ಸರಕಾರಿ ಯೋಜನೆ

Chaff Cutter: ರೈತರಿಗೆ ಸಬ್ಸಿಡಿ ದರದಲ್ಲಿ ಮೇವು ಕತ್ತರಿಸುವ ಯಂತ್ರಗಳ ವಿತರಣೆ

WhatsApp Group Join Now
Telegram Group Join Now

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖಾ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಹಾಯಧನದಲ್ಲಿ ಮೇವು ಕತ್ತರಿಸುವ ಯಂತ್ರಗಳ ವಿತರಣೆಗೆ ರಾಜ್ಯದ ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ, ಅರ್ಹ ರೈತರು, ಹಸು, ಎಮ್ಮೆ ಸಾಕಣೆದಾರರು ಹಾಗೂ ಆಡು-ಕುರಿ ಪಾಲಕರು ಇದೇ ನಿಗದಿತ ದಿನಾಂಕದೊಳಗೆೆ ಆಯಾ ತಾಲ್ಲೂಕು ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯಲ್ಲಿ ಅರ್ಜಿ ಸಲ್ಲಿಸಿ ಈ ಅವಕಾಶ ಬಳಸಿಕೊಳ್ಳಬಹುದು.

ಇದನ್ನೂ ಓದಿ: ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ರೈತರಿಗೆ ಬೆಳೆ ವಿಮೆ ಪರಿಹಾರ ಸಿಗುತ್ತದೆ?

ಎಷ್ಟು ಸಿಗಲಿದೆ ಸಬ್ಸಿಡಿ?

ಆಯ್ಕೆಯಾಗುವ ಪ್ರತಿ ಫಲಾನುಭವಿಗೆ 2 ಎಚ್.ಪಿ ಸಾಮರ್ಥ್ಯದ ತಲಾ ಒಂದು ಮೇವು ಕತ್ತರಿಸುವ ಯಂತ್ರವನ್ನು ವಿತರಣೆ ಮಾಡಲಾಗುವುದು. ಘಟಕದ ವೆಚ್ಚ ₹33,000 ಇದ್ದು, ಇದರಲ್ಲಿ ಶೇ.50ರ ಸಹಾಯಧನ ಅಂದರೆ 16,500 ರೂಪಾಯಿ ಉಚಿತವಾಗಿ ಸಿಗಲಿದೆ. ಉಳಿದ ಶೇ.50 ಹಣವನ್ನು ಫಲಾನುಭವಿ ರೈತರ ವಂತಿಗೆಯೊAದಿಗೆ ಯೋಜನೆ ಅನುಷ್ಠಾನಗೊಳಿಸಲಾಗುವುದು.

 ಎಲ್ಲಿ ಅರ್ಜಿ ಸಲ್ಲಿಸಬೇಕು?

ಫಲಾನುಭವಿ ರೈತರ ಆಧಾರ್ ಕಾರ್ಡ್, ಸ್ಥಳೀಯ ಪಶುವೈದ್ಯ ಸಂಸ್ಥೆಗಳಿAದ ಪಡೆದ ಜಾನುವಾರು ದೃಢೀಕರಣ ಪತ್ರ, ಪಡಿತರ ಚೀಟಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಾಗಿದ್ದರೆ ಜಾತಿ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಮೇಲ್ಕಾಣಿಸಿದ ಸೂಕ್ತ ದಾಖಲಾತಿಗಳೊಂದಿಗೆ ಹತ್ತಿರದ ಪಶುವೈದ್ಯ ಸಂಸ್ಥೆಗಳಿAದ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ, ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯಲ್ಲಿ ದಿನಾಂಕ 11-08-2023ರೊಳಗೆ ಸಲ್ಲಿಸಬೇಕು.

ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಈ ದಿನ ಜಮಾ ಗ್ಯಾರಂಟಿ ಯಾರಿಗೆಲ್ಲ ಹಣ ಗ್ಯಾರಂಟೀ? ಇಲ್ಲಿದೆ ಮಾಹಿತಿ…

ವಿತರಣೆ ವಿವರ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಾಜ್ಯಾದ್ಯಂತ ಅನುದಾನದ ಲಭ್ಯತೆಯ ಮೇರೆ ಮೇವು ಕತ್ತರಿಸುವ ಯಂತ್ರಗಳ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು; ಆಯಾ ಜಿಲ್ಲೆ, ತಾಲ್ಲೂಕಿನ ರೈತರು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ತಾಲ್ಲೂಕುವಾರು ಇಂತಿಷ್ಟು ರೈತರಿಗೆ ಮೇವು ಕತ್ತರಿಸುವ ಯಂತ್ರಗಳ ವಿತರಣೆಯನ್ನು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ನಿಮ್ಮ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಅಥವಾ ಹತ್ತಿರದ ಪಶುವೈದ್ಯ ಸಂಸ್ಥೆಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ರೈತರು 5 ಲಕ್ಷ ರೂಪಾಯಿ ಶೂನ್ಯ ಬಡ್ಡಿ ಬೆಳೆ ಸಾಲ ಪಡೆಯಲು ಏನು ಮಾಡಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ…

WhatsApp Group Join Now
Telegram Group Join Now

Related Posts

error: Content is protected !!