ಉದ್ಯೋಗ

ಆರೋಗ್ಯ ಇಲಾಖೆ ಹುದ್ದೆಗಳಿಗೆ SSLC, PUC ಡಿಪ್ಲೊಮಾ ಫಾರ್ಮಸಿ ಅಭ್ಯರ್ಥಿಗಳ ನೇಮಕಾತಿ | Health Department Recruitment 2023

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 550 ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು; ಹುದ್ದೆಗಳ ವಿವರ, ವಿದ್ಯಾರ್ಹತೆ, ಆದೇಶ ಪ್ರತಿ, ಜಿಲ್ಲಾವಾರು ಖಾಲಿ ಹುದ್ದೆಗಳ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 550 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗದ ವಿಶೇಷ ನೇಮಕಾತಿ ಸಮಿತಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಹೊರಡಿಸಿರುವ ಸೂಚನಾ ಪತ್ರವನ್ನು ಸಚಿವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಎರಡೂ ವೃಂದದ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕೂಡಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿಯಮಾನುಸಾರ ಅಲ್ಪಾವಧಿ ಟೆಂಡರ್ ಕರೆದು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಯಾವ ಜಿಲ್ಲೆಗೆ ಎಷ್ಟು ಹುದ್ದೆಗಳು ಮಂಜೂರಾಗಿವೆ ಎಂದು ಸಹ ಸಚಿವರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಕೇಂದ್ರ ರೈಲ್ವೆಯಲ್ಲಿ 2,422 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು ೫೫೦ ಹುದ್ದೆಗಳು ಖಾಲಿ ಇದ್ದು; ಈ ಪೈಕಿ 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗಶಾಲೆ ತಾಂತ್ರಿಕ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಫಾರ್ಮಸಿ ಅಧಿಕಾರಿ: 400 ಹುದ್ದೆಗಳ ನೇಮಕಾತಿ ನಡೆಯಲಿದ್ದು; ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೊಮಾ ಇನ್ ಫಾರ್ಮಸಿ ಹೊಂದಿರಬೇಕು ಹಾಗೂ ಕರ್ನಾಟಕ ಫಾರ್ಮಸಿ ಕೌನ್ಸಿಲ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿರಬೇಕು.

ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ: 150 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು; ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡುವವರು

  1. ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಎರಡು ವರ್ಷದ ಕರ್ನಾಟಕ ವೊಕೇಷನಲ್, ಶೈಕ್ಷಣಿಕ ಬೋರ್ಡ್‌ನಿಂದ ಡಿಪ್ಲೊಮಾ ಹೊಂದಿರಬೇಕು.
  2. ಅಥವಾ ಪಿಯುಸಿ (ವಿಜ್ಞಾನ), ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ-ವೈದ್ಯಕೀಯ ಮಂಡಳಿಯು ನಡೆಸುವ ಎರಡು ವರ್ಷದ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಹೊಂದಿರಬೇಕು.
  3. ಅಥವಾ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿಯು ನಡೆಸುವ ಮೂರು ವರ್ಷದ ವೈದ್ಯಕೀಯ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಡಿಪ್ಲೊಮಾ ಹೊಂದಿರಬೇಕು.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಕೇಂದ್ರ ರೈಲ್ವೆಯಲ್ಲಿ 2,422 ಹುದ್ದೆಗಳಿಗೆ ಅರ್ಜಿ ಆಹ್ವಾನ

ಫಾರ್ಮಸಿ ಅಧಿಕಾರಿ ಹಾಗೂ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳ ಜಿಲ್ಲಾವಾರು ವಿವರ:

 

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ವಿಶೇಷ ನೇಮಕಾತಿ ಕುರಿತು ಹಂಚಿಕೊಂಡಿರುವ ಆದೇಶ ಪ್ರತಿ ಓದಲು ಇಲ್ಲಿ ಕ್ಲಿಕ್ ಮಾಡಿ
ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!