ಶಿಕ್ಷಣ ಸುದ್ದಿಸರಕಾರಿ ಯೋಜನೆ

Free IAS, KAS Coaching scheme for OBC students : ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸರ್ಕಾರದಿಂದ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ | Online Applications For Free Upsc Kpsc Banking Exam Coaching

WhatsApp Group Join Now
Telegram Group Join Now

UPSC, KAS, ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆರ್ಥಿಕ ಸಹಾಯ ಮಾಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ…

Free Coaching scheme for OBC students : ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (Competitive Exams) ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಯಾರಿ ನಡೆಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಿ ನೀವು ಅರ್ಹರೆನಿಸಿದರೆ ಈಗಲೇ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಯಾರು ಅರ್ಹರು? (Eligibility conditions) 

  • ಅಭ್ಯರ್ಥಿಗಳು ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 3A, 3Bಗಳಿಗೆ ಸೇರಿದ ಅಭ್ಯರ್ಥಿಗಳಾಗಿರಬೇಕು.
  • ಈ ಮೊದಲು ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯ ಪಡೆದಿರಬಾರದು.
  • ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು – ಗರಿಷ್ಠ ರೂ.5.00 ಲಕ್ಷಗಳು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ (Selection procedure) : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಏಇಂ ವತಿಯಿಂದ ಅಇಖಿ ಪರೀಕ್ಷೆ ನಡೆಸಿ, ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ತರಬೇತಿ ಎಲ್ಲಿ? : ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯನ್ನು ದೆಹಲಿ, ಹೈದೆರಾಬಾದ್, ಬೆಂಗಳೂರು, ಚೆನ್ನೈ ಮೊದಲಾದ ನಗರಗಳಲ್ಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ ಕೊಡಿಸಲಾಗುತ್ತದೆ. ಉಚಿತ ತರಬೇತಿ ಪಡೆಯಲು ಅವರು ಕೋಚಿಂಗ್ ಪಡೆಯುವ ನಗರಗಳ ಆಧಾರದ ಮೇಲೆ ಹಣ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

  1. ಆಧಾರ್ ಕಾರ್ಡ್
  2. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
  3. ಪದವಿ ಪ್ರಮಾಣ ಪತ್ರ
  4. ಜಾತಿ ಪ್ರಮಾಣ ಪತ್ರ
  5. ಆದಾಯ ಪ್ರಮಾಣ ಪತ್ರ
  6. ಇ-ಮೇಲ್ ವಿಳಾಸ
  7. ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ? (Application procedure) : ಕೆಳಗೆ ನೀಡಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ನಂತರ ನಿಮ್ಮ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರನ್ನು ನಮೂದಿಸಿ ಮುಂದುವರೆಯಿರಿ. ನಂತರ ವೆಬ್‌ಪುಟದಲ್ಲಿ ಕೇಳಲಾದ ನಿಖರ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2023
  • ಸಾಮಾನ್ಯ ಪ್ರವೇಶ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ.

ಅರ್ಜಿ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ಸಹಾಯವಾಣಿ : 8050770004

Free Coaching scheme for OBC students, Online Applications For Free Upsc Kpsc Banking Exam Coaching

WhatsApp Group Join Now
Telegram Group Join Now

Related Posts

error: Content is protected !!