ಉದ್ಯೋಗ

SSLC ಪಾಸಾದವರಿಗೆ ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ | CCL Data Entry Operator Recruitment 2023

WhatsApp Group Join Now
Telegram Group Join Now

10ನೇ ತರಗತಿ ಪಾಸಾದವರಿಗೆ ಸೆಂಟ್ರಲ್ ಕೋಲ್ ಫೀಲ್ಡ್ ಲಿಮಿಟೆಡ್’ನಲ್ಲಿ ಖಾಲಿ ಇರುವ ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ…

CCL Data Entry Operator Recruitment 2023 : ಭಾರತ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಕೋಲ್ ಇಂಡಿಯಾ’ ಕಂಪನಿಯ ಅಂಗ ಸಂಸ್ಥೆಯಾದ ‘ಸೆಂಟ್ರಲ್ ಕೋಲ್ ಫೀಲ್ಡ್ ಲಿಮಿಟೆಡ್’ ಕಂಪನಿಯು 1956ರಲ್ಲಿ ಸ್ಥಾಪಿಸಿಲಾಗಿದೆ. ಈ ಪ್ರತಿಷ್ಠಿತ ಕಂಪನಿಯಲ್ಲಿ SSಐಅ ಪಾಸಾದವರಿಗೆ ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿಗೆ ಒಬ್ಬರಂತೆ ರಾಜ್ಯಾದ್ಯಂತ 5,980 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

CCL Data Entry Operator Recruitment 2023 ಹುದ್ದೆಗಳ ಸಂಕ್ಷಿಪ್ತ ವಿವರ

 • ನೇಮಕಾತಿ ಸಂಸ್ಥೆ : ಸೆಂಟ್ರಲ್ ಕೋಲ್ ಫೀಲ್ಡ್ ಲಿಮಿಟೆಡ್
 • ಹುದ್ದೆಗಳ ಹೆಸರು : ಜೂನಿಯರ್ ಡಾಟಾ ಎಂಟ್ರಿ ಆಪರೇಟರ್
 • ಒಟ್ಟು ಖಾಲಿ ಹುದ್ದೆಗಳು : 261
 • ಅರ್ಜಿ ಸಲ್ಲಿಕೆ : ಆಫ್‌ಲೈನ್ ಮೂಲಕ
 • ಉದ್ಯೋಗ ಸ್ಥಳ : ರಾಂಚಿ, ಜಾರ್ಖಂಡ್

ವಿದ್ಯಾರ್ಹತೆ ಮತ್ತು ವಯೋಮಿತಿ: CCL Data Entry Operator Recruitment 2023 ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿ೦ದ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ವಯೋಮಿತಿಯನ್ನು ಸಂಸ್ಥೆಯ ನಿಯಮಗಳ ಅನುಸಾರ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯ್ತಿ PDO, SDA, ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 100 ಅಂಕಗಳ ಆಯ್ಕೆ ಪರೀಕ್ಷೆಯನ್ನು (Selection test) ನಡೆಸಲಾಗುತ್ತದೆ. ಈ ಆಯ್ಕೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದವರ ಮೆರಿಟ್ ಲಿಸ್ಟ್ ಅನ್ನು ಸಿದ್ದಪಡಿಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ವಿ. ಸೂ : ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಜಿ ನಮೂನೆಯನ್ನು ನಾವು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಈ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೊನೆಯ ದಿನಾಂಕದ ಒಳಗಾಗಿ ಅಂದರೆ 23ನೇ ಡಿಸೆಂಬರ್ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: 10ನೇ ತರಗತಿ ಪಾಸಾದವರಿಗೆ ಜವಾನ, ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವುದು ಹೇಗೆ? : CCL Data Entry Operator Recruitment 2023 ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೆಳಗೆ ನೀಡಿರುವ ಅಧಿಕೃತ ಜಾಲತಾಣದಿಂದ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಅಂಚೆ ಮುಖಾಂತರ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ವಿಳಾಸ : Central Coalfields Limited, Personnel/NEE Department, Darbhanga House, Kutchery Road, Ranchi-834029, Jharkhand, Phone No. 0651-2360049/Extn-534

ಇದನ್ನೂ ಓದಿ: ಪದವಿ ಹಾಗೂ ಡಿಪ್ಲೊಮ ಪಾಸಾಗಿರುವ ನಿರುದ್ಯೋಗಿಗಳಿಗೆ ಮಾಸಿಕ ₹3,000 ಸಹಾಯಧನ

ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ ದಿನಾಂಕ :
  01-12-2023
 • ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೊನೆಯ ದಿನಾಂಕ :
  23-12-2023

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು

 • ಅಧಿಸೂಚನೆ : Download
 • ಅಧಿಕೃತ ಜಾಲತಾಣ : Click here
 • ಸಹಾಯವಾಣಿ : 18003456501

Central Coalfields limited junior data entry operator recruitment 2023

WhatsApp Group Join Now
Telegram Group Join Now

Related Posts

error: Content is protected !!