ಉದ್ಯೋಗ

ಸಹಕಾರ ಇಲಾಖೆಯಲ್ಲಿ ಕೋ-ಆಪರೇಟಿವ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 52,000 ರೂಪಾಯಿ ಸಂಬಳ | Co-Operative Inspectors Recruitment 2023

WhatsApp Group Join Now
Telegram Group Join Now

ಕರ್ನಾಟಕ ಸಹಕಾರ ಇಲಾಖೆಯಲ್ಲಿನ ಗ್ರೂಪ್ ‘ಸಿ’ 100 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದ್ದು; ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ನೇಮಕಾತಿ ಪ್ರಕ್ರಿಯೇ, ಸಂಬಳ ಸವಲತ್ತು, ಅರ್ಜಿ ಸಲ್ಲಿಕೆ ವಿಧಾನ ಕುರಿತ ಸಮಗ್ರ ಮಾಹಿತಿ ಇಲ್ಲಿದೆ…

ಕರ್ನಾಟಕ ಲೋಕಸೇವಾ ಆಯೋಗವು (KPSC) ಕರ್ನಾಟಕ ಸಹಕಾರ ಇಲಾಖೆಯಲ್ಲಿನ ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ಒಟ್ಟು ನೂರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು; ಬಿ.ಎಸ್ಸಿ, ಬಿ.ಕಾಂ, ಬಿಬಿಎ/ ಬಿಬಿಎಂ ಪದವೀಧರ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಸಂಬ೦ಧ ಕರ್ನಾಟಕ ಲೋಕಸೇವಾ ಆಯೋಗವು ವಿವರವಾದ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದೆ.

ಇದನ್ನೂ ಓದಿ: ರೈಲ್ವೇ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ITI ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ

ಹುದ್ದೆಗಳ ವಿವರ: ಸಹಕಾರ ಇಲಾಖೆಯ ‘ಸಹಕಾರ ಸಂಘಗಳ ನಿರೀಕ್ಷಕರ’ (Co-operative Inspectors-CI) ಒಟ್ಟು 100 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

  • ಕರ್ನಾಟಕ ಉಳಿಕೆ ಮೂಲ ವೃಂದದ ಹುದ್ದೆಗಳು: 47
  • ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು: 53
  • ಒಟ್ಟು ಹುದ್ದೆಗಳು: 100

ವಿದ್ಯಾರ್ಹತೆ : ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಿ.ಎಸ್ಸಿ (ಕೃಷಿ), ಬಿ.ಎಸ್ಸಿ (ಮಾರ್ಕೆಟಿಂಗ್), ಬಿ.ಎಸ್ಸಿ ಕೋ-ಆಪ್‌ರೇಟಿವ್, ಬಿ.ಕಾಂ, ಬಿಬಿಎ/ ಬಿಬಿಎಂ ಪದವಿಗಳಲ್ಲಿ ಯಾವುದಾದರೂ ಒಂದನ್ನು ಬೇಸಿಕ್ ವಿದ್ಯಾರ್ಹತೆಯಾಗಿ ಹೊಂದಿರಬೇಕು.

ಇದನ್ನೂ ಓದಿ: KMF ಹುದ್ದೆಗಳಿಗೆ SSLC, ಪದವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಸಂಬಳ: 42,000-97,100

ವಯೋಮಿತಿ : ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ- ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. 2ಎ, 2ಬಿ 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಎಸ್‌ಸಿ, ಎಸ್‌ಟಿ, ಅಂಗವಿಕಲ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ವರೆಗೆ ವಯೋಮಿತಿ ಕಡಿತವಿದೆ.

ಸಂಬಳ: ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಗರಿಷ್ಠ 52,000 ರೂಪಾಯಿ ವರೆಗೆ ವೇತನ ಶ್ರೇಣಿ ಇದೆ. ಸರ್ಕಾರ ಕಾಲಕಾಲಕ್ಕೆ ನೀಡುವ ಇತರೆ ಭತ್ಯೆಗಳು ಸೇರುತ್ತವೆ.

ಇದನ್ನೂ ಓದಿ: SBI ₹10 ಲಕ್ಷ ಮುದ್ರಾ ಸಾಲಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ವಿಧಾನ

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ಶುಲ್ಕ 600 ರೂಪಾಯಿ, 2ಎ, 2ಬಿ 3ಎ, 3ಬಿ ಅಭ್ಯರ್ಥಿಗಳಿಗೆ 300 ರೂಪಾಯಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಇದ್ದು ಎಸ್‌ಸಿ, ಎಸ್‌ಟಿ, ಅಂಗವಿಕಲ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಆಯ್ಕೆ ವಿಧಾನ ಹೇಗೆ?: ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಪದವಿ ಮಟ್ಟದ ಪಠ್ಯಕ್ರಮಗಳನ್ನು ಆಧರಿಸಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿರುತ್ತದೆ. ಅದಕ್ಕೂ ಮುನ್ನ ಅಭ್ಯರ್ಥಿಗಳು ಕನ್ನಡ ಕಡ್ಡಾಯ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳೊ೦ದಿಗೆ ತೇರ್ಗಡೆ ಹೊಂದಿರಬೇಕು. ಈಗಾಗಲೇ ಕೆಪಿಎಸ್‌ಸಿಯ ಕನ್ನಡ ಕಡ್ಡಾಯ ಪರೀಕ್ಷೆ ಪಾಸಾದವರು ಮತ್ತೆ ಇದನ್ನು ಬರೆಯುವ ಅಗತ್ಯ ಇಲ್ಲ.

ಇದನ್ನೂ ಓದಿ: ಇಲ್ಲಿವೆ ಪಿಯುಸಿ ಪಾಸಾದವರಿಗೆ ಹೆಚ್ಚು ಸಂಬಳ ನೀಡುವ ಕೇಂದ್ರ ಸರ್ಕಾರಿ ಹುದ್ದೆಗಳು

ಸ್ಪರ್ಧಾತ್ಮಕ ಪರೀಕ್ಷೆ: ಸ್ಪರ್ಧಾತ್ಮಕ ಪರೀಕ್ಷೆಗೆ ಎರಡು ಪತ್ರಿಕೆಗಳಿರುತ್ತವೆ. ಪ್ರತಿ ಪತ್ರಿಕೆಯಲ್ಲಿ 100 ಅಂಕಗಳ 100 ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಮೊದಲ ಪತ್ರಿಕೆಗೆ ಒಂದೂವರೆ ಗಂಟೆ, ಎರಡನೇ ಪತ್ರಿಕೆ 2 ಗಂಟೆ ಸಮಯ ನಿಗದಿಪಡಿಸಲಾಗಿದೆ. ಪ್ರತಿ ನಾಲ್ಕು ತಪ್ಪು ಉತ್ತರಗಳಿಗೆ 1 ಅಂಕ ಕಳೆಯಲಾಗುತ್ತದೆ. ಅಭ್ಯರ್ಥಿಗಳು ಎರಡೂ ಪತ್ರಿಕೆಗಳಿಗೂ ಹಾಜರಾಗುವುದು ಕಡ್ಡಾಯ. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಪರೀಕ್ಷೆಗೆ ನೀಡುವ ಪ್ರಶ್ನೆಗಳು ಈ ಪಠ್ಯಕ್ರಮಗಳನ್ನು ಆಧರಿಸಿರುತ್ತವೆ.

ಅರ್ಜಿ ಸಲ್ಲಿಕೆ ದಿನಾಂಕ: ಕಳೆದ ಮಾರ್ಚ್ 30, 2023ರಿಂದಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು; ಇದೇ ಏಪ್ರಿಲ್ 30, 2023 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.

ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳ ನೇಮಕಾತಿ ಕುರಿತ ವಿವರವಾದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ ????

Notification 1

Notification 2

ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು  www.kpsc.kar.nic.in ಜಾಲತಾಣಕ್ಕೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು:

  1. ಕೇ೦ದ್ರ ಕಛೇರಿಯ ಮಾಹಿತಿ ಕೇಂದ್ರ: 080-30574957/30574901
  2. ಪ್ರಾಂತೀಯ ಕಛೇರಿ ಮೈಸೂರು: 0821-2545956
  3. ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
  4. ಪ್ರಾಂತೀಯ ಕಛೇರಿ ಕಲಬುರ್ಗಿ: 08472-227944
  5. ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here
WhatsApp Group Join Now
Telegram Group Join Now

Related Posts

error: Content is protected !!