳೇನು?

WhatsApp Group Join Now
Telegram Group Join Now

Related Posts

error: Content is protected !!