ಸರಕಾರಿ ಯೋಜನೆ

ಮನೆ ಬಾಗಿಲಲ್ಲೇ ‘ಗೃಹಜ್ಯೋತಿ’ ಉಚಿತ ವಿದ್ಯುತ್ ನೋಂದಣಿ: ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ | Gruha Jyoti Scheme

WhatsApp Group Join Now
Telegram Group Join Now

ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಗೃಹ ಜ್ಯೋತಿ ಯೋಜನೆಗೆ ನಿರೀಕ್ಷೆಗೂ ಮೀರಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಯೋಜನೆಯ ಫಲಾನುಭವಿಗಳಾಗಲು ಅರ್ಜಿ ನೋಂದಣಿಗೆ ಚಾಲನೆ ನೀಡಿದ ಒಂದು ವಾರದಲ್ಲೇ ಅರ್ಧ ಕೋಟಿಗೂ ಹೆಚ್ಚು ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಜುಲೈ ತಿಂಗಳಿನಲ್ಲಿ ಬಳಸುವ ವಿದ್ಯುತ್‌ಗೆ ಆಗಸ್ಟ್ ತಿಂಗಳಿನಿ೦ದ ಬರುವ ಬಿಲ್‌ಗೆ ಯೋಜನೆ ಅನ್ವಯವಾಗಲಿದೆ. ಸರ್ಕಾರ ವಿಧಿಸಿರುವ ಷರತ್ತುಗಳಿಗೆ ಒಳಪಟ್ಟು ವಿದ್ಯುತ್ ಬಳಸುವ ಗ್ರಾಹಕರು ಉಚಿತ ಸೌಲಭ್ಯದ ಲಾಭ ಪಡೆಯಬಹುದಾಗಿದೆ.

ಗೃಹಜ್ಯೋತಿ ಉಚಿತ ಕರೆಂಟ್‌ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸುವ ಸರಳ ವಿಧಾನ

ಮನೆ ಮನೆಗೆ ತೆರಳಿ ನೋಂದಣಿಗೆ ಸೂಚನೆ

ಈ ನಡುವೆ ಬೆಸ್ಕಾಂ ನವರು ಮನೆ ಮನೆಗೆ ತೆರಳಿ ಗೃಹಜ್ಯೋತಿ ನೋಂದಣಿ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ನಿನ್ನೆ ಜೂನ್ 26ರಂದು ಕೆಡಿಪಿ ಸಭೆಯಲ್ಲಿ ಭಾಗಿಯಾದ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಗೃಹ ಜ್ಯೋತಿ ಯೋಜನೆಯಡಿ ನೀಡುವ ಉಚಿತ ವಿದ್ಯುತ್ ಯೋಜನೆಗೆ ಜನರು ಅರ್ಜಿ ಸಲ್ಲಿಸುತ್ತಿದ್ದು, ಬೆಸ್ಕಾಂ ನವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಗೃಹಜ್ಯೋತಿ ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು.

ಹೊಸ APL, BPL ರೇಷನ್ ಕಾರ್ಡ್ ಅರ್ಜಿ ಸ್ಥಗಿತ | New Ration Card Application Stop

ಹೆಚ್ಚು ಶುಲ್ಕ ವಸೂಲಿಗೆ ಕ್ರಮ

ಗೃಹಜ್ಯೋತಿ ನೋಂದಣಿ ಸಂಪೂರ್ಣವಾಗಿ ಉಚಿತವಾಗಿದೆ, ಆದರೆ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ 20 ರೂಪಾಯಿ ಸೇವಾ ಶುಲ್ಕವನ್ನು ವಿಧಿಸಲು ಸೂಚನೆ ನೀಡಲಾಗಿದೆ. ಇದರ ಮಧ್ಯೆಯೂ ನಿಗದಿತಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಹಲವು ದೂರುಗಳು ಕೇಳಿ ಬಂದಿದ್ದವು.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಹಣ ವಸೂಲಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಖಡಕ್ ಎಚ್ಚರಿಕೆಯನ್ನು ಸರ್ಕಾರ ನೀಡಿದ್ದು, ಈ ರೀತಿ ಹಣ ಕೇಳಿದರೆ ಸಾರ್ವಜನಿಕರು 1912 ಸಹಾಯವಾಣಿಗೆ ಕರೆ ಮಾಡುವ ಮೂಲಕ ದೂರು ಕೊಡಬಹುದು.

ಉಚಿತ ಕರೆಂಟ್ ಪಡೆಯಲು ಯಾವುದೇ ಡೆಡ್‌ಲೈನ್ ಇಲ್ಲ | ಈ ಹೊಸ ಲಿಂಕ್ ಬಳಸಿ ಮನೆಯಲ್ಲೇ ಅರ್ಜಿ ಸಲ್ಲಿಸಿ…

ಇವರಿಗೆ ಮತ್ತೊಮ್ಮೆ ನೋಂದಣಿ ಕಡ್ಡಾಯ

ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಅಡಿಯಲ್ಲಿ ಪ್ರಯೋಜನವನ್ನು ಪಡೆಯುತ್ತಿರುವ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಮತ್ತೊಮ್ಮೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳಬೇಕು ಎಂದು ಬೆಸ್ಕಾಂ ಸ್ಪಷ್ಟನೆ ನೀಡಿದೆ.

ಇದರ ಪ್ರಕಾರ ನೀವು ಈಗಾಗಲೇ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರೂ, ಗೃಹ ಜ್ಯೋತಿ ಯೋಜನೆಯಡಿ ಫಲಾನುಭವಿಗಳಾಗಲು ನೋಂದಣಿ ಮಾಡಿಕೊಳ್ಳುವುದು ಅವಶ್ಯಕವಾಗಿದೆ.

ಇದನ್ನೂ ಓದಿ:

ಮನೆ ಬಾಗಿಲಲ್ಲೇ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ | ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೆರವು 

ಗೃಹಜ್ಯೋತಿ ಉಚಿತ ಕರೆಂಟ್‌ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸುವ ಸರಳ ವಿಧಾನ

ರಾಜ್ಯದಲ್ಲಿ ಈ ವರ್ಷ ಕೈ ಕೊಡಲಿದೆಯಾ ಮಳೆ? | ಎಚ್ಚರಿಕೆ ಕೊಟ್ಟ ವಿಶ್ವ ಹವಾಮಾನ ಸಂಸ್ಥೆ

ಜೂನ್ 30ರೊಳಗೆ eKYC ಮಾಡದಿದ್ದರೆ ರೈತರಿಗೆ ವರ್ಷಕ್ಕೆ 10,000 ರೂಪಾಯಿ ನಷ್ಟ!

WhatsApp Group Join Now
Telegram Group Join Now

Related Posts

error: Content is protected !!