ಸರಕಾರಿ ಯೋಜನೆ

BMTC free driving training : ಉಚಿತ ಡ್ರೈವಿಂಗ್ ತರಬೇತಿಗೆ ಅರ್ಜಿ ಆಹ್ವಾನ | ವಸತಿ, ಉಟೋಪಚಾರ ಕೂಡ ಪ್ರೀ | ಈಗಲೇ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

2023-24ನೇ ಸಾಲಿನ ಲಘು ಮತ್ತು ಬಾರಿ ವಾಹನ ಚಾಲನಾ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…

BMTC free driving training : ಬಿಎಂಟಿಸಿ ಅರ್ಥಾತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪರಿಶಿಷ್ಟ ಜಾತಿ ಉಪ ಯೋಜನೆ (SCSP) ಮತ್ತು ಗಿರಿಜನ ಉಪ ಯೋಜನೆ (TSP) ಅಡಿಯಲ್ಲಿ ವಸತಿ ಮತ್ತು ಊಟೋಪಚಾರ ಸಹಿತ ಉಚಿತವಾಗಿ ಲಘು ವಾಹನ ಹಾಗೂ ಭಾರಿ ವಾಹನಗಳ ಡ್ರೈವಿಂಗ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: Home loan low interest Banks : ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಪಡೆಯುವ ಸರಳ ವಿಧಾನ | ಸರಳ ಬಡ್ಡಿಯಲ್ಲಿ ಗೃಹಸಾಲ ನೀಡುವ ಬ್ಯಾಂಕ್‌ಗಳ ಪಟ್ಟಿ ಇಲ್ಲಿದೆ

ತರಬೇತಿಯಲ್ಲಿ ಏನೆಲ್ಲಾ ಸೌಲಭ್ಯಗಳು ಇರಲಿವೆ?

ಲಘು ವಾಹನ ಹಾಗೂ ಭಾರಿ ವಾಹನಗಳ ಚಾಲನೆ ಉಚಿತ ತರಬೇತಿ ನೀಡಿ, ಚಾಲನಾ ಅನುಜ್ಞಾಪತ್ರ / ಬ್ಯಾಡ್ಜ್ ನೀಡುವ ಕಾರ್ಯಕ್ರಮ ಇದಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ಸಹಾಯವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಉಚಿತ ವಾಹನ ಚಾಲನಾ ತರಬೇತಿಯಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಗೆ 30 ದಿನಗಳ ವರೆಗೆ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ತರಬೇತಿ ಅವಧಿ ಮುಗಿಯುವ ವರೆಗೂ ಉಚಿತ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ಕೂಡ ಉಚಿತವಾಗಿ ನೀಡಲಾಗುತ್ತದೆ.

ಇದನ್ನೂ ಓದಿ: 12ನೇ ತರಗತಿ ಪಾಸಾದವರಿಗೆ ಗ್ರಾಮ ಪಂಚಾಯಿತಿ ಹುದ್ದೆಗಳ ಹೊಸ ನೇಮಕಾತಿಗೆ ಅರ್ಜಿ ಅಹ್ವಾನ | Gram Panchayat Recruitment 2024

ಲಘು ವಾಹನ ತರಬೇತಿ

ಕಾರ್, ಜೀಪುಗಳಂತಹ ಲಘು ವಾಹನ ಚಾಲನಾ ತರಬೇತಿ ಪಡೆಯಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಮತ್ತು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಅದೇ ರೀತಿ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿರಬೇಕು. ಪುರುಷರಿಗೆ ಮಾತ್ರವಲ್ಲದೆ ಮಹಿಳೆಯರು ಕೂಡ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಲಘು ವಾಹನ ಚಾಲನೆ ತರಬೇತಿ ಪಡೆಯಲು ಬೇಕಾಗಿರುವ ಪ್ರಮುಖ ದಾಖಲಾತಿಗಳೆಂದರೆ ಜನನ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರಗಳು.

ಇದನ್ನೂ ಓದಿ: KSRTC PhonePe Ticket Booking : ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್‌ಗೆ ಫೋನ್ ಪೇ ಮೂಲಕ ಹಣ ಪಾವತಿ ವ್ಯವಸ್ಥೆ ಜಾರಿ

ಭಾರಿ ವಾಹನ ಚಾಲನಾ ತರಬೇತಿ

ಇನ್ನು ಬಸ್, ಲಾರಿಯಂತಹ ಭಾರೀ ವಾಹನಗಳ ಚಾಲನಾ ತರಬೇತಿ ಪಡೆಯಲು ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷದ ಒಳಗಿರಬೇಕು. ಲಘು ವಾಹನ ಚಾಲನಾ ಅನುಜ್ಞಾಪತ್ರ ಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರುವವರು ಮಾತ್ರ ಭಾರಿ ವಾಹನ ಚಾಲನಾ ತರಬೇತಿ ಪಡೆಯಲು ಅರ್ಹರಿರುತ್ತಾರೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳನ್ನು ನೋಡುವುದಾದರೆ ಅಭ್ಯರ್ಥಿಯ ಜನ್ಮ ದಿನಾಂಕ ಜನನ ಪ್ರಮಾಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರಗಳು.

ಇದನ್ನೂ ಓದಿ: Village Accountant Recruitment : 1,839 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ | ಅಧಿಕೃತ ಜಿಲ್ಲಾವಾರು ಹುದ್ದೆಗಳ ಪಟ್ಟಿ ಬಿಡುಗಡೆ | PUC ಪಾಸಾದವರಿಗೆ ಭರ್ಜರಿ ಅವಕಾಶ

ಅರ್ಜಿ ಸಲ್ಲಿಕೆಯ ಪ್ರಮುಖ ಮಾಹಿತಿ

ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ವಿಳಾಸ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, 3ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು – 560027

ವಸತಿ, ಊಟೋಪಚಾರ ಸಹಿತ ಈ ಉಚಿತ ಡ್ರೈವಿಂಗ್ ತರಬೇತಿಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು; ಜನವರಿ 31, 2024 ಅರ್ಜಿ ಸಲ್ಲಿಕೆಯ ಕೊನೆಯ ದಿನವಾಗಿದೆ. ಈ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮತ್ತು ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಿರಿ…

ಇದನ್ನೂ ಓದಿ: Loan and subsidy schemes for women : ಮಹಿಳೆಯರಿಗಾಗಿಯೇ ಇರುವ ಸಾಲ ಮತ್ತು ಸಬ್ಸಿಡಿ ಯೋಜನೆಗಳು: ಕೂಡಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

error: Content is protected !!