ಉದ್ಯೋಗ

IDBI Executive Recruitment 2023: ಐಡಿಬಿಐ ಬ್ಯಾಂಕ್ 1,036 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ | ಸಂಬಳ 34,000 ರೂಪಾಯಿ

WhatsApp Group Join Now
Telegram Group Join Now

ಎಲ್‌ಐಸಿ ಹಾಗೂ ಕೇಂದ್ರ ಸರಕಾರದ ಒಡೆತನದ ಐಡಿಬಿಐ ಬ್ಯಾಂಕ್ ಒಟ್ಟು 1,036 ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಕ್ಕೆ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ…

ದೇಶದ ಕೆಲವೇ ಕೆಲವು ಪ್ರಮುಖ ಬ್ಯಾಂಕ್‌ಗಳಲ್ಲಿ ಐಡಿಬಿಐ ಬ್ಯಾಂಕ್ ಕೂಡ ಒಂದು. ಭಾರತೀಯ ಜೀವ ವಿಮಾ ನಿಗಮ (LIC) ಹಾಗೂ ಕೇಂದ್ರ ಸರಕಾರದ ಒಡೆತನದ ಈ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವುದೇ ಒಂದು ಹೆಮ್ಮೆ. ಇದಕ್ಕೆ ಪೂರಕವೆಂಬ೦ತೆ ಇದೀಗ ಐಡಿಬಿಐ ಬ್ಯಾಂಕ್ ಉದ್ಯೋಗಾಕ್ಷಿಗಳಿಗೆ ಸಂತಸದ ಸುದ್ದಿ ನೀಡಿದ್ದು; ಒಟ್ಟು 1,036 ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಕ್ಕೆ ಪದವೀಧರರಿಂದ ಅರ್ಜಿ ಆಹ್ವಾನಿಸಿದೆ.

ಇವು ಗುತ್ತಿಗೆ ಆಧಾರದ ಹುದ್ದೆಗಳಾಗಿದ್ದು; ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಯಾವುದೇ ಶುಲ್ಕವಿಲ್ಲ; ಬರಲಿರುವ ಜೂನ್ 07, 2023ರ ಒಳಗೆ ಅರ್ಜಿ ಸಲ್ಲಿಸುವ ಮೂಲಕ ಅರ್ಹ ಅಭ್ಯರ್ಥಿಗಳು ಈ ಸದಾವಕಾಶ ಬಳಸಿಕೊಳ್ಳಬಹುದು.

KSHD Recruitment 2023: ತೋಟಗಾರಿಕಾ ಇಲಾಖೆ ನೇಮಕಾತಿ | ಬರೋಬ್ಬರಿ 5,465 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ| ಸಂಬಳ 52,650-97,100 ರೂಪಾಯಿ…

ವಿದ್ಯಾರ್ಹತೆ ಏನು?

ಮೊದಲೇ ಹೇಳಿದಂತೆ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಮತ್ತು ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕು. ಡಿಪ್ಲೊಮಾ ಮಾಡಿದವರನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ವಯೋಮಿತಿ ಎಷ್ಟು?

  • ಕನಿಷ್ಠ ವಯಸ್ಸು 20 ವರ್ಷ
  • ಗರಿಷ್ಠ ವಯಸ್ಸು 25 ವರ್ಷ

ವಯೋಮಿತಿಯನ್ನು ಮೇ 1, 2023ಕ್ಕೆ ಲೆಕ್ಕ ಹಾಕಲಾಗುತ್ತದೆ. ಎಸ್‌ಸಿ, ಎಸ್‌ಟಿ, ಓಬಿಸಿ, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಆಯಾಯ ವರ್ಗಕ್ಕೆ ಅನುಗುಣವಾಗಿ 03, 05, 10 ವರ್ಷಗಳ ಸಡಿಲಿಕೆ ಇದೆ.

ರಾಜ್ಯದಲ್ಲಿ ಈ ವರ್ಷ ಕೈ ಕೊಡಲಿದೆಯಾ ಮಳೆ? | ಎಚ್ಚರಿಕೆ ಕೊಟ್ಟ ವಿಶ್ವ ಹವಾಮಾನ ಸಂಸ್ಥೆ

ಸಂಬಳವೆಷ್ಟು?

ಐಡಿಬಿಐ ಬ್ಯಾಂಕ್‌ನಲ್ಲಿನ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಮೂರು ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅನುಭವದ ಆಧಾರದ ಮೇಲೆ ಒಂದೊ೦ದು ವರ್ಷಕ್ಕೆ ಒಂದೊ೦ದು ರೀತಿಯ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ…

  • ಮೊದಲ ವರ್ಷ ಮಾಸಿಕ 29,000
  • ಎರಡನೇ ವರ್ಷ ಮಾಸಿಕ 31,000
  • ಮೂರನೇ ವರ್ಷ ಮಾಸಿಕ 34,000

ವಿಶೇಷವೆಂದರೆ ಮೂರು ವರ್ಷ ಪೂರೈಸಿದವರು ಗ್ರೇಡ್ ‘ಎ’ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.

Zero Interest Crop Loan: 5 ಲಕ್ಷ ರೂಪಾಯಿ ಶೂನ್ಯ ಬಡ್ಡಿ ಬೆಳೆಸಾಲ | ರೈತರು ಸಾಲ ಪಡೆಯಲು ಏನು ಮಾಡಬೇಕು?

ನೇಮಕ ಹೇಗೆ ನಡೆಯುತ್ತದೆ?

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬರಲಿರುವ ಜುಲೈನಲ್ಲಿ ಆನ್‌ಲೈನ್ ಟೆಸ್ಟ್ ನಡೆಸಲಾಗುತ್ತದೆ. ಸದರಿ ಆನ್‌ಲೈನ್ ಟೆಸ್ಟ್ ಅನ್ನು ರಾಜ್ಯದ ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಸಲಾಗುತ್ತದೆ.

ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಆನ್‌ಲೈನ್ ಟೆಸ್ಟ್ ನಡೆಸಲಾಗುತ್ತಿದ್ದು, ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 200 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆಯು ನಾಲ್ಕು ವಿಷಯಗಳನ್ನು ಒಳಗೊಂಡಿದ್ದು ಪ್ರತಿ ವಿಷಯದಲ್ಲಿಯೂ ಅಭ್ಯರ್ಥಿಯು ಅರ್ಹತಾ ಅಂಕ ಪಡೆದಿರಬೇಕಾಗುತ್ತದೆ. ಆಲ್‌ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಿ, ವೈದ್ಯಕೀಯ ಪರೀಕ್ಷೆಗೊಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನ:
07-06-2023
ಆನ್‌ಲೈನ್‌ನ ಪರೀಕ್ಷೆಯ ದಿನಾಂಕ:02-07-2023

ಐಡಿಬಿಐ ಬ್ಯಾಂಕ್ ಎಕ್ಸಿಕ್ಯೂಟಿವ್ ಹುದ್ದೆಗಳ ಕುರಿತ ಸಮಗ್ರ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಉದ್ಯೋಗಾಂಕ್ಷಿ ಸ್ನೇಹಿತರಿಗೆ, ಬಂಧುಗಳಿಗೆ ಮರೆಯದೇ ಶೇರ್ ಮಾಡಿ

ಇದನ್ನೂ ಓದಿ:

ಇಲ್ಲಿದೆ ಅಡಿಕೆ ತೋಟದ ಅಧಿಕ ಇಳುವರಿಯ ಗುಟ್ಟು | ಈ ಸರಳ ವಿಧಾನ ಎಲ್ಲರೂ ಅನುಸರಿಸಬಹುದು

ಬೇಸಿಗೆಗೆ ಅಡಿಕೆ ತೋಟಕ್ಕೆ ಜೀವಾಮೃತವೇ ಜೀವಾಳ | ಬೇಸಿಗೆಗೆ ತಪ್ಪದೇ ಅನುಸರಿಸಿ ಈ ವಿಧಾನ

4-5 ವರ್ಷದಲ್ಲೇ ಫಸಲು ನೀಡುವ ಅಪ್ಪೆಮಿಡಿ ಮಾವು ತಳಿ ಅಭಿವೃದ್ಧಿ | ರೈತರಿಗೆ ವರದಾನ ಈ ಮಾವು

ಹಸು ಎಮ್ಮೆಗಳ ಸರ್ವ ರೋಗಕ್ಕೆ ಇಲ್ಲಿದೆ ಪವರ್‌ಫುಲ್ ನಾಟಿ ಔಷಧಿ | ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇ ಬೇಕಾದ ಮಾಹಿತಿ

2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಕುರಿ ಸೊಸೈಟಿ ರಚನೆಗೆ ರೂ.5 ಲಕ್ಷ ಪ್ರೋತ್ಸಾಹ ಧನ | ಸದಸ್ಯರಿಗೆ ಸಿಗಲಿದೆ ಕುರಿ ನಿಗಮದಿಂದ ಭರ್ಜರಿ ಸೌಲಭ್ಯ

ಹಸುವಿನ ಹಾಲಿನ ಡಿಗ್ರಿ ಹೆಚ್ಚಿಸಲು ಈ ವಿಧಾನ ಅನುಸರಿಸಿ…

ಹಸು, ಎಮ್ಮೆ ಗಂಜಲದಿಂದ ನೀವೆ ತಯಾರಿಸಿಕೊಳ್ಳಿ ಸಾವಯವ ಯೂರಿಯಾ ಗೊಬ್ಬರ

ಹಸು, ಎಮ್ಮೆಗಳ ಹಾಲು ಹೆಚ್ಚಿಸಲು ಒಂದು ಹಿಡಿ ಅಜೋಲ್ಲಾ ಸಾಕು | ಇದು ಹಸು, ಎಮ್ಮೆ, ಕೋಳಿ, ಕುರಿ-ಮೇಕೆಗಳ ಟಾನಿಕ್

 

ಜಾನುವಾರುಗಳ ಮೃಷ್ಟಾನ್ನ ರಸಮೇವು | ಬೇಸಿಗೆಗೆ ಮೇವಿನ ಕೊರತೆ ನೀಗುವ ಸೈಲೇಜ್ ತಯಾರಿಕೆ ಹೇಗೆ?

ಈ ಬೆಳೆಯಿಂದ ಒಂದು ಎಕರೆಯಲ್ಲಿ ತಿಂಗಳಿಗೆ 2 ಲಕ್ಷ ಆದಾಯ | ಸಣ್ಣ ರೈತರ ಬದುಕು ಬಂಗಾರವಾಗಿಸುವ ಬೆಳೆ

ಪ್ರಮುಖ ಲಿಂಕ್‌ಗಳು

 

 

 

 

ಉದ್ಯೋಗ ಮಾಹಿತಿಇಲ್ಲಿ ಕ್ಲಿಕ್ ಮಾಡಿ
ಸರಕಾರಿ ಯೋಜನೆಇಲ್ಲಿ ಕ್ಲಿಕ್ ಮಾಡಿ
ಕೃಷಿ ಮಾಹಿತಿಇಲ್ಲಿ ಕ್ಲಿಕ್ ಮಾಡಿ
ವಾಟ್ಸಾಪ್ ಗ್ರುಪ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗ್ರುಪ್ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now

Related Posts

error: Content is protected !!