ಉದ್ಯೋಗ

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿಯಲ್ಲಿ 135 ಹುದ್ದೆಗಳಿಗೆ ಅರ್ಜಿ ಆಹ್ವಾನ | GESCOM Recruitment Karnataka 2022

WhatsApp Group Join Now
Telegram Group Join Now

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿಯು 135 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಇದೇ ಡಿಸೆಂಬರ್ 8, 2022ರ ಒಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವೇತನ, ಅರ್ಜಿ ನಮೂನೆ, ಅರ್ಜಿ ಸಲ್ಲಿಕೆ ವಿಳಾಸ, ಉದ್ಯೋಗ ಸ್ಥಳ, ನೇಮಕಾತಿ ಅಧಿಸೂಚನೆ ಕುರಿತ ಮಾಹಿತಿ ಇಲ್ಲಿದೆ…

ಕಲ್ಯಾಣ ಕರ್ನಾಟಕದ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿಯು (GESCOM) ಖಾಲಿ ಇರುವ 135 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಡಿಪ್ಲೋಮಾ ಮತ್ತು ಗ್ರಾಜುಯೆಟ್ ಅಭ್ಯರ್ಥಿಗಳು ಇದೇ ಡಿಸೆಂಬರ್ 8, 2022ರ ಒಳಗೆ ನಿಗದಿತ ನಮೂನೆಯಲ್ಲಿ ಅಂಚೆ ಮೂಲಕ ಅರ್ಜಿ ಸಲ್ಲಿಸಿ ಈ ಅವಕಾಶ ಸದುಪಯೋಗ ಮಾಡಿಕೊಳ್ಳಬಹುದು.

ಇದನ್ನೂ ಓದಿ: 1,55,927 ಅರ್ಜಿದಾರರಿಗೆ ಶೀಘ್ರದಲ್ಲಿಯೇ ಸಿಗಲಿದೆ ಹೊಸ BPL ಕಾರ್ಡ್

ಹುದ್ದೆಗಳ ವಿವರ

ಗ್ರಾಜುಯೆಟ್ ಅಪ್ರೆಂಟಿಸ್ ಹಾಗೂ ಡಿಪ್ಲೋಮಾ ಅಪ್ರೆಂಟಿಸ್ ಸೇರಿ ಒಟ್ಟು 135 ಹುದ್ದೆಗಳಿಗೆ ಅರ್ಹ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜೀ ಆಹ್ವಾನಿಸಲಾಗಿದೆ.

ಗ್ರಾಜುಯೆಟ್ ಅಪ್ರೆಂಟಿಸ್: 100 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಈ ಹುದ್ದೆಗೆ ಸೇರಬಯಸುವ ಅಭ್ಯರ್ಥಿಯು ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಗ್ರಾಜುಯೇಷನ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಡಿಪ್ಲೋಮಾ ಅಪ್ರೆಂಟಿಸ್: 35 ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗಳಿಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಮೂರು ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನೂ ಓದಿ: ಈ ಯೋಜನೆಗೆ ಸೇರಿದರೆ ಪ್ರತಿ ತಿಂಗಳು ಸಿಗಲಿದೆ ₹3,000 ಪಿಂಚಣಿ

ವಯೋಮಿತಿ: ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಆಕ್ಟ್ ಪ್ರಕಾರ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ. ಕರ್ನಾಟಕದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು; ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನ್ನಡ ಭಾಷೆ ಓದಲು ಮತ್ತು ಬರೆಯಲು ಗೊತ್ತಿರಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಮತ್ತು ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿಯ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು (ಅರ್ಜಿ ನಮೂನೆಗೆ ಇಲ್ಲಿ ಕ್ಲಿಕ್ ಮಾಡಿ) ಆನ್‌ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.

ಇದನ್ನೂ ಓದಿ: 10 ದಿನಗಳ ಉಚಿತ ಜೇನು ಕೃಷಿ ತರಬೇತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  1. SSLCಅಂಕಪಟ್ಟಿ ಮತ್ತು ಪಿಯುಸಿ ಅಂಕಪಟ್ಟಿ
  2. ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ 7ನೇ ಮತ್ತು 8ನೇ ಸೆಮಿಸ್ಟರ್ (ಪದವೀಧರರು), 5ನೇ ಮತ್ತು 6ನೇ ಸೆಮಿಸ್ಟರ್ ಡಿಪ್ಲೋಮಾದ ಅಂಕಪಟ್ಟಿ
  3. ಡಿಗ್ರಿ ಪ್ರಮಾಣ ಪತ್ರ, ಪ್ರವಿಷನಲ್ ಡಿಗ್ರಿ ಪ್ರಮಾಣ ಪತ್ರ (PDC)/ಡಿಪ್ಲೋಮಾ ಪ್ರಮಾಣ ಪತ್ರ
  4. ಇತ್ತೀಚೆಗೆ ದೃಢೀಕರಿಸಲ್ಪಟ್ಟ ಸರಕಾರಿ ಆಸ್ಪತ್ರೆಯ ವೈದ್ಯಕೀಯ ಯೋಗ್ಯತೆಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ
  5. ಗೆಜೆಟೆಡ್ ಅಧಿಕಾರಿಗಳಿಂದ ಪಡೆದ ಇತ್ತೀಚಿನ ನಡತೆ ಪ್ರಮಾಣ ಪತ್ರ (ಈ ಎಲ್ಲ ದಾಖಲೆಗಳು ಜೆರಾಕ್ಸ್ ಪ್ರತಿಗಳು)
  6. ಎರಡು ಪಾಸ್‌ಪೋರ್ಟ್ ಸೈಜ್ ಫೋಟೋ
  7. ಸ್ವ-ವಿಳಾಸವಿರುವ 20 ರೂಪಾಯಿ ಮೌಲ್ಯದ ಅಂಚೆ ಚೀಟಿಯನ್ನು ಅಂಟಿಸಿದ 4X8 ಅಳತೆಯ ಒಂದು ಲಕೋಟೆ

ಇದನ್ನೂ ಓದಿ: ಹೈನುಗಾರಿಕೆ, ಮೀನುಗಾರಿಕೆ ಕುರಿ-ಮೇಕೆ-ಕೋಳಿ ಸಾಕಣೆಗೆ ಗರಿಷ್ಠ ₹3 ಲಕ್ಷ ಸಾಲ

ಅರ್ಜಿ ಸಲ್ಲಿಸುವ ವಿಳಾಸ:

The General Manager, (A & HRD, Corporate Office GESCOM, Kalaburagi – 585102 ಅಥವಾ ಪ್ರಧಾನ ವ್ಯವಸ್ಥಾಪಕರು, (ಆ ಮತ್ತು ಮಾಸಂಅ). ನಿಗಮ ಕಛೇರಿ, ಗು.ವಿ.ಸ.ಕಂ.ನಿ (ಗೆಸ್ಕಾಂ), ಕಲಬುರಗಿ- 585102

ಅರ್ಜಿ ಸಲ್ಲಿಕೆ ದಿನಾಂಕ: ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿ ನೇಮಕಾತಿಗೆ ನವೆಂಬರ್ 21, 2022ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು; ಡಿಸೆಂಬರ್ 08, 2022 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವಾಗಿದೆ.

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪೆನಿಯು (GESCOM) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಹಾಗೂ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

====================================

ಇವುಗಳನ್ನೂ ಓದಿ:

ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

20 ಕುರಿ, 1 ಮೇಕೆ ಗಿಫ್ಟ್: ಮುಖ್ಯಮಂತ್ರಿ ಘೋಷಣೆ | ಈ ಗಿಫ್ಟ್ ಪಡೆಯಲು ಯಾರೆಲ್ಲ ಅರ್ಹರು?

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!