ಪಂಚಾಯತಿ ಸುದ್ದಿ

ಪಿಡಿಒ ಮುಷ್ಕರ: ನವೆಂಬರ್ 2ರಿಂದ ಗ್ರಾಮ ಪಂಚಾಯ್ತಿ ಸೇವೆಗಳು ಸ್ಥಗಿತ? | Grama Panchayat PDO Protest

WhatsApp Group Join Now
Telegram Group Join Now

ಪಿಡಿಒಗಳು ಬೆಂಗಳೂರು ಚಲೋ ಮುಷ್ಕರ ಹಮ್ಮಿಕೊಂಡಿದ್ದು; ನವೆಂಬರ್ 2ರಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಹುತೇಕ ಸೇವೆಗಳು ಸ್ಥಗಿತಗೊಳ್ಳಲಿವೆ. ಪಿಡಿಒಗಳ ಬೇಡಿಕೆಗಳೇನು? ಈ ಮುಷ್ಕರದಿಂದ ಗ್ರಾಮೀಣ ಜನತೆಗೆ ಆಗುವ ಅನಾನುಕೂಲತೆಗಳೇನು? ಇಲ್ಲಿದೆ ಮಾಹಿತಿ…

ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಬೃಹತ್ ಮುಷ್ಕರಕ್ಕೆ ಸನ್ನದ್ಧರಾಗಿದ್ದಾರೆ. ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರಿನಲ್ಲಿ ನವೆಂಬರ್ 2ರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಬಹುಶಃ ಮುಷ್ಕರ ಅಂತ್ಯದವರೆಗೂ ಗ್ರಾಮ ಪಂಚಾಯತಿ ವಹಿವಾಟುಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹೋರಾಟ ಮುಗಿಯುವವರೆಗೆ ಕುಡಿಯುವ ನೀರು ಹಾಗೂ ಬೀದಿದೀಪ ಸೇವೆಗಳು ಮಾತ್ರ ಲಭ್ಯವಿದ್ದು ಇನ್ನುಳಿದ ಎಲ್ಲ ಸೇವೆಗಳು  ಸ್ಥಗಿತಗೊಂಡು ಗ್ರಾ.ಪಂ ಕೆಲಸ ಕಾರ್ಯಗಳಿಗೆ ಅಡ್ಡಿಯುಂಟಾಗಲಿದೆ.

ರಾಜ್ಯದ 6,026 ಗ್ರಾಮ ಪಂಚಾಯತಿಗಳ ಸುಮಾರು 5,600 ಪಿಡಿಒಗಳು ಈ ಮುಷ್ಕರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೋರಾಟದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಹಾಗೂ ಹೋರಾಟದಲ್ಲಿ ಭಾಗವಹಿಸಿದ ದಿನಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹಕ್ಕಿನಲ್ಲಿರುವ ರಜಾ ದಿನಗಳೆಂದು ಪರಿಗಣಿಸುವಂತೆ ಕೋರಿ ಪಿಡಿಒಗಳು ಆಯಾ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಈಗಾಗಲೇ ಮನವಿ ಕೂಡ ಸಲ್ಲಿಸಿದ್ದಾರೆ. ಪೂರ್ಣಾವಧಿ ಪಿಡಿಒ ಇಲ್ಲದ ಪಂಚಾಯತ್‌ನಲ್ಲಿರುವ ಪ್ರಭಾರ ಪಿಡಿಒಗಳು ಕೂಡ ರಜೆ ಪಡೆದು ಮುಷ್ಕರಕ್ಕೆ ಬೆಂಬಲ ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ: ರೈತರೇ ತೋಟಗಾರಿಕೆಯ ಈ ಸಬ್ಸಿಡಿ ಸೌಲಭ್ಯಗಳನ್ನು ತಪ್ಪದೇ ಬಳಸಿಕೊಳ್ಳಿ

ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳ ಬೇಡಿಕೆಗಳು ಏನು?

  1. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳನ್ನು ಖಂಡಿಸಿ ಮತ್ತು ಹಲ್ಲೆ ನಡೆಸಿದವರ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಬೇಕು.
  2. 8 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗ್ರೂಪ್ ‘ಬಿಗೆ ಮೇಲ್ದರ್ಜೆಗೇರಿಸಬೇಕು.
  3. 2006-2007ರಿಂದ 2011-2012ರ ವರೆಗೆ ಮನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ತನಿಖೆ ಮಾಡಲು ಲೋಕಾಯುಕ್ತಕ್ಕೆ ವಹಿಸಿರುವ ಪ್ರಕರಣವನ್ನು ವಾಪಸ್ ಪಡೆಯಬೇಕು.
  4. ಕೊರೊನಾದಿಂದ ಮರಣ ಹೊಂದಿದ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಗ್ರಾ.ಪಂ. ಸಿಬಂದಿಗೆ ಪರಿಹಾರಧನ ತತ್‌ಕ್ಷಣ ಪಾವತಿಸಬೇಕು.
  5. ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಿಯಮವನ್ನು ಕೂಡಲೇ ಜಾರಿಗೊಳಿಸಬೇಕು.
  6. 16ಎ ರದ್ದು ಮಾಡಿರುವುದರಿಂದ ಅಂತರ್ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ಇರುವುದಿಲ್ಲ ಹಾಗಾಗಿ ವಿಶೇಷ ನಿಯಮಗಳನ್ನು ರಚಿಸಿ ನೌಕರರು ಇಚ್ಛಿಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆಗೆ ಅವಕಾಶ ನೀಡಬೇಕು.
  7. ಮನರೇಗಾ ಕೂಲಿಕಾರರ ಹಾಜರಾತಿ ಪಡೆಯಲು ಬಯೋಮೆಟ್ರಿಕ್ ಜಾರಿ ಮಾಡಬೇಕು.

…ಹೀಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಂಘದ ಅಧ್ಯಕ್ಷ ಎಚ್. ಬೋರಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ₹18,000- ₹81,000 ಸಾವಿರ ಸಂಬಳದ ಹುದ್ದೆಗಳಿಗೆ ಅರ್ಜಿ ಆಹ್ವಾನ… 

WhatsApp Group Join Now
Telegram Group Join Now

Related Posts

error: Content is protected !!