ಸರಕಾರಿ ಯೋಜನೆ

ಈ ರೈತರಿಗೆ ಗಂಗಾಕಲ್ಯಾಣ ಬೋರ್‌ವೆಲ್ ಕೊರೆಸಲು 2 ಲಕ್ಷ ರೂಪಾಯಿ ಸಹಾಯಧನ | ಮಾರ್ಚ್ 2ರೊಳಗೆ ಅರ್ಜಿ ಸಲ್ಲಿಸಿ | Ganga Kalyana Scheme

WhatsApp Group Join Now
Telegram Group Join Now

ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿ ರೈತರಿಗೆ ಬೋರ್‌ವೆಲ್ ಕೊರೆಸಲು ೨ ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಹರು? ಅರ್ಜಿ ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ…

ಸಣ್ಣ ಮತ್ತು ಅತೀ ಸಣ್ಣ ರೈತರ ಜನಪ್ರಿಯ ನೀರಾವರಿ ಯೋಜನೆಯಾದ ಗಂಗಾ ಕಲ್ಯಾಣ ಯೋಜನೆಯಡಿ ಬೋರ್‌ವೆಲ್ ಸಹಾಯಧನಕ್ಕೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಅರಸು ನಿಗಮದಿಂದ ವಿವಿಧ ಜಾತಿ, ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು; ಇದೀಗ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಆಯವ್ಯಯದಲ್ಲಿ ಒದಗಿಸುವ ಅನುದಾನದಿಂದ ಉಪ್ಪಾರ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಸೌಲಭ್ಯ ಪಡೆಯಬಹುದು.

ಇದನ್ನೂ ಓದಿ: ಜನವರಿ 28ಕ್ಕೆ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ ಬರುವ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಹೊಂದಿಲ್ಲದಿದ್ದಲ್ಲಿ ನೀರಾವರಿ ಸೌಲಭ್ಯವನ್ನು ಒದಗಿಸಿ ಕೃಷಿ ಅಭಿವೃದ್ಧಿಗೆ ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಫಲಾನುಭವಿ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ನೀಡಲಾಗುವ ಈ ಘಟಕದ ವೆಚ್ಚವು ಎರಡೂವರೆ ಲಕ್ಷ ರೂಪಾಯಿ (2.50 ಲಕ್ಷ) ಆಗಿರುತ್ತದೆ. ಹೆಚ್ಚುವರಿ ಹಣದ ಅಗತ್ಯವಿದ್ದಲ್ಲಿ ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮೂರು ವರ್ಷಗಳ ಮರುಪಾವತಿ ಅವಧಿಯೊಂದಿಗೆ ೫೦,೦೦೦ ರೂಪಾಯಿಯನ್ನು ಸಾಲದ ರೂಪದಲ್ಲಿ ಬ್ಯಾಂಕಿನಿಂದ ನೀಡಲಾಗುವುದು.

ಯಾರೆಲ್ಲ ಅರ್ಹರು?

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪ್ರವರ್ಗ 1ರಡಿಯಲ್ಲಿ ಬರುವ ಕ್ರಮ ಸಂಖ್ಯೆ ಪ್ರವರ್ಗ-1ರ 53 (ಎ) ಯಿಂದ 53(ವಿ) ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 98,000  ರೂಪಾಯಿ ಮೀರಿರಬಾರದು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷಗಳ ಮಿತಿಯೊಳಗಿರಬೇಕು. ಮಹಿಳೆಯರಿಗೆ ಈ ಯೋಜನೆಯಲ್ಲಿ ಶೇ.33 ರಷ್ಟು ಮೀಸಲು ನಿಗದಿಪಡಿಸಲಾಗಿದೆ. ಅಂಗವಿಕಲರಿಗೆ ಈ ಯೋಜನೆಯಲ್ಲಿ ಶೇ.5ರಷ್ಟು ಮೀಸಲು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು?

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ರೈತರ ಬಳಿ ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಝರಾಕ್ಸ್ ಪ್ರತಿ, ಜಮೀನು (RTC) ದಾಖಲೆ ಬೇಕು. ಅರ್ಜಿದಾರರು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರುವ ಬಗ್ಗೆ ಕಂದಾಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಹೊಂದಿರಬೇಕು.

ಉಚಿತ ಕೊಳವೆ ಬಾವಿ ಕೊರೆಸಲು ಒಂದೇ ಸ್ಥಳಕ್ಕೆ ಹೊಂದಿಕೊಂಡಿರುವಂತೆ ಕನಿಷ್ಠ ಎರಡು ಎಕರೆ ಜಮೀನು ಹೊಂದಿರಬೇಕು. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ಒಂದು ಎಕರೆ ಜಮೀನು ಹೊಂದಿದ್ದರೆ ಸಾಕು.

ಇದನ್ನೂ ಓದಿ: ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ಅರ್ಜಿ ಎಲ್ಲಿ ಸಲ್ಲಿಸಬೇಕು?

ಸೇವಾಸಿಂಧು ತಂತ್ರಾಂಶದಲ್ಲಿ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ಅರ್ಹ ರೈತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 2, 2023 ರೊಳಗಾಗಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಸಹಾಯವಾಣಿ ಸಂಖ್ಯೆ 7026288888ಗೆ ಬೆಳಗ್ಗೆ 10 ರಿಂದ ಸಾಯಂಕಾಲ 5.30 ಗಂಟೆಯವರೆಗೆ ಕರೆ ಮಾಡಬಹುದು.

ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ | 1.4 ಲಕ್ಷ ವಿದ್ಯಾರ್ಥಿಗಳು ನಿರೀಕ್ಷೆಯಲ್ಲಿ

SSLC ಪಾಸಾದವರಿಂದ HAL ಫೈಯರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ತುಮಕೂರಿನಲ್ಲಿ ಕೆಲಸ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!