ಪಂಚಾಯತಿ ಸುದ್ದಿ

ಗ್ರಾಮ ಸ್ವರಾಜ್ಯಕ್ಕಾಗಿ ಗ್ರಾಮ ಪಂಚಾಯಿತಿ ಸದಸ್ಯರ ರಾಜ್ಯವ್ಯಾಪಿ ಮುಷ್ಕರ | Grama Panchayat Members Protest

WhatsApp Group Join Now
Telegram Group Join Now

ಇತ್ತೀಚೆಗಷ್ಟೇ ಪಿಡಿಓಗಳು ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ಚಲೋ ಮುಷ್ಕರ ಹಮ್ಮಿಕೊಂಡಿದ್ದರು. ಇದೀಗ ಇದೀಗ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರು ಬೀದಿಗಿಳಿಯಲು ಸನ್ನದ್ಧರಾಗಿದ್ದಾರೆ. ಗ್ರಾಪಂ ಸದಸ್ಯರ ಬೇಡಿಕೆ ಏನು? ಹೇಗೆ ನಡೆಯಲಿದೆ ಮುಷ್ಕರ? ಯಾರೆಲ್ಲ ಭಾಗಿಯಾಗಲಿದ್ದಾರೆ? ಇತ್ಯಾದಿ ಮಾಹಿತಿ ಇಲ್ಲಿದೆ..

ಇತ್ತೀಚೆಗಷ್ಟೇ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಓ) ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ಚಲೋ ಮುಷ್ಕರ ಹಮ್ಮಿಕೊಂಡಿದ್ದರು. ಸರಕಾರ ಅವರ ಹೋರಾಟಕ್ಕೆ ಮಣಿದು ವೇತನ ಹೆಚ್ಚಿಸಿದ್ದಲ್ಲದೇ, ಭಡ್ತಿ ಕೂಡ ದಯಪಾಲಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಮಂಜೂರಾಗಿರುವ 6,021 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಹಿರಿಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂದು ಉನ್ನತೀಕರಣ ಮಾಡಲಾಗಿದ್ದು; ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದರು.

ಇದನ್ನೂ ಓದಿ: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಕೂಡಲೇ ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ಪಿಡಿಓಗಳಿಗೆ ಬಂಪರ್ ಗಿಫ್ಟ್

ಪಿಡಿಓಗಳ ಉನ್ನತೀಕರಣ, ಪುನರ್ ಪದನಾಮೀಕರಿಸಿದ ನಂತರ ವೇತನ ಶ್ರೇಣಿಯನ್ನು ರೂ.37,900 ರಿಂದ 70,850 ಇದ್ದದ್ದನ್ನು ಗ್ರೂಪ್ ಸಿ ವೃಂದದ 1,500 ಪಿಡಿಓಗಳಿಗೆ ತಕ್ಷಣದಿಂದ ಅನ್ವಯವಾಗುವಂತೆ ವೇತನ ಶ್ರೇಣಿ ರೂ.40,900 ರಿಂದ 78,200ಕ್ಕೆ ಹೆಚ್ಚಿಸಲಾಗಿದೆ. ಇದಲ್ಲದೇ ಉಳಿದ 4,521 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ವೇತನ ಶ್ರೇಣಿ ರೂ 37,900 ರಿಂದ 70,850 ಮುಂದುವರೆಸಲಾಗಿದೆ.

ಇದೀಗ ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರ ಮುಷ್ಕರ ಆರಂಭವಾಗಿದ್ದು; ಇದೇ ಡಿಸಂಬರ್ 11ರೊಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೆ ಡಿಸೆಂಬರ್ 12 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ತಿಳಿಸಿದೆ. ಹೀಗಾಗಿ ಒಕ್ಕೂಟವು ಇದೇ 12ರಂದು ರಾಜಧಾನಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗ್ರಾಮ ಸ್ವರಾಜ್ಯಕ್ಕಾಗಿ ಗ್ರಾಮ ಪಂಚಾಯಿತಿ ಸದಸ್ಯರ ಬೆಂಗಳೂರು ಚಲೋ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಂಡಿದೆ.

ಇದನ್ನೂ ಓದಿ: ಬೆಳೆಸಾಲದ ಪ್ರಮಾಣ ಶೇ.10ರಷ್ಟು ಹೆಚ್ಚಳ : ರೈತರು ತಿಳಿದುಕೊಳ್ಳಬೇಕಾದ ಬೆಳೆಸಾಲದ ನಿಯಮಗಳೇನು?

ಸಾವಿರಾರು ಗ್ರಾಪಂ ಸದಸ್ಯರ ಮುಷ್ಕರ

ಗ್ರಾಮ ಪಂಚಾಯತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಅನೇಕ ಅಂಶಗಳು ಕಾರಣವಾಗಿರುವುದನ್ನು ಕಾಲಕಾಲಕ್ಕೆ ಸರ್ಕಾರದ ಗಮನಕ್ಕೆ ತಂದರೂ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸುಮಾರು ಒಂದು ಲಕ್ಷ ಜನಪ್ರತಿನಿಧಿಗಳಿಂದ ಕೂಡಿದ, 6,000 ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಕಡೆಗಣಿಸಲಾಗುತ್ತಿದೆ.

ಡಿಸೆಂಬರ್ 11ರೊಳಗಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ 12ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ಧಿಷ್ಟಾವಧಿ ಧರಣಿ ಪ್ರಾರಂಭಿಸಲಾಗುವುದು. 10,000ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸದಸ್ಯರು ಭಾವಹಿಸಲಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದ್ದಾರೆ. ರಾಜ್ಯದ 6,026 ಗ್ರಾಮ ಪಂಚಾಯತಿಗಳ ಸಾವಿರಾರು ಸದಸ್ಯರುಗಳು ಈ ಮುಷ್ಕರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

========================

ಇವುಗಳನ್ನೂ ಓದಿ:

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

20 ಕುರಿ, 1 ಮೇಕೆ ಗಿಫ್ಟ್: ಮುಖ್ಯಮಂತ್ರಿ ಘೋಷಣೆ | ಈ ಗಿಫ್ಟ್ ಪಡೆಯಲು ಯಾರೆಲ್ಲ ಅರ್ಹರು?

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!