ಉದ್ಯೋಗ

SSLC ಅಭ್ಯರ್ಥಿಗಳಿಂದ ಪೊಲೀಸ್ ಪೇದೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಹಿಳೆಯರಿಗೂ ಅವಕಾಶ, 69,100 ಸಂಬಳ | crpf constable recruitment 2023

WhatsApp Group Join Now
Telegram Group Join Now

ಬರೋಬ್ಬರಿ 9 ಸಾವಿರಕ್ಕೂ ಹೆಚ್ಚು ಪೊಲೀಸ್ ಪೇದೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪಾಸಾದ ಪುರುಷರು ಮತ್ತು ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸಂಬಳ ಗರಿಷ್ಠ 69,100 ರೂಪಾಯಿ…

ಕೇಂದ್ರ ಮೀಸಲು ಪೊಲೀಸ್ ಪಡೆಯ (Central Reserve Police Force) ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಟೆಕ್ನಿಕಲ್ ಮತ್ತು ಟ್ರೇಡ್ಸ್ ಮನ್ ವಿಭಾಗದಲ್ಲಿ ನೇಮಕ ಮಾಡಿಕೊಳ್ಳಲಿದ್ದು; ಕರ್ನಾಟಕದಲ್ಲಿ 460+6 ಮಹಿಳಾ ಹುದ್ದೆಗಳಿವೆ. ಎಸ್‌ಎಸ್‌ಎಲ್‌ಸಿ ಪಾಸಾದ ಪುರುಷರು ಮತ್ತು ಮಹಿಳೆಯರು ಏಪ್ರಿಲ್ 25, 2023ರ ಒಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

  • ಕಾನ್ಸ್ ಟೇಬಲ್ : 9212 (ಪುರುಷರಿಗೆ- 9105, ಮಹಿಳೆಯರಿಗೆ-107)
  • ಕರ್ನಾಟಕದ ಅಭ್ಯರ್ಥಿಗಳಿಗೆ : 460+6 ಮಹಿಳಾ ಹುದ್ದೆಗಳು.

ಕಾನ್ಸ್ ಟೇಬಲ್  ಹುದ್ದೆಗಳನ್ನು ಡ್ರೈವಿಂಗ್, ಮೋಟಾರು ವೆಹಿಕಲ್ ಮಷಿನ್, ಕಾರ್ಪೆಂಟರ್, ಟೇಲರ್, ಬ್ರಾಸ್ ಬ್ಯಾಂಡ್, ಪೈಪ್ ಬ್ಯಾಂಡ್, ಬಗ್ಲಾರ್, ಗಾರ್ಡೆನರ್, ಪೇಂಟರ್, ಕುಕ್, ವಾಟರ್ ಕ್ಯಾರಿಯರ್, ವಾಶರ್‌ಮನ್, ಬಾರ್ಬರ್, ಸಫಾಯಿ ಕರ್ಮಚಾರಿ ಹೀಗೆ ಹಲವು ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.

ಇದನ್ನೂ ಓದಿ: ತುಮಕೂರು ಹಾಲು ಒಕ್ಕೂಟದ 219 ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಬಳ 21,400 ರಿಂದ 97,100 ರೂಪಾಯಿ

ವಿದ್ಯಾರ್ಹತೆ : ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ಪಾಸ್ ಮಾಡಿರಬೇಕು. ಕೆಲವೊಂದು ಟೆಕ್ನಿಕಲ್ ಹುದ್ದೆಗಳಿಗೆ ಐಟಿಐ ಪಾಸ್ ಮಾಡಿದವರು ಮತ್ತು ಒಂದು ವರ್ಷ ತರಬೇತಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೇಬಲ್ (ಚಾಲಕ) ಹುದ್ದೆಗಳಿಗೆ ಕನಿಷ್ಠ 21 ರಿಂದ 27 ಗರಿಷ್ಠ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಇತರೆ ಎಲ್ಲ ವಿಭಾಗದ ಕಾನ್ಸ್ಟೇಬಲ್ ಹುದ್ದೆಗಳಿಗೆ ಕನಿಷ್ಠ 18 ರಿಂದ ಗರಿಷ್ಠ 23 ವರ್ಷದ ವರೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ಮಾಜಿ ಸೈನಿಕರಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇದೆ.

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಸಣ್ಣ ರೈತರ ಖಾತೆಗೆ 2,000 ರೂಪಾಯಿ ಜಮಾ | ನಿಮಗೆ ಹಣ ಬಂದಿದೆಯೋ ಇಲ್ವೋ ಮೊಬೈಲ್‌ನಲ್ಲೇ ಚೆಕ್ ಮಾಡಿ

ಅರ್ಜಿ ಸಲ್ಲಿಕೆ ದಿನಾಂಕ:

  • ಇದೇ ಮಾರ್ಚ್ 27, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಏಪ್ರಿಲ್ 25, 2023 ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.
  • ಕ೦ಪ್ಯೂಟರ್ ಆಧಾರಿತ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಜೂನ್ 20 ರಿಂದ 25, 2023.
  • ಕಂಪ್ಯೂಟರ್ ಆಧಾರಿತ ಪರೀಕ್ಷೆ ಸಂಭಾವ್ಯ ದಿನಾಂಕ: ಜುಲೈ 1 ರಿಂದ 13, 2023

ಸಂಬಳ: ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾಕಾನ್ಸ್ ಟೇಬಲ್  ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 ರೂಪಾಯಿ ಮಾಸಿಕ ಸಂಬಳ ನಿಗದಿ ಮಾಡಲಾಗಿದೆ. ಜೊತೆಗೆ ಎಲ್ಲ ರೀತಿಯ ಸವಲತ್ತುಗಳು ಅನ್ವಯವಾಗುತ್ತವೆ.

ಇದನ್ನೂ ಓದಿ: ಇಲ್ಲಿವೆ ಪಿಯುಸಿ ಪಾಸಾದವರಿಗೆ ಹೆಚ್ಚು ಸಂಬಳ ನೀಡುವ ಕೇಂದ್ರ ಸರ್ಕಾರಿ ಹುದ್ದೆಗಳು

ಅರ್ಜಿ ಶುಲ್ಕ: ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ ಟೇಬಲ್  ಹುದ್ದೆಗಳಿಗೆ ಎಲ್ಲ ವರ್ಗ, ಪಂಗಡದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ನೇಮಕಾತಿ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PST), ದೈಹಿಕ ದಕ್ಷತೆ ಪರೀಕ್ಷೆ (PET), ವ್ಯಾಪಾರ ಪರೀಕ್ಷೆ, ಮೂಲ ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ.

ಪರೀಕ್ಷಾ ಕೇಂದ್ರಗಳು: ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಕಂಪ್ಯೂಟರ್ ಪರೀಕ್ಷೆ ನಡೆಯಲಿದೆ. ಕರ್ನಾಟಕದ ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಗುಲ್ಬರ್ಗ, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಪುತ್ತೂರು, ಶಿವಮೊಗ್ಗ, ತುಮಕೂರು, ಉಡುಪಿಗಳಲ್ಲಿ ಕರ್ನಾಟಕ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷಾ ಕೇಂದ್ರಗಳು ಇರಲಿವೆ.

ಇದನ್ನೂ ಓದಿ: ಗ್ರಾಮ ಪಂಚಾಯತಿ 6,406 ಹುದ್ದೆಗಳಿಗೆ ಪಿಯುಸಿ ಅಭ್ಯರ್ಥಿಗಳ ನೇಮಕಾತಿ

ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ ಟೇಬಲ್  ಹುದ್ದೆಗಳ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿAgriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!