Student Newsವಿದ್ಯಾರ್ಥಿವೇತನ

Free IAS, KAS Coaching: ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸರ್ಕಾರದಿಂದ ಉಚಿತ ತರಬೇತಿ ನೀಡಲು ಅರ್ಜಿ ಅಹ್ವಾನ | Online Applications For Free Upsc Kpsc Banking Exam Coaching

WhatsApp Group Join Now
Telegram Group Join Now

UPSC, KAS ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಆರ್ಥಿಕ ಸಹಾಯ ಮಾಡಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ…

Free Coaching scheme for SC / ST students : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (Competitive Exams) ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಯಾರಿ ನಡೆಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಿ ನೀವು ಅರ್ಹರೆನಿಸಿದರೆ ಈಗಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: ಗೃಹಲಕ್ಷ್ಮಿ, ಅನ್ನಭಾಗ್ಯ, ಪಿಂಚಣಿ ಹಣ ಪ್ರತಿ ತಿಂಗಳು ಈ ದಿನ ಗ್ಯಾರಂಟಿ ಜಮಾ : ಪಕ್ಕಾ ಡೇಟ್ ಫಿಕ್ಸ್ | Gruhalakshmi, Annabhagya Pension Money Deposit Date fix

ಅರ್ಜಿ ಸಲ್ಲಿಸಲು ಯಾರು ಅರ್ಹರು? (Eligibility conditions) : ಅಭ್ಯರ್ಥಿಗಳು ಪ. ಜಾತಿ, ಪ. ಪಂಗಡ (SC / ST Category) ವರ್ಗಕ್ಕೆ ಸೇರಿರಬೇಕು. ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯ ಪಡೆದಿರಬಾರದು.

ಆಯ್ಕೆ ಪ್ರಕ್ರಿಯೆ ಮತ್ತು ಯೋಜನೆಯ ವಿವರ (Selection procedure and scheme details) : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ KEA ವತಿಯಿಂದ CET ಪರೀಕ್ಷೆ ನಡೆಸಿ, ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯನ್ನು ದೆಹಲಿ, ಹೈದೆರಾಬಾದ್, ಬೆಂಗಳೂರು, ಚೆನ್ನೈ ಮೊದಲಾದ ನಗರಗಳಲ್ಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆಯಿ೦ದ ಕೊಡಿಸಲಾಗುತ್ತದೆ. ಉಚಿತ ತರಬೇತಿ ಪಡೆಯಲು ಅವರು ಕೋಚಿಂಗ್ ಪಡೆಯುವ ನಗರಗಳ ಆಧಾರದ ಮೇಲೆ ಈ ಕೆಳಗಿನಂತೆ ಹಣ ನೀಡಲಾಗುತ್ತದೆ.

 • ದೆಹಲಿ : 10,000 ರೂಪಾಯಿ
 • ಹೈದರಾಬಾದ್ : 8,000 ರೂಪಾಯಿ
 • ಕರ್ನಾಟಕ : 6,000 ರೂಪಾಯಿ
 • ಚೆನ್ನೈ : 5,000 ರೂಪಾಯಿ

ಇದನ್ನೂ ಓದಿ: ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ: ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ…

ಉಚಿತ ತರಬೇತಿ ಯೋಜನೆಯ ಅವಧಿ : ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡ ಯಾವುದಾದರು ಒಂದು ಸ್ಪರ್ಧಾತ್ಮಕ ಪರೀಕ್ಷೆಗೆ ಎಷ್ಟು ತಿಂಗಳು ತರಬೇತಿ ಸೌಲಭ್ಯ ನೀಡಲಾಗುತ್ತದೆ ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.

 • UPSC : 9 ತಿಂಗಳು
 • KPSC : 7 ತಿಂಗಳು
 • SSC : 3 ತಿಂಗಳು
 • Banking : 3 ತಿಂಗಳು
 • RRB : 3 ತಿಂಗಳು
 • Group C : 3 ತಿಂಗಳು
 • ಕೆಳಗೆ ನೀಡಿರುವ ಸಮಾಜ ಕಲ್ಯಾಣ ಇಲಾಖೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
 • ನಂತರ ‘Student Login’ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
 • ಬಳಿಕ ಮತ್ತೊಂದು ಹೊಸ ವೆಬ್‌ಪೇಜ್ ಓಪನ್ ಆಗಿ ‘Create Account’ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
 • ಆ ವೆಬ್‌ಪುಟದಲ್ಲಿ ಕೇಳಲಾದ ನಿಖರ ಮಾಹಿತಿ ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳಿ. ನಂತರ ನೀವು ಬಯಸುವ ಪರೀಕ್ಷೆ ತರಬೇತಿಗೆ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: ಕೆಎಂಎಫ್ ಜಿಲ್ಲಾ ಹಾಲು ಒಕ್ಕೂಟದ ವಿವಿಧ ಹುದ್ದೆಗಳ ಹೊಸ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು : ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇದೇ ನವೆಂಬರ್ 29, 2023 ಕೊನೆಯ ದಿನಾಂಕವಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ.

WhatsApp Group Join Now
Telegram Group Join Now

Related Posts

error: Content is protected !!