ಉದ್ಯೋಗ

SSLC ಪಾಸಾದವರಿಂದ HAL ಫೈಯರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ತುಮಕೂರಿನಲ್ಲಿ ಕೆಲಸ | HAL Recruitment 2023

WhatsApp Group Join Now
Telegram Group Join Now

ಪ್ರತಿಷ್ಠಿತ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಫೈಯರ್ ಮ್ಯಾನ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತುಮಕೂರಿನಲ್ಲಿ ಕೆಲಸವಿದ್ದು; ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮಾಸಿಕ ವೇತನ, ಅರ್ಜಿ ಸಲ್ಲಿಕೆ ಲಿಂಕ್ ಇತ್ಯಾದಿ ಮಾಹಿತಿ ಇಲ್ಲಿದೆ…

ಫೈಯರ್ ಮ್ಯಾನ್ (FireMan) ಹುದ್ದೆಗಳಿಗೆ ಪ್ರತಿಷ್ಠಿತ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 10 ಫೈಯರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ತುಮಕೂರಿನಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೀಗಾಗಿ ಸ್ಥಳೀಯ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು; ಜನವರಿ 15ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಖಾಲಿ ಇರುವ ಒಟ್ಟು 10 ಫೈಯರ್ ಮ್ಯಾನ್ (FireMan) ಹುದ್ದೆಗಳಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಅಥವಾ 12ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಫೈಯರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಅನುಗುಣವಾಗಿ 28 ವರ್ಷ ಮೀರಿರಬಾರದು. OBC ಅಭ್ಯರ್ಥಿಗಳಿಗೆ 03 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿಡಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: SSLC ಪಾಸಾದವರಿಂದ ರೈಲ್ವೇ ಇಲಾಖೆಯ 4,103 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾಸಿಕ ವೇತನ: ಹಿಂದೂಸ್ಥಾನ್ ಏರೋನಾಟಿಕ್ಸ್ ಫೈಯರ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ವೇತನವಾಗಿ 21,000 ರೂಪಾಯಿ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ: ಹಿಂದೂಸ್ಥಾನ್ ಏರೋನಾಟಿಕ್ಸ್ ಫೈಯರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 15, 2023 ಕೊನೆಯ ದಿನಾಂಕವಾಗಿದೆ. ಜನವರಿ 27, 2023ರಂದು ದೈಹಿಕ ಪರೀಕ್ಷೆ ನಡೆಯಲಿದೆ. ಜನವರಿ 29, 2023ರಂದು  ಲಿಖಿತ ಪರೀಕ್ಷೆ ನಡೆಯಲಿದೆ.

ಹಿಂದೂಸ್ಥಾನ್ ಏರೋನಾಟಿಕ್ಸ್ ಫೈಯರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್  ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಫೈಯರ್ ಮ್ಯಾನ್ ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಕೃತ ವೆಬ್‌ಸೈಟ್ ಭೇಟಿ ಆನ್‌ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: ರಾಜ್ಯ ಸರ್ಕಾರಿ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಭಿಯಾನ ಶುರು

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!