ಉದ್ಯೋಗ

ಪದವಿ ಮುಗಿಸಿದವರಿಗೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ 2,100 ಹುದ್ದೆಗಳ ಉದ್ಯೋಗವಕಾಶ | IDBI Bank recruitment 2023| Apply online @www.idbibank.in

WhatsApp Group Join Now
Telegram Group Join Now

ಕೇಂದ್ರ ಸರಕಾರದ ಅಧೀನದ ಐಡಿಬಿಐ ಬ್ಯಾಂಕ್‌ನಲ್ಲಿ ಖಾಲಿ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ…

IDBI Bank recruitment 2023 : ಭಾರತೀಯ ಜೀವವಿಮಾ ನಿಗಮ (LIC) ಮತ್ತು ಭಾರತ ಸರ್ಕಾರದ (Indian Government) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಟಿತ ಹಣಕಾಸು ಸಂಸ್ಥೆ ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್‌ನಲ್ಲಿ (Industrial Development Bank of India) ಖಾಲಿ ಇರುವ ಅನೇಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಹೊರಡಿಸಿದೆ.

IDBI Bank recruitment 2023 ಸಂಕ್ಷಿಪ್ತ ವಿವರ

  • ನೇಮಕಾತಿ ಸಂಸ್ಥೆ : Industrial Development Bank of India
  • ಒಟ್ಟು ಖಾಲಿ ಹುದ್ದೆಗಳು : 2,100
  • ಹುದ್ದೆಗಳ ಹೆಸರು : ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ಸ್ (ಸೇಲ್ಸ್ ಅಂಡ್ ಆಪರೇಷನ್ )
  • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
  • ಉದ್ಯೋಗ ಸ್ಥಳ : ಭಾರತದಾದ್ಯಂತ

ಇದನ್ನೂ ಓದಿ: ಇಲ್ಲಿವೆ ಪಿಯುಸಿ ಪಾಸಾದವರಿಗೆ ಹೆಚ್ಚು ಸಂಬಳ ನೀಡುವ ಕೇಂದ್ರ ಸರ್ಕಾರಿ ಹುದ್ದೆಗಳು | PUC Passed Central Government High Salary Jobs

  • ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ – 800 ಹುದ್ದೆಗಳು
  • ಎಕ್ಸಿಕ್ಯೂಟಿವ್ಸ್ ( ಸೇಲ್ಸ್ ಅಂಡ್ ಆಪರೇಷನ್) – 1300 ಹುದ್ದೆಗಳು

ವಿದ್ಯಾರ್ಹತೆ ಏನು? IDBI recruitment educational qualification : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: 570 ಪಿಡಿಒ ಹುದ್ದೆಗಳ ನೇಮಕಾತಿ: ಪರೀಕ್ಷೆ ತಯಾರಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka PDO Recruitment 2023

ಮಾಸಿಕ ಸಂಬಳವೆಷ್ಟು? IDBI Recruitment 2023 : ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹51,166 ರಿಂದ ₹54,166ರ ವರೆಗೆ ನೀಡಲಾಗುತ್ತದೆ. ಎಕ್ಸಿಕ್ಯೂಟಿವ್ಸ್ (ಸೇಲ್ಸ್ ಅಂಡ್ ಆಪರೇಷನ್) ಆಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹29,000 ನೀಡಲಾಗುವುದು.

ಕರ್ನಾಟಕ ರಾಜ್ಯದಲ್ಲಿ ಪರೀಕ್ಷೆ ಕೇಂದ್ರಗಳು : ಬೆಂಗಳೂರು, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಕಲಬುರಗಿ, ಬೀದರ್, ದಾವಣಗೆರೆ ಮತ್ತು ಉಡುಪಿ

ಇದನ್ನೂ ಓದಿ: PUC ಪಾಸಾದವರಿಂದ ಫಾರೆಸ್ಟ್ ಗಾಡ್೯ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ ಎಷ್ಟಿರಬೇಕು? : IDBI Bank recruitment 2023 ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಶುಲ್ಕ ಎಷ್ಟು? : ಅರ್ಜಿ ಸಲ್ಲಿಸಲು SC/ST ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 200 ರೂಪಾಯಿ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 1,000 ರೂಪಾಯಿ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಕೆಳಗೆ ನೀಡಿರುವ (IDBI official website) ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಸಲ್ಲಿಸಬೇಕು.

ಇದನ್ನೂ ಓದಿ: SSLC ಪಾಸಾದವರಿಗೆ ಚಾಲಕ, ಜವಾನ ಹುದ್ದೆಗಳು: ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-12-2023

ಅಧಿಸೂಚನೆ : Download
ಅಧಿಕೃತ ಜಾಲತಾಣ : Click here
ಸಹಾಯವಾಣ : +91-18002094324

WhatsApp Group Join Now
Telegram Group Join Now

Related Posts

error: Content is protected !!