ಸರಕಾರಿ ಯೋಜನೆ

Free Bus Travel For Women: ಜೂನ್ 1ರಿಂದ ಮಹಿಳೆಯರಿಗೆ ಸರಕಾರಿ ಬಸ್ ಪ್ರಯಾಣ ಸಂಪೂರ್ಣ ಉಚಿತ

WhatsApp Group Join Now
Telegram Group Join Now

ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಜೂನ್ 1ರಿಂದ ಯಾವುದೇ ಶರತ್ತುಗಳಿಲ್ಲದೇ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಸಂಪೂರ್ಣ ಉಚಿತವಾಗಿ ಪ್ರಯಾಣಿಸಬಹುದು ಎಂದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದಂತಾಗಿದೆ….

ಕಾAಗ್ರೆಸ್ ಸರಕಾರದ ಐದು ‘ಗ್ಯಾರಂಟಿ’ಗಳ ಪೈಕಿ ಅತೀ ಹೆಚ್ಚು ರಂಕಲು ಸೃಷ್ಟಿದ್ದ ಎರಡನೇ ಗ್ಯಾರಂಟಿ ‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ’ ಯೋಜನೆಗೆ ಕೊನೆಗೂ ಅಧಿಕೃತ ಅಂಕಿತ ಬಿದ್ದಿದೆ. ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕರ್ನಾಟಕ ರಾಜ್ಯದ ಸರಕಾರಿ ಬಸ್‌ಗಳಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು (ಮೇ 30) ಸಭೆ ನಡೆಸಿದ ಸಾರಿಗೆ ಸಚಿವರು ರಾಜ್ಯದಲ್ಲಿ ಜೂನ್ 1ರಿಂದ ರಾಜ್ಯದ ಎಲ್ಲ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಘೋಷಿಸಿದ್ದಾರೆ.

Karnataka State Govt Recruitment 2023 | ರಾಜ್ಯ ಸರಕಾರದ 43 ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ… 

ಷರತ್ತುಗಳೇನು?

ಕಾಂಗ್ರೆಸ್ ಪಕ್ಷ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೇರಿದ ತಕ್ಷಣವೇ ಚುನಾವಣೆ ವೇಳೆಯಲ್ಲಿ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಚರ್ಚೆ ಶುರುವಾಗಿತ್ತು. ವಿರೋಧ ಪಕ್ಷಗಳು ಮಾತ್ರವಲ್ಲದೇ ಸಾರ್ವಜನಿಕರು ಕೂಡ ಗ್ಯಾರಂಟಿ ಯೋಜನೆಗೆ ಸಂಬ೦ಧಿಸಿದ೦ತೆ ತಕರಾರು ಶುರು ಮಾಡಿದ್ದರು. ಕೆಲವರಂತೂ ‘ನಾವು ಸೂತಾರಾಂ ಕರೆಂಟ್ ಬಿಲ್ ಕಟ್ಟಂಗಿಲ್ಲ’, ‘ನಾವು ಯಾವುದೇ ಕಾರಣಕ್ಕೂ ಬಸ್ ಟಿಕೇಟ್ ತಗಳಂಗಿಲ್ಲ’ ಅಂತೆಲ್ಲ ಕಿರಿಕ್ಕು ಶುರು ಮಾಡಿದ್ದರು.

ಇಂತಹ ತಕರಾರು, ವಿವಾದಗಳಿಂದಾಗಿಯೇ ‘ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಅನ್ವಯ’ ಎಂಬ ಮಾತು ಕೇಳಿ ಬಂದಿತ್ತು. ಈ ಷರತ್ತುಗಳ ಊಹಾಪೋಹ ಮತ್ತೊಂದು ವಿವಾದಕ್ಕೂ ಕಾರಣವಾಗಿತ್ತು. ಇದೀಗ ಎಲ್ಲ ಪುಕಾರು, ಊಹಾಪೋಹಗಳಿಗೆ ಉತ್ತರವೆಂಬ೦ತೆ ಗ್ಯಾರ೦ಟಿ ಯೋಜನೆಗಳಲ್ಲಿ ಒಂದಾದ ‘ಮಹಿಳೆಯರಿಗೆ ಉಚಿತ ಪ್ರಯಾಣ’ಕ್ಕೆ ಯಾವುದೇ ಷರತ್ತುಗಳು ಅನ್ವಯವಾಗುವುದಿಲ್ಲ. ಇದು ಸಂಪೂರ್ಣ ಉಚಿತ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

PM Kisan Monsoon Gift: ಮುಂಗಾರು ಬಿತ್ತನೆಗೆ ಸಣ್ಣ ರೈತರ ಖಾತೆಗೆ 2,000 ರೂಪಾಯಿ ಪಿಎಂ ಕಿಸಾನ್ ಗಿಫ್ಟ್

ಹೆಂಗಸರಿಗೆ ಟಿಕೇಟ್ ಇಲ್ಲ!

ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್ ವಿ ಪ್ರಸಾದ್, ಬಿಎಂಟಿಸಿ ಮತ್ತು ಕೆಎಸ್‌ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ, ಕೆಕೆಆರ್ ಟಿ ಸಿ ಎಂಡಿ ರಾಚಪ್ಪ ಹಾಗೂ ವಾಯುವ್ಯ ಸಾರಿಗೆ ಎಂಡಿ ಭರತ್ ಹಾಗೂ ನಾಲ್ಕು ನಿಗಮಗಳ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಜೂನ್ 1ರಿಂದ ಯಾವುದೇ ಶರತ್ತುಗಳಿಲ್ಲದೇ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಸಂಪೂರ್ಣ ಉಚಿತವಾಗಿ ಪ್ರಯಾಣಿಸಬಹುದು ಎಂದಿದ್ದಾರೆ. ಇದರೊಂದಿಗೆ ಕಾಂಗ್ರೆಸ್​ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದಂತಾಗಿದೆ.

ಕೊರೋನಾ ಸಂದರ್ಭದಲ್ಲಾದ ನಷ್ಟದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲೇ ಪ್ರತಿಷ್ಠಿತ ಸಂಸ್ಥೆಯಾಗಿದೆ. 4 ಸಾರಿಗೆ ನಿಗಮಗಳಿಗೆ 350ಕ್ಕೂ ಹೆಚ್ಚು ಪ್ರಶಸ್ತಿಗಳು ಬಂದಿವೆ. ನಾಲ್ಕು ಸಾರಿಗೆ ನಿಗಮಗಳಲ್ಲಿ 240 ಘಟಕಗಳು ಕಾರ್ಯನಿರ್ವಹಣೆ ಮಾಡುತ್ತಿವೆ. 23,978 ವಾಹನಗಳಿವೆ, 1,04,450ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ನಿತ್ಯ ರಾಜ್ಯಾದ್ಯಂತ 82,51 ಲಕ್ಷ ಪ್ರಯಾಣಿಕರು ಓಡಾಡುತ್ತಾರೆ. ನಾಲ್ಕು ನಿಗಮಗಳ ನಿತ್ಯದ ಒಟ್ಟು ಆದಾಯ 2,31,332 ಲಕ್ಷ ರೂಪಾಯಿ ಇದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ:

ಜೂನ್‌ನಿಂದ ಮತ್ತೆ BPL ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ | ನಿಮ್ಮೂರಿನ BPL ಕಾರ್ಡ್ ದಾರರ ಪಟ್ಟಿ ಇಲ್ಲಿ ಚೆಕ್ ಮಾಡಿ

5 ಲಕ್ಷ ರೂಪಾಯಿ ಶೂನ್ಯ ಬಡ್ಡಿ ಬೆಳೆಸಾಲ | ರೈತರು ಸಾಲ ಪಡೆಯಲು ಏನು ಮಾಡಬೇಕು?

ಇಲ್ಲಿದೆ ಅಡಿಕೆ ತೋಟದ ಅಧಿಕ ಇಳುವರಿಯ ಗುಟ್ಟು | ಈ ಸರಳ ವಿಧಾನ ಎಲ್ಲರೂ ಅನುಸರಿಸಬಹುದು

ಬೇಸಿಗೆಗೆ ಅಡಿಕೆ ತೋಟಕ್ಕೆ ಜೀವಾಮೃತವೇ ಜೀವಾಳ | ಬೇಸಿಗೆಗೆ ತಪ್ಪದೇ ಅನುಸರಿಸಿ ಈ ವಿಧಾನ

4-5 ವರ್ಷದಲ್ಲೇ ಫಸಲು ನೀಡುವ ಅಪ್ಪೆಮಿಡಿ ಮಾವು ತಳಿ ಅಭಿವೃದ್ಧಿ | ರೈತರಿಗೆ ವರದಾನ ಈ ಮಾವು

ಹಸು ಎಮ್ಮೆಗಳ ಸರ್ವ ರೋಗಕ್ಕೆ ಇಲ್ಲಿದೆ ಪವರ್‌ಫುಲ್ ನಾಟಿ ಔಷಧಿ | ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಕುರಿ ಸೊಸೈಟಿ ರಚನೆಗೆ ರೂ.5 ಲಕ್ಷ ಪ್ರೋತ್ಸಾಹ ಧನ | ಸದಸ್ಯರಿಗೆ ಸಿಗಲಿದೆ ಕುರಿ ನಿಗಮದಿಂದ ಭರ್ಜರಿ ಸೌಲಭ್ಯ

ಹಸುವಿನ ಹಾಲಿನ ಡಿಗ್ರಿ ಹೆಚ್ಚಿಸಲು ಈ ವಿಧಾನ ಅನುಸರಿಸಿ…

ಹಸು, ಎಮ್ಮೆ ಗಂಜಲದಿಂದ ನೀವೆ ತಯಾರಿಸಿಕೊಳ್ಳಿ ಸಾವಯವ ಯೂರಿಯಾ ಗೊಬ್ಬರ

ಹಸು, ಎಮ್ಮೆಗಳ ಹಾಲು ಹೆಚ್ಚಿಸಲು ಒಂದು ಹಿಡಿ ಅಜೋಲ್ಲಾ ಸಾಕು | ಇದು ಹಸು, ಎಮ್ಮೆ, ಕೋಳಿ, ಕುರಿ-ಮೇಕೆಗಳ ಟಾನಿಕ್

 

ಜಾನುವಾರುಗಳ ಮೃಷ್ಟಾನ್ನ ರಸಮೇವು | ಬೇಸಿಗೆಗೆ ಮೇವಿನ ಕೊರತೆ ನೀಗುವ ಸೈಲೇಜ್ ತಯಾರಿಕೆ ಹೇಗೆ?

ಈ ಬೆಳೆಯಿಂದ ಒಂದು ಎಕರೆಯಲ್ಲಿ ತಿಂಗಳಿಗೆ 2 ಲಕ್ಷ ಆದಾಯ | ಸಣ್ಣ ರೈತರ ಬದುಕು ಬಂಗಾರವಾಗಿಸುವ ಬೆಳೆ

ನಿರಂತರ ಉಚಿತ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!