ಸರಕಾರಿ ಯೋಜನೆ

ಮನೆ ಬಾಗಿಲಲ್ಲೇ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ | ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೆರವು | Gruhalakshmi Scheme

WhatsApp Group Join Now
Telegram Group Join Now

ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಬಹಳಷ್ಟು ಸರಳವಾಗಲಿದ್ದು; ಸರಕಾರ ಫಲಾನುಭವಿಗಳ ಮನೆ ಬಾಗಿಲಲ್ಲೇ ನೋಂದಣಿ ಮಾಡಲು ಸಿದ್ಧತೆ ನಡೆಸಿದೆ…

ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳು ಯಥಾಪ್ರಕಾರ ಒಂದೊ೦ದಾಗಿ ಅನುಷ್ಠಾನಗೊಳ್ಳುತ್ತಿವೆ. ಈಗಾಗಲೇ ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.

ಇನ್ನು 200 ಯುನಿಟ್ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ ಯೋಜನೆ’ಗೆ ನೋಂದಣಿ ಆರಂಭವಾಗಿದೆ. ಅದೇ ರೀತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡುವ ‘ಗೃಹಲಕ್ಷ್ಮಿ ಯೋಜನೆ’ಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ಕೂಡ ಇಷ್ಟರಲ್ಲೇ ಆರಂಭವಾಗಲಿದೆ.

ಗೃಹಜ್ಯೋತಿ ಉಚಿತ ಕರೆಂಟ್‌ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸುವ ಸರಳ ವಿಧಾನ

ಸರಳವಾಗಲಿದೆ ಅರ್ಜಿ ಸಲ್ಲಿಕೆ 

ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಯಲ್ಲಾದ ಗೊಂದಲವನ್ನು ಸರಿಪಡಿಸುವ ನಿಟ್ಟಿನಲ್ಲಿ ಮೂರನೇ ಗ್ಯಾರಂಟಿ ಯೋಜನೆಯಾದ ‘ಗೃಹಲಕ್ಷ್ಮೀ’ ಯೋಜನೆಯಲ್ಲಿ  ಯಾವುದೇ ಗೊಂದಲವಿಲ್ಲದೆ ಅರ್ಜಿ ಸ್ವೀಕರಿಸುವ ಪ್ರಯತ್ನಕ್ಕೆ ಸರಕಾರ ಮುಂದಾಗಿದೆ. ಈ ಹಿನ್ನಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಮುಂದೂಡಲಾಗುತ್ತಿದೆ.

ಈ ಯೋಜನೆಯಡಿ ಫಲಾನುಭವಿಗಳಾಗಲು ಒಬ್ಬರು ಅರ್ಜಿ ಭರ್ತಿ ಮಾಡಲು ಕನಿಷ್ಠ 6 ನಿಮಿಷಗಳು ಬೇಕಾಗಲಿದೆ. ಲಕ್ಷಾಂತರ ಮಹಿಳೆಯರು ಅರ್ಜಿ ಸಲ್ಲಿಸುವುದರಿಂದ ಹೆಚ್ಚಿನ ಗೊಂದಲಕ್ಕೆ ಒಳಗಾಗದಂತೆ ಸರಳವಾಗಿ ಅರ್ಜಿ ಪ್ರಕ್ರಿಯೆ ನಡೆಯಲು ಆಪ್ ಸಿದ್ದಪಡಿಸಲಾಗುತ್ತಿದೆ. ಈ ಕಾರಣಕ್ಕೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ತಡವಾಗುತ್ತಿದೆ.

ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

ಪ್ರತಿ ಬೂತ್‌ಗೆ ನಾಲ್ಕು ಜನ ನೇಮಕ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಅತಿ ಶೀಘ್ರದಲ್ಲೇ ಗೃಹಲಕ್ಷ್ಮಿ ಅಪ್ಲಿಕೇಷನ್ ಲಾಂಚ್ ಆಗಲಿದೆ. ಪ್ರತಿ ಬೂತ್‌ನಲ್ಲಿ ಓರ್ವ ಮಹಿಳೆ ಸೇರಿ ನಾಲ್ಕು ಜನರನ್ನು ನೇಮಕ ಮಾಡಲಾಗುವುದು. ರಾಜ್ಯದಲ್ಲಿ ಸರಿಸುಮಾರು 1 ಕೋಟಿ 13 ಲಕ್ಷ ಕುಟುಂಬಗಳು ಇದರ ಉಪಯೋಗ ಪಡೆಯಲಿವೆ’ ಎಂದಿದ್ದಾರೆ.

ಪ್ರತ್ಯೇಕ ಅಪ್ಲಿಕೇಷನ್ ಲಾಂಚ್ ಮಾಡಿದ ನಂತರ ಯಾವುದೇ ಗೊಂದಲ ಉಂಟಾಗಬಾರದು ಎನ್ನುವ ಕಾರಣಕ್ಕೆ ಸಾಫ್ಟ್ವೇರ್ ಸಿದ್ದಮಾಡುತ್ತಿದ್ದೇವೆ, ಕೆಲಸ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ರೈತರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳ | ಪ್ರೋತ್ಸಾಹಧನ ಕೂಡ 7 ರೂಪಾಯಿಗೆ ಹೆಚ್ಚಳ

ಮನೆ ಬಾಗಿಲಲ್ಲೇ ಅರ್ಜಿ ಸಲ್ಲಿಕೆ…

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೂಡ ಈ ಬಗ್ಗೆ ಮಾತನಾಡಿದ್ದು, ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಯೋಜನೆ ಜಾರಿ ಮಾಡಲಾಗುತ್ತದೆ. ಆತುರದಿಂದ ತಾಂತ್ರಿಕ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಸಮಯ ತೆಗೆದುಕೊಳ್ಳಲಾಗುತ್ತಿದೆ. ಬಾಪು ಕೇಂದ್ರ, ಪಂಚಾಯಿತಿ ಕೇಂದ್ರ, ಹಾಗೂ ಮೊಬೈಲ್ ಮೂಲಕವು ಅರ್ಜಿ ತುಂಬಲು ಅವಕಾಶ ನೀಡಲಾಗುತ್ತದೆ. ಜೊತೆಗೆ ಪಕ್ಷದ ಕಾರ್ಯಕರ್ತರು, ಜನಪ್ರಿತಿನಿಧಿಗಳು ಮನೆ ಮನೆಗೆ ತೆರಳಿ ಪಕ್ಷ ಭೇದ ಮರೆತು ಅರ್ಜಿ ತುಂಬಬೇಕು ಎಂದು ಹೇಳಿದ್ದಾರೆ.

ಪ್ರತಿ ಬೂತ್ ಮಟ್ಟದಲ್ಲಿ ವಿದ್ಯಾವಂತ ಮಹಿಳೆ ಮತ್ತು ಪುರುಷರು ಮನೆ ಮನೆಗೆ ತೆರಳಿ ಅರ್ಜಿ ತುಂಬಲಿದ್ದಾರೆ. ಇದಕ್ಕೆ ಯಾವುದೇ ಹಣ ಕೊಡುವಂತಿಲ್ಲ, ಅರ್ಜಿ ತುಂಬಲು ಲಂಚ ಪಡೆಯಬಾರದು, ಒಂದು ವೇಳೆ ಹಣ ಪಡೆದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇವುಗಳನ್ನೂ ಓದಿ:

ದುಬಾರಿ ಕರೆಂಟ್ ಬಿಲ್ ಕಂತುಗಳಲ್ಲಿ ಪಾವತಿಸಲು ಇಲ್ಲಿದೆ ಅವಕಾಶ

ಆಗಸ್ಟ್ 18ರೊಳಗೆ ಮಹಿಳೆಯರ ಖಾತೆಗೆ 2,000 ರೂಪಾಯಿ ಜಮಾ

ಹೊಸ APL, BPL ರೇಷನ್ ಕಾರ್ಡ್ ಪಡೆಯಲು ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

ಜೂನ್ 30ರೊಳಗೆ eKYC ಮಾಡದಿದ್ದರೆ ರೈತರಿಗೆ ವರ್ಷಕ್ಕೆ 10,000 ರೂಪಾಯಿ ನಷ್ಟ!

ಇದೋ ರೈತರು ಮೊಬೈಲ್‌ನಲ್ಲೇ ಬೆಳೆವಿಮೆ ಚೆಕ್ ಮಾಡುವ ಸರಳ ವಿಧಾನ

 

ನಿರಂತರ ಉಚಿತ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

error: Content is protected !!