ಉದ್ಯೋಗ

PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ | Gram Panchayat Recruitment 2023

WhatsApp Group Join Now
Telegram Group Join Now

ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಸೇರಿ ವಿವಿಧ 2,000ಕ್ಕೂ ಹೆಚ್ಚು ಹುದ್ದೆಗಳಿಗೆ ಸರಕಾರ ಅರ್ಜಿ ಆಹ್ವಾನಿಸಲಿದೆ. ಯಾವ್ಯಾವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ? ಎಷ್ಟು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು? ವಿದ್ಯಾರ್ಹತೆ ಏನು? ಆಯ್ಕೆ ಪ್ರಕ್ರಿಯೆ ಹೇಗೆ? ಸಮಗ್ರ ಮಾಹಿತಿ ಇಲ್ಲಿದೆ…

ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಮಹತ್ವದ ಹುದ್ದೆಯಾಗಿರುವ PDO (Panchayat Development Officer) ಅರ್ಥಾತ್ ಗ್ರಾಮ ಪಂಚಾಯತಿ ಅಬಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹೊಸ ನೇಮಕಾತಿ ನಡೆಸುವ ಸೂಚನೆಯನ್ನು ಸರಕಾರ ನೀಡಿದೆ. ರಾಜ್ಯದಲ್ಲಿ 6,026 ಗ್ರಾಮ ಪಂಚಾಯತಿಗಳಿದ್ದು; ಈ ಪೈಕಿ 2,000ಕ್ಕೂ ಹೆಚ್ಚು ಪಿಡಿಒ ಹುದ್ದೆಗಳಿಗೆ ಅತೀ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಿದೆ.

ಆಸಕ್ತ ಅಭ್ಯರ್ಥಿಗಳು ಈಗಿಂದಲೇ ತಯಾರಿ ನಡೆಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದು. ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಸುವ ಎಲ್ಲಾ ಹುದ್ದೆಗಳಿಗೂ ಸಹ ಕಡ್ಡಾಯವಾಗಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುತ್ತದೆ. ಹೀಗಾಗಿ ಅಭ್ಯರ್ಥಿಗಳು ಈಗಿನಿಂದಲೇ ತಯಾರಿ ನಡೆಸುವುದು ಸೂಕ್ತ.

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ

  • ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)
  • ದ್ವಿತೀಯ ದರ್ಜೆ ಸಹಾಯಕರು (SDA)
  • ಕಾರ್ಯದರ್ಶಿ ಗ್ರೇಡ್ 1
  • ಕಾರ್ಯದರ್ಶಿ ಗ್ರೇಡ್ 2

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಮೇಲ್ಕಾಣಿಸಿದ ಹುದ್ದೆಗಳಿಗೆ ಕೆಲವೇ ದಿನಗಳಲ್ಲಿ ಭರ್ತಿ ಮಾಡಿಕೊಳ್ಳುವ ಎಲ್ಲಾ ಸಾಧ್ಯತೆ ಇದೆ. ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಶೀಘ್ರದಲ್ಲಿ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ಎಷ್ಟೆಷ್ಟು ಹುದ್ದೆಗಳು

ಪಿಡಿಒ ಹುದ್ದೆಗಳು: ಗ್ರಾಮ ಪಂಚಾಯಿತಿಗಳಿಗೆ ೩೦ಕ್ಕೂ ಹೆಚ್ಚು ಇಲಾಖೆಗಳ ಸೇವೆ ಒದಗಿಸುವ ಅಧಿಕಾರ ನೀಡಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 326 ಹುದ್ದೆಗಳ ಭರ್ತಿಗೆ ಅನುಮತಿ ಕೋರಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಎಸ್‌ಡಿಎ ಹುದ್ದೆಗಳು: ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 625 ದ್ವಿತೀಯ ದರ್ಜೆ ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ 124 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಒಟ್ಟಾರೆ ಶೇ.90 ಹುದ್ದೆಗಳನ್ನು ಮುಂದಿನ ನಾಲ್ಕು ತಿಂಗಳ ಒಳಗಾಗಿ ಭರ್ತಿ ಮಾಡಲಾಗುತ್ತದೆ.

ಕಾರ್ಯದರ್ಶಿ ಹುದ್ದೆಗಳು: 487 ಕಾರ್ಯದರ್ಶಿ ಗ್ರೇಡ್ 1 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಬಡ್ತಿ ಮೂಲಕ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ. 556 ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳು ಖಾಲಿ ಇವೆ. ಈ ಪೈಕಿ ೩೪೩ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಉಳಿದ ಹುದ್ದೆಗಳನ್ನು ಹಾಲಿ ಸಿಬ್ಬಂದಿಗೆ ಬಡತಿ ನೀಡಿ ತುಂಬಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: 3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ವಿದ್ಯಾರ್ಹತೆ

  • ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು.
  • ಕಾರ್ಯದರ್ಶಿ ಗ್ರೇಡ್ 1 ಮತ್ತು ಗ್ರೇಡ್ 2 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು.

ಮೇಲ್ಕಾಣಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ), ಕಾರ್ಯದರ್ಶಿ ಗ್ರೇಡ್ 1, ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ. ಆದ್ದರಿಂದ ಈ ಉದ್ಯೋಗಾಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಇಂದಿನಿಂದಲೇ ತಯಾರಿ ನಡೆಸಿದರೆ ಖಂಡಿತವಾಗಿಯೂ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ಅವಕಾಶ ಪಡೆದುಕೊಳ್ಳಬಹುದಾಗಿದೆ.

ಗ್ರಾಮ ಪಂಚಾಯತಿ ಖಾಲಿ ಹುದ್ದೆ ಭರ್ತಿ ಕುರಿತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ…

 

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

ಕೃಷಿ, ಹೈನುಗಾರಿಕೆ, ಕುರಿ-ಮೇಕೆ ಸಾಕಣೆಗೆ ನರೇಗಾ ಯೋಜನೆಯಲ್ಲಿ 2.5 ಲಕ್ಷ ರೂಪಾಯಿ ಸಹಾಯಧನ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

 

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!