ಉದ್ಯೋಗ

ಡಿಸಿಸಿ ಬ್ಯಾಂಕ್ ನೇರ ನೇಮಕಾತಿ | SSLC, ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಸಂಬಳ 23,500-67,000 ರೂಪಾಯಿ | KCDCCB Bank Recruitment 2023

WhatsApp Group Join Now
Telegram Group Join Now

SSLC ಮತ್ತು ಪದವಿಧರ ಅಭ್ಯರ್ಥಿಗಳಿಂದ ಡಿಸಿಸಿ ಬ್ಯಾಂಕ್‌ನ ಲೆಕ್ಕಿಗರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಜವಾನರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ವಿಧಾನ, ಅರ್ಜಿ ಸಲ್ಲಿಕೆ ಲಿಂಕ್, ವಿದ್ಯಾರ್ಹತೆ, ಸಂಬಳ, ವಯೋಮಿತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ಹಾಗೂ ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960, ಬ್ಯಾಂಕಿನ ಉಪವಿಧಿ ಮತ್ತು ಸಿಬ್ಬಂದಿ ಸೇವಾ ನಿಯಮಗಳಲ್ಲಿನ ಅವಕಾಶಗಳಿಗೊಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬ್ಯಾಕ್‌ಲಾಗ್ ಹುದ್ದೆಯೂ ಸೇರಿದಂತೆ ವಿವಿಧ ವೃಂದಗಳ ಒಟ್ಟು 36 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಕಳುಹಿಸಲು ಅವಕಾಶವಿರುವುದಿಲ್ಲ. ಬದಲಾಗಿ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ನಿಂದ ಆನ್‌ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ರೈತರಿಗೆ 5 ಲಕ್ಷ ರೂಪಾಯಿ ಶೂನ್ಯ ಬಡ್ಡಿ ಸಾಲ ಏಪ್ರಿಲ್ 1ರಿಂದ ಜಾರಿ: ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

ಹುದ್ದೆಗಳ ವಿವರ

 1. ಲೆಕ್ಕಿಗರು: 09
 2. ಹಿರಿಯ ಸಹಾಯಕರು: 13
 3. ವಾಹನ ಚಾಲಕರು: 03
 4. ಜವಾನರು: 10
 5. ಹಿರಿಯ ಸಹಾಯಕರು: 01 ಹುದ್ದೆ (2ಎ ಅಂಗವಿಕಲ)

ಒಟ್ಟು ಹುದ್ದೆಗಳು: 36

ವೇತನ ಶ್ರೇಣಿ 

 1. ಲೆಕ್ಕಿಗರು: 36,000-67,550 ರೂಪಾಯಿ
 2. ಹಿರಿಯ ಸಹಾಯಕರು: 33,450-62,600 ರೂಪಾಯಿ
 3. ಚಾಲಕರು: 27,650-52,650 ರೂಪಾಯಿ
 4. ಜವಾನರು: 23,500-47,650 ರೂಪಾಯಿ

ಇದನ್ನೂ ಓದಿ: ಪದವಿಧರರಿಗೆ ಇಲ್ಲಿದೆ ವಾರ್ಷಿಕ 5 ಲಕ್ಷ ರೂಪಾಯಿ ಸಂಬಳದ ಉದ್ಯೋಗ | ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023

ಶೈಕ್ಷಣಿಕ ವಿದ್ಯಾರ್ಹತೆ 

ಅರ್ಜಿಗಳನ್ನು ಭರ್ತಿ ಮಾಡಲು ನಿಗಧಿಪಡಿಸಿರುವ ಕೊನೆಯ ದಿನಾಂಕದಿ೦ದ ಆಯಾ ಹುದ್ದೆಗಳಿಗೆ ಕೆಳಗೆ ಸೂಚಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಹೊಂದಿರಬೇಕು. ನಿಗಧಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದು ಇದರ ಆಧಾರದ ಮೇಲೆ ಅರ್ಜಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಲೆಕ್ಕಿಗರು: ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ, ಬರೆಯ ಸಾಮರ್ಥ್ಯದ ಜೊತೆಗೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು. ಕಂಪ್ಯೂಟರ್ ಆಪರೇಷನ್ಸ್ ಹಾಗೂ ಅಪ್ಲಿಕೇಷನ್‌ನಲ್ಲಿ ಜ್ಞಾನದ ಜೊತೆಗೆ Tally ಕೋರ್ಸ್ ಪ್ರಮಾಣಪತ್ರ ಹೊಂದಿರಬೇಕು.

ಹಿರಿಯ ಸಹಾಯಕರು: ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಓದುವ, ಬರೆಯ ಸಾಮರ್ಥ್ಯದ ಜೊತೆಗೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು. ಕಂಪ್ಯೂಟರ್ ಆಪರೇಷನ್ ಹಾಗೂ ಅಪ್ಲಿಕೇಷನ್‌ನಲ್ಲಿ ಜ್ಞಾನ ಹೊಂದಿರಬೇಕು.

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ವಾಹನ ಚಾಲಕರು: ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕಾನೂನಿನನ್ವಯ ಲಘು ಮತ್ತು ಭಾರೀ ವಾಹನ ಚಾಲನೆ ಪರವಾನಗಿ ಹೊಂದಿರಬೇಕು.

ಜವಾನ: ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಿತಿ: ಅರ್ಜಿಗಳನ್ನು ಭರ್ತಿ ಮಾಡಲು ನಿಗಧಿಪಡಿಸಿದ ಕೊನೆಯ ದಿನಾಂಕದ೦ದು ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವಂತೆ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ನಿಗಧಿತ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

 • ಸಾಮಾನ್ಯ ವರ್ಗ: ಕನಿಷ್ಟ 18 – ಗರಿಷ್ಟ 35
 • ಪ್ರವರ್ಗ 2(ಎ), 2(ಬಿ), 3(ಎ), 3(ಬಿ): ಕನಷ್ಟ 18 – ಗರಿಷ್ಟ 38
 • ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ ಮತ್ತು ಪ್ರವರ್ಗ-1: ಕನಿಷ್ಟ 18 – ಗರಿಷ್ಟ 40

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ವಯೋಮಿತಿ ಸಡಿಕೆ: ದೈಹಿಕ ಅಂಗವಿಕಲತೆ ಹೊಂದಿದ ಅಭ್ಯರ್ಥಿಗೆ 10 ವರ್ಷ, ವಿಧವೆ ಅಭ್ಯರ್ಥಿಗೆ 10 ವರ್ಷ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗೆ ಸರ್ಕಾರದ ಆದೇಶಾನುಸಾರ ‘ಸೇವೆ ಸಲ್ಲಿಸಿರುವಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು’ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 1,000 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ, ಮಾಜಿ ಸೈನಿಕ ಹಾಗೂ ವಿಧವೆ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಪಾವತಿಸಬೇಕಾದ ಅರ್ಜಿ ಶುಲ್ಕವನ್ನು Payment using Net Banking, credit card, Debit card, UPI ಮುಖಾಂತರ ಪೇಮೆಂಟ್ ಗೇಟ್‌ವೇ ಶುಲ್ಕವನ್ನು ಪಾವತಿಸಿ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಶುಲ್ಕವನ್ನು ಮಾರ್ಚ್ 16, 2023ರ ರಾತ್ರಿ 11.59ರ ಒಳಗಾಗಿ ಪಾವತಿಸಬೇಕು. ನಿರ್ದಿಷ್ಟ ಅವಧಿ ಕೊನೆಗೊಂಡ ನಂತರ ಅರ್ಜಿ ಶುಲ್ಕ ಪಾವತಿಗೆ ಅವಕಾಶ ಇರುವುದಿಲ್ಲ. ಅರ್ಜಿ ಶುಲ್ಕವನ್ನು ನಿಗಧಿಪಡಿಸಿದ ದಿನಾಂಕ, ಸಮಯದೊಳಗಾಗಿ ಸಲ್ಲಿಸದೇ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಆಯ್ಕೆ ವಿಧಾನ: ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960ರ ನಿಯಮ 18 (ಸಿ), (ಇ), (ಎಫ್) ಮತ್ತು (ಜಿ)ರಲ್ಲಿ ತಿಳಿಸಿರುವ ವಿಧಿ ವಿಧಾನಗಳನ್ನು ಮತ್ತು ಇಲಾಖೆಯಿಂದ ನೀಡಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡಿ ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆ ವಿಧಾನ ಕುರಿತ ಸಂಪೂರ್ಣ ವಿವರ ಅಧಿಸೂಚನೆಯಲ್ಲಿ ಗಮನವಿಟ್ಟು ಓದಿಕೊಳ್ಳಿ.

ಇದನ್ನೂ ಓದಿ: 3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಅರ್ಜಿ ಸಲ್ಲಿಕೆ ದಿನಾಂಕ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಖಾಲಿ ಹುದ್ದೆಗಳಿಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಮಾರ್ಚ್ 2, 2023ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಇದೇ ಮಾರ್ಚ್ 16, 2023೩ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವಾಗಿದೆ.

ಆನ್‌ಲೈನ್ ಅರ್ಜಿ ಸಲ್ಲಿಸಲು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಆನ್‌ಲೈನ್ ಅರ್ಜಿ ಸಲ್ಲಿಸಲು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವಿವಿಧ ವೃಂದದ ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

Agriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!