ಸರಕಾರಿ ಯೋಜನೆ

ರೈತರು ಕೃಷಿ ಯಂತ್ರಗಳಿಗೆ ಉಚಿತ ಡಿಸೇಲ್ ಪಡೆಯಲು ಮೊಬೈಲ್ ಮೂಲಕವೇ ಹೆಸರು ನೋಂದಣಿ ಮಾಡುವುದು ಹೇಗೆ? | RaitaShakti Yojana fruits

WhatsApp Group Join Now
Telegram Group Join Now

ರಾಜ್ಯ ಸರಕಾರವು ರೈತಶಕ್ತಿ ಯೋಜನೆ ಮೂಲಕ ಪ್ರತಿ ರೈತರಿಗೆ 250 ರೂಪಾಯಿಯಿಂದ 1,250 ರೂಪಾಯಿ ವರೆಗೆ ಡೀಸೆಲ್ ಸಹಾಯಧನ ನೀಡುತ್ತದೆ. ಯಾವುದೇ ಅರ್ಜಿ ಸಲ್ಲಿಸದೇ ಈ ಸಹಾಯಧನವನ್ನು ಪಡೆಯಬಹುದು. ಆದರೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿದ್ದರೆ ಮಾತ್ರ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ರೈತರು ತಮ್ಮ ಮೊಬೈಲ್ ಮೂಲಕವೇ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳುವುದು ಹೇಗೆ ಎಂಬುವುದನ್ನು ಇಲ್ಲಿ ತಿಳಿಸಲಾಗಿದೆ…

ರಾಜ್ಯ ಸರಕಾರ ರೈತಶಕ್ತಿ ನೂತನ ಯೋಜನೆಯನ್ನು ಘೋಷಣೆ ಮಾಡಿದ್ದು; ಇದೇ ಜನವರಿ 31ಕ್ಕೆ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಮೂಲಕ ರೈತರಿಗೆ ಉಚಿತ ಡಿಸೇಲ್ ಪಡೆಯಲು ಸಹಾಯಧನವನ್ನು ನೇರ ಅವರ ಬ್ಯಾಂಕ್ ಖಾತೆ ಜಮಾ ಮಾಡಲಿದೆ. ರೈತರ ಮೇಲಿನ ಆರ್ಥಿಕ ಹೊರೆಯನ್ನು ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23ನೇ ಸಾಲಿನ ಬಜೆಟ್‌ನಲ್ಲಿ ರೈತಶಕ್ತಿ ಯೋಜನೆಯನ್ನು ಘೋಷಿಸಲಾಗಿತ್ತು. ಕೃಷಿಯಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸುವುದು  ಹಾಗೂ ಇಂಧನದ ವೆಚ್ಚದ ಹೊರೆ ಕಡಿಮೆ ಮಾಡುವುದು ಈ ಯೋಜನೆ ಉದ್ದೇಶವಾಗಿದೆ. ಇದೇ ತಿಂಗಳಾಂತ್ಯಕ್ಕೆ ಈ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ ಐದು ಎಕರೆಗೆ 1,250 ರೂಪಾಯಿ ವರೆಗೆ ಡೀಸೆಲ್ ಸಹಾಯಧನ ಒದಗಿಸಲಾಗುತ್ತದೆ. ಅರ್ಹ ರೈತರಿಗೆ ಸಹಾಯಧನದ ಮೊತ್ತವನ್ನು ಸರ್ಕಾರದ ಡಿಬಿಟಿ ಪೋರ್ಟಲ್ ಮೂಲಕ ಆಧಾರ್ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ಜಮಾ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರೈತಶಕ್ತಿ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿದ್ದು ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ. ಹೀಗಾಗಿ ಈ ಯೋಜನೆಯ ಉಪಯೋಗ ಪಡೆಯಲು ರೈತರು ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ನೋಂದಣಿಯಾಗುವುದು ಕಡ್ಡಾಯವಾಗಿದೆ.

ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ಫ್ರೂಟ್ ಫೋರ್ಟಲ್ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕೆ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ಹೀಗೆ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾದ ರೈತರಿಗೆ ನೇರ ವರ್ಗಾವಣೆ (DBT) ಮೂಲಕ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಲಿದೆ. ಫ್ರೂಟ್ ಪೋರ್ಟಲ್‌ನಲ್ಲಿ ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಈ ವರ್ಷ ಫ್ರೂಟ್ಸ್ ಪೋರ್ಟಲ್‌ನಲ್ಲಿ ನೋಂದಣಿಯಾದ ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತರಿಗೆ ನೇರ ವರ್ಗಾವಣೆ ಮೂಲಕ ಹಣ ವರ್ಗಾವಣೆಯಾಗಲಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ನಾಟಿಕೋಳಿ ವಿತರಣೆ | ಪ್ರತಿಯೊಬ್ಬ ಫಲಾನುಭವಿಗೆ 2,600 ರೂಪಾಯಿ ಕೋಳಿಗಳು

ಏನಿದು ಫ್ರೂಟ್ಸ್ ನೋಂದಣಿ?

Fruits ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಷನ್ ಸಿಸ್ಟಂ ಎಂದರ್ಥ. ಇದೊಂದು ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ. ರಾಜ್ಯದ ಇ-ಆಡಳಿತ ಇಲಾಖೆಯು ಎನ್‌ಐಸಿ ಮೂಲಕ ರಾಜ್ಯದ ರೈತರ ವಿವರಗಳನ್ನು ದಾಖಲಿಸಲು ಜೂನ್ 2018ರಂದು ಸದರಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಪ್ರತಿಯೊಬ್ಬ ರೈತರಿಗೆ ಒಂದು ಪ್ರತ್ಯೇಕ ಗುರುತಿನ ಸಂಖ್ಯೆಯನ್ನು ನೀಡುವುದು ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ನೋಂದಣಿಯ ಉದ್ದೇಶವಾಗಿದೆ. ಸದರಿ ಗುರುತಿನ ಸಂಖ್ಯೆಯ ಆಧಾರದಲ್ಲಿ ರೈತರು Fruits ತಂತ್ರಾಂಶ ಬಳಸುವ ಎಲ್ಲಾ ಇಲಾಖೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾದರೆ ಸರಕಾರದಿಂದ ಸಿಗುವಂತಹ ಸಹಾಯಧನ, ಬಿತ್ತನೆ ಬೀಜ, ಕೀಟನಾಶಕ, ಸಾವಯವ ಗೊಬ್ಬರ, ಕೃಷಿ ಉಪಕರಣ, ಸಸ್ಯ ಸಂರಕ್ಷಣಾ ಉಪಕರಣಗಳನ್ನೆಲ್ಲ ಪಡೆಯಲು ಪದೇ ಪದೆ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ. ನೋಂದಣಿಯಾದ ರೈತರಿಗೆ ಯೂನಿಕ್ ನಂಬರ್ ಇರುವ ಕಾರ್ಡ್ ಸಿಗಲಿದ್ದು, ಆ ನಂಬರ್ ಹೇಳಿದರೆ ಸಾಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಗಳ ಎಲ್ಲ ಸೌಲಭ್ಯಗಳನ್ನು ಪಡೆಯಬಹುದು. ಅಂತೆಯೇ ರೈತಶಕ್ತಿ ಯೋಜನೆ ಡಿಸೇಲ್ ಸಹಾಯಧನ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡ ರೈತರ ಬ್ಯಾಂಕ್ ಖಾತೆಗೆ ಮಾತ್ರ ಜಮೆಯಾಗಲಿದೆ.

ಇದನ್ನೂ ಓದಿ: ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ನೋಂದಣಿ ಹೇಗೆ?

ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸುಲಭವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದು. ಆಧಾರ್ ನಂಬರ್ ಹಾಗೂ ಆಧಾರ್ ನಂಬರ್‌ನಲ್ಲಿರುವಂತೆ ಹೆಸರು ಭರ್ತಿ ಮಾಡಿ, ಆಧಾರ್ ವಿವರ ದಾಖಲಿಸಿದರೆ ಒಟಿಪಿ ಬರುತ್ತದೆ. ಮುಂದುವರಿದು ಇತರೆ ವಿವರ ದಾಖಲಿಸಬಹುದು.

ಯಾವುದೇ ಯೋಜನೆಯಡಿ ಸರಕಾರದಿಂದ ಸವಲತ್ತುಗಳನ್ನು ಪಡೆಯಲು ಫ್ರೂಟ್ಸ್ ಐಡಿ ಕಡ್ಡಾಯವಾಗಿದೆ. ಆದ್ದರಿಂದ ಇನ್ನು ಸಹ ಮಾಡಿಸದಿರುವ ರೈತರು ಆದಷ್ಟು ಬೇಗ ಅಗತ್ಯ ದಾಖಲೆಗಳನ್ನು ನೀಡಿ, ಈ ತಂತ್ರಾಂಶದಡಿ ಹೆಸರನ್ನು ನೋಂದಾಯಿಸಿಕೊಳ್ಳಿ. ಇದು ರೈತರಿಗೆ ಎಲ್ಲ ರೀತಿಯಿಂದಲೂ ಅನುಕೂಲವಾಗಲಿದೆ.

ಇದನ್ನೂ ಓದಿ: ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಮೊಬೈಲ್‌ನಲ್ಲೇ ನೋಂದಣಿ ಮಾಡಿಕೊಳ್ಳಿ…

ರೈತರು ತಮ್ಮ ಮೊಬೈಲ್ ಮೂಲಕವೇ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಹಾಗೆ ನೋಂದಣಿ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿದರೆ https://fruits.karnataka.gov.in/OnlineUserLogin.aspx ಫ್ರೂಟ್ಸ್ ತಂತ್ರಾಂಶದ ಖಾತೆ ತೆರೆ/Create Account  ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಮೇಲೆ ಕನ್ನಡ/ಇಂಗ್ಲಿಷ್ ಆಯ್ಕೆಗಳಿದ್ದು; ರೈತರು ಸುಲಭ ಬಳಕೆಗೆ ಕನ್ನಡ ಆಯ್ಕೆ ಮಾಡಿಕೊಳ್ಳಬೇಕು. ನಂತರ ಕೆಳಗೆ ಆಧಾರ್ ಸಂಖ್ಯೆ ಹಾಗೂ ಆಧಾರ್ ಕಾರ್ಡ್‌ನಲ್ಲಿ ಇರುವಂತೆ ಹೆಸರನ್ನು ನೋಂದಾಯಿಸಿ ಪರಿಶೀಲಿಸು/Verify-> ಮೇಲೆ ಕ್ಲಿಕ್ ಮಾಡಬೇಕು.

ಬಳಿಕ ಮೊಬೈಲ್ ನಂಬರ್ ನೋಂದಾಯಿಸಿ ನಿಮ್ಮಲ್ಲಿ ಇಮೇಲ್ ಐಡಿ ಇದ್ದರೆ Yes/ಎಸ್ ಎಂದು, ಇರದಿದ್ದರೆ No/ನೋ ಎಂದು ಟಿಕ್ ಮಾಡಬೇಕು. ಬಳಿಕ ಕೆಳಗೆ ಕಾಣುವ Proceed/ಮುಂದುವರೆ ಮೇಲೆ ಒತ್ತಬೇಕು. ಆಗ ನಿಮ್ಮ ಮೊಬೈಲ್‌ಗೆ ಎಸ್‌ಎಂಎಸ್ ಮೂಲಕ ಒಟಿಪಿ ಬರುತ್ತದೆ. ಆ ಒಟಿಪಿಯನ್ನು ನೋಂದಾಯಿಸಿದರೆ ನಿಮ್ಮದೇ ಆದ ಪಾಸ್‌ವರ್ಡ್ ಕ್ರಿಯೇಟ್ ಮಾಡಿಕೊಳ್ಳಲು ಕೇಳುತ್ತದೆ. ಪಾಸ್‌ವರ್ಡ್ ಕ್ರಿಯೇಟ್ ಮಾಡಿಕೊಂಡ ನಂತರ ಅಲ್ಲಿ ಕೇಳಲಾದ ಮಾಹಿತಿಗಳನ್ನು ಒಂದೊಂದಾಗಿ ಭರ್ತಿ ಮಾಡುತ್ತಾ ಫ್ರೂಟ್ಸ್ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಂತಿಮವಾಗಿ ನೀವು ಕ್ರಿಯೇಟ್ ಮಾಡಿಕೊಂಡ ಪಾಸ್‌ವರ್ಡ್ ಅನ್ನು ನೆನಪಿಟ್ಟುಕೊಳ್ಳಬೇಕು.

ಇದನ್ನೂ ಓದಿ: ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆ: ರೈತರ ಖಾತೆಗೆ ನೇರ ಹಣ ಜಮೆ

ಹಾಗೊಂದು ವೇಳೆ ಫ್ರೂಟ್ಸ್ ತಂತ್ರಾಂಶದಲ್ಲಿ ಸ್ವತಃ ನೀವೇ ಹೆಸರು ನೋಂದಾಯಿಸಿಕೊಳ್ಳಲು ಸಮಸ್ಯೆಯಾಗುತ್ತಿದ್ದರೆ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಗಳು ಹಾಗೂ ಪಾಸ್‌ಪೋರ್ಟ್ ಅಳತೆಯ ಫೋಟೋ, ಪರಿಶಿಷ್ಟ ಜಾತಿ ಮತ್ತು ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯ ದಾಖಲೆಗಳನ್ನು ನೀಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

ಫ್ರೂಟ್ಸ್ ತಂತ್ರಾಂಶದಲ್ಲಿ ಒಮ್ಮೆ ನೋಂದಣಿಯಾದರೆ ಡೀಸೆಲ್ ಸಹಾಯಧನವೂ ಸೇರಿದಂತೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಇಲಾಖೆಗಳ ಎಲ್ಲ ಸೌಲಭ್ಯಗಳನ್ನು ಪಡೆಯಬಹುದು. ಪ್ರತಿಯೊಂದು ಯೋಜನೆಯ ಸಹಾಯಧನ ನೇರ ರೈತರ ಬ್ಯಾಂಕ್ ಖಾತೆಗೇ ಜಮಾ ಆಗುತ್ತದೆ.

ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ 13ನೇ ಕಂತಿನ ಹಣ ನಿಮಗೆ ಸಿಗುತ್ತೋ? ಇಲ್ವೋ? ಮೊಬೈಲ್‌ನಲ್ಲೇ ಚೆಕ್ ಮಾಡಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!