ಉದ್ಯೋಗ

1.30 ಲಕ್ಷ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕ | SSLC ಪಾಸಾದವರಿಗೆ ಸುವರ್ಣಾವಕಾಶ | CRPF Constable Recruitment 2023

WhatsApp Group Join Now
Telegram Group Join Now

SSLC ಪಾಸಾದ ಗ್ರಾಮೀಣ ಯುವಕ-ಯುವತಿಯರಿಗೆ ಇದೊಂದು ಸುವರ್ಣಾವಕಾಶ. ಬರೋಬ್ಬರಿ 1.30 ಲಕ್ಷ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬೃಹತ್ ನೇಮಕ ನಡೆಯಲಿದೆ. ಈ ಹುದ್ದೆಗಳಿಗೆ ಯಾರೆಲ್ಲ ಅರ್ಹರು? ಸಂಬಳ ಸವಲತ್ತುಗಳೇನು? ನೇಮಕ ಪ್ರಕ್ರಿಯೆ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿನ (CRPF) 1.30 ಲಕ್ಷ ಕಾನ್ಸ್‌ಟೇಬಲ್‌ (ಜನರಲ್ ಡ್ಯೂಟಿ/ ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮನ್‌) ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವಾಲಯವು ಪ್ರಕಟಿಸಿದೆ. ಇದು ಗ್ರೂಪ್ ‘ಸಿ’ ಹುದ್ದೆಗಳಾಗಿದ್ದು, ಗೃಹ ಸಚಿವಾಲಯವು ಈ ಸಂಬAಧ ಕಳೆದ ಏಪ್ರಿಲ್ 5 ರಂದು ಅಧಿಸೂಚನೆ ಹೊರಡಿಸಿದೆ.

ಒಟ್ಟು 1,29,929 ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಇದರಲ್ಲಿ 1,25,262 ಹುದ್ದೆಗಳು ಪುರುಷ ಅಭ್ಯರ್ಥಿಗಳಿಗೆ ಮೀಸಲಾಗಿದ್ದರೆ, 4,667 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 – 69,100. ವೇತನ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ಈ ಸಂಬ೦ಧ ಸದ್ಯವೇ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ: ರೈಲ್ವೇ ಇಲಾಖೆಯಲ್ಲಿ 3 ಲಕ್ಷ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ITI ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ

ವಿದ್ಯಾರ್ಹತೆ : ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್‌ಟೇಬಲ್‌  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ಪಾಸ್ ಮಾಡಿರಬೇಕು. ಕೆಲವೊಂದು ಟೆಕ್ನಿಕಲ್ ಹುದ್ದೆಗಳಿಗೆ ಐಟಿಐ ಪಾಸ್ ಮಾಡಿದವರು ಮತ್ತು ಒಂದು ವರ್ಷ ತರಬೇತಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಕನಿಷ್ಠ 18 ರಿಂದ ಗರಿಷ್ಠ 23 ವರ್ಷದ ವರೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಹಾಗೂ ಮಾಜಿ ಸೈನಿಕರಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇದೆ. ಮಾಜಿ ಅಗ್ನಿವೀರರಿಗೂ ವಯೋಮಿತಿಯಲ್ಲಿ 05 ವರ್ಷ ಸಡಿಲಿಕೆ ಇರುತ್ತದೆ.

ಇದನ್ನೂ ಓದಿ: KMF ಹುದ್ದೆಗಳಿಗೆ SSLC, ಪದವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಸಂಬಳ: 42,000-97,100

ದೈಹಿಕ ಅರ್ಹತೆ: ಪುರುಷ ಅಭ್ಯರ್ಥಿಗಳು 170 ಸೆಂಟಿ ಮೀಟರ್ ಎತ್ತರವಿರಬೇಕು. ಎದೆಯ ಸುತ್ತಳತೆ 80 ಸೆಂಟಿ ಮೀಟರ್ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳು 157 ಸೆಂಟಿ ಮೀಟರ್ ಎತ್ತರವಿರಬೇಕು. ಎತ್ತರಕ್ಕೆ ತಕ್ಕ ತೂಕ ಹೊಂದಿರಬೇಕು. ಮಾಜಿ ಅಗ್ನಿವೀರರಿಗೆ ದೈಹಿಕ ಪರೀಕ್ಷೆ ನಡೆಸಲಾಗುವುದಿಲ್ಲ. ಒಟ್ಟು ಹುದ್ದೆಗಳಲ್ಲಿ ಶೇ.10 ರಷ್ಟು ಹುದ್ದೆಗಳನ್ನು ಮಾಜಿ ಅಗ್ನಿವೀರರಿಗೆ ಮೀಸಲಿಡಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುತ್ತದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶವಿರುತ್ತದೆ.

ಸಂಬಳ: ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 ರೂಪಾಯಿ ಮಾಸಿಕ ಸಂಬಳ ನಿಗದಿ ಮಾಡಲಾಗಿದೆ. ಜೊತೆಗೆ ಎಲ್ಲ ರೀತಿಯ ಸವಲತ್ತುಗಳು ಅನ್ವಯವಾಗುತ್ತವೆ.

ಇದನ್ನೂ ಓದಿ: SBI ₹10 ಲಕ್ಷ ಮುದ್ರಾ ಸಾಲಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ವಿಧಾನ

ಆಯ್ಕೆ ಪ್ರಕ್ರಿಯೆ: ನೇಮಕಾತಿ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PSP), ದೈಹಿಕ ದಕ್ಷತೆ ಪರೀಕ್ಷೆ (PET), ವ್ಯಾಪಾರ ಪರೀಕ್ಷೆ, ಮೂಲ ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ.

ನೇಮಕ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ದೈಹಿಕ ಅರ್ಹತಾ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ವೃತ್ತಿ ಪರೀಕ್ಷೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಿ, ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆಯು ನೂರು ಅಂಕಗಳಿಗೆ ನಡೆಯಲಿದ್ದು, ನೂರು ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಹಿಂದಿ/ ಇಂಗ್ಲಿಷ್ ತಿಳಿದಿರುವ ಕುರಿತು ಪರೀಕ್ಷೆ ಕೂಡ ನಡೆಸಲಾಗುತ್ತದೆ.

ಇದನ್ನೂ ಓದಿ: ಇಲ್ಲಿವೆ ಪಿಯುಸಿ ಪಾಸಾದವರಿಗೆ ಹೆಚ್ಚು ಸಂಬಳ ನೀಡುವ ಕೇಂದ್ರ ಸರ್ಕಾರಿ ಹುದ್ದೆಗಳು

ಪರೀಕ್ಷಾ ಕೇಂದ್ರಗಳು: ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಕಂಪ್ಯೂಟರ್ ಪರೀಕ್ಷೆ ನಡೆಯಲಿದೆ. ಕರ್ನಾಟಕದ ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಧಾರವಾಡ, ಗುಲ್ಬರ್ಗ, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಪುತ್ತೂರು, ಶಿವಮೊಗ್ಗ, ತುಮಕೂರು, ಉಡುಪಿಗಳಲ್ಲಿ ಕರ್ನಾಟಕ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷಾ ಕೇಂದ್ರಗಳು ಇರಲಿವೆ.

ಗಮನಿಸಿ: ಈ ನೇಮಕ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಕೇವಲ ಗೃಹ ಸಚಿವಾಲಯ ಅಧಿಸೂಚನೆ ಮಾತ್ರ ಹೊರಡಿಸಿದೆ. ನೇಮಕಾತಿ ಅಧಿಸೂಚನೆಯನ್ನು ಮುಂದೆ ಸಿಆರ್‌ಪಿಎಫ್ ಹೊರಡಿಸಲಿದ್ದು, ಅರ್ಜಿ ಸಲ್ಲಿಕೆಯ ಕುರಿತು ಸಂಪೂರ್ಣ ಮಾಹಿತಿ ಸಿಗಲಿದೆ.

ಗೃಹ ಸಚಿವಾಲಯದ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ..

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಸಹಾಯವಾಣಿ ಸಂಖ್ಯೆ: 02261087529

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here
WhatsApp Group Join Now
Telegram Group Join Now

Related Posts

error: Content is protected !!