ಸರಕಾರಿ ಯೋಜನೆ

ಬೀದಿಗಿಳಿಯಲು ಸನ್ನದ್ಧರಾದ ಗ್ರಾಮ ಪಂಚಾಯತಿ ಪಿಡಿಒಗಳು | Grama Panchayat PDO Protest

WhatsApp Group Join Now
Telegram Group Join Now

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಮೇಲಾಗುತ್ತಿರುವ ಹಲ್ಲೆ ಮತ್ತು ಸುಳ್ಳು ಲೋಕಾಯುಕ್ತ ದೂರು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿಗೆ ಮುಂದಾಗಿದ್ದು; ಅವರ ಬೇಡಿಕೆಗಳೇನು? ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನಿರ್ಣಗಳೇನು? ಇಲ್ಲಿದೆ ಮಾಹಿತಿ…

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತೆ ಸಿಡಿದೆಳುವ ಸೂಚನೆ ನೀಡಿದ್ದಾರೆ. ಇತ್ತೀಚೆಗಷ್ಟೇ ಗ್ರಾಮ ಪಂಚಾಯತಿ ಅಧ್ಯಕ್ಷರ ಹಣಕಾಸು ವ್ಯವಹಾರಗಳಿಗೆ ಕತ್ತರಿ ಹಾಕುವ ಸರಕಾರದ ನಡೆಯ ವಿರುದ್ಧ ಚುನಾಯಿತ ಜನಪ್ರತಿನಿಧಿಗಳು ಅಸಮಾಧಾನಗೊಂಡಿದ್ದರು. ಮಾತ್ರವಲ್ಲ ಸರಕಾರದ ಮೇಲೆ ಒತ್ತಡ ತಂದಿದ್ದು; ಸರಕಾರ ಕೂಡ ಈ ಬಗ್ಗೆ ಗೊಂದಲದಲ್ಲಿದೆ. ಇದೀಗ ಪಿಡಿಒಗಳು ತಮ್ಮ ಮೇಲಿನ ಹಲ್ಲೆ, ಲೋಕಾಯುಕ್ತ ಪ್ರಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧರಣಿಗೆ ಮುಂದಾಗಿದ್ದಾರೆ.

ಗ್ರಾಮ ಪಂಚಾಯಿತಿ ಆಡಳಿತ ಮತ್ತು ವ್ಯವಹಾರದಲ್ಲಿ ಪಾರದರ್ಶಕತೆ ತರಲು ನರೇಗಾ ಕೂಲಿಕಾರರ ಹಾಜರಾತಿ ಪಡೆಯಲು ಬಯೋಮೆಟ್ರಿಕ್ ಜಾರಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬರಲಿರುವ ನವೆಂಬರ್ 2ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದೆ.

ಇದನ್ನೂ ಓದಿ: ಮಳೆಗೆ ಕೊಚ್ಚಿ ಹೋದ ಮಣ್ಣಿಗೂ ಸಿಗಲಿದೆ ಸರಕಾರಿ ಪರಿಹಾರ

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದೆ. ಮುದ್ರಣಗೊಳ್ಳದ ಪತ್ರಿಕೆಯ ಹೆಸರಿನಲ್ಲಿ ಕೆಲವು ಪತ್ರಕರ್ತರು ಚಂದಾದಾರರಾಗಿ ಎಂದು ಹೇಳಿಕೊಂಡು ಬರುತ್ತಿದ್ದು, ಇದಕ್ಕೆ ಒಪ್ಪದಿದ್ದಾಗ ಅವರ ಮೇಲೆ ಆರ್‌ಟಿಐ ಹಾಕಿ ಲೋಕಾಯುಕ್ತಕ್ಕೆ ದೂರು ನೀಡಿ ಮಾನಸಿಕವಾಗಿ ಮನೋಸ್ಥೈರ್ಯ ಕುಗ್ಗಿಸುವಂತಹ ಕೆಲಸಗಳನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಇದರಿಂದ ಪಂಚಾಯಿತಿ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ.

ಇನ್ನು ಕೆಲವರು ರಾಜಕೀಯ ಪಕ್ಷಗಳ ಹೆಸರಿನಲ್ಲಿ ಅನಗತ್ಯವಾಗಿ ಕಚೇರಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು, ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ಸಲ್ಲಿಸಿ ಆ ದಾಖಲೆಗಳನ್ನು ಲೋಕಾಯುಕ್ತದಲ್ಲಿ ಪ್ರಕರಣಗಳನ್ನು ದಾಖಲಿಸುವುದು ಸಾಕಷ್ಟು ಗ್ರಾಮ ಪಂಚಾಯಿತಿಗಳಲ್ಲಿಯೂ ನಡೆಯುತ್ತಿದೆ. ಇಂತಹ ಘಟನೆಗಳಿಂದ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಕಷ್ಟವಾಗಿದ್ದು ಪಿಡಿಒಗಳಿಗೆ ಅನಾರೋಗ್ಯ, ಮಾನಸಿಕ ಒತ್ತಡದಿಂದ ಕೆಲಸ ನಿರ್ವಹಿಸುವಂತಾಗಿದೆ. ಇದನ್ನೆಲ್ಲಾ ಪರಿಗಣಿಸಿ ನಮಗೆ ಸೂಕ್ತ ರಕ್ಷಣೆಯನ್ನು ಒದಗಿಸಬೇಕೆಂಬುವುದು ಪಿಡಿಒಗಳ ಅಳಲಾಗಿದೆ.

ಇದನ್ನೂ ಓದಿ: ಅಕ್ಟೋಬರ್ 20ರೊಳಗೆ ಅರ್ಜಿ ಸಲ್ಲಿಸಿ ವಿದ್ಯಾಸಿರಿ ಯೋಜನೆಯಡಿ ₹15,000 ವಿದ್ಯಾರ್ಥಿವೇತನ ಪಡೆಯಿರಿ

ಬೇಡಿಕೆಗಳು ಏನು?

  • ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳನ್ನು ಖಂಡಿಸಿ ಮತ್ತು ಹಲ್ಲೆ ನಡೆಸಿದವರ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಬೇಕು.
  • ಕೋವಿಡ್‌ನಿಂದ ಮರಣ ಹೊಂದಿದ ಪಿಡಿಒ, ಕಾರ್ಯದರ್ಶಿ ಗ್ರೇಡ್ 1 ಮತ್ತು 2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಗ್ರಾಪಂ ಸಿಬ್ಬಂದಿಗೆ ಕೂಡಲೇ ಪರಿಹಾರ ಧನ ನೀಡಬೇಕು.
  • 2006-2007ರಿಂದ 2011-12ರ ನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ತನಿಖೆ ಮಾಡಲು ಲೋಕಾಯುಕ್ತಕ್ಕೆ ವಹಿಸಿರುವ ಪ್ರಕರಣ ವಾಪಸ್ ಪಡೆಯಬೇಕು.
  • ವಿಶೇಷ ನಿಯಮದಡಿ ನೌಕರರು ಇಚ್ಛಿಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು

…ಹೀಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸುವುದಾಗಿ ಸಂಘದ ಅಧ್ಯಕ್ಷ ಎಚ್. ಬೋರಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಚೆ ಕಚೇರಿಯಲ್ಲಿ ವರ್ಷಕ್ಕೆ ಕೇವಲ ₹399 ಕಟ್ಟಿದರೆ ಸಿಗಲಿದೆ ₹10 ಲಕ್ಷ ಅಪಘಾತ ಪರಿಹಾರ

WhatsApp Group Join Now
Telegram Group Join Now

Related Posts

error: Content is protected !!