ಉದ್ಯೋಗ

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ SSLC ಅಭ್ಯರ್ಥಿಗಳಿಂದ ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ | IISc Recruitment 2022

WhatsApp Group Join Now
Telegram Group Join Now

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (Indian Institute of Science-IISc) ಖಾಲಿ ಇರುವ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಸಂಬಳ ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ…

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (Indian Institute of Science-IISc) ಖಾಲಿ ಇರುವ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಕರ್ಷಕ ವೇತನದ ಈ ಹುದ್ದೆಯ ವಿಶೇಷತೆ ಎಂದರೆ 50 ವರ್ಷದೊಳಗಿನ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ-2022 ನಿಗದಿಪಡಿಸಿದ ಕೊನೆಯ ದಿನಾಂಕದ ಮೊದಲು ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಕೋರಲಾಗಿದೆ.

ಹುದ್ದೆಗಳು ಮತ್ತು ಸಂಸ್ಥೆಯ ವಿವರ

ಪಂಗಡವಾರು ಯುಆರ್-07, ಎಸ್‌ಸಿ-01, ಎಸ್‌ಟಿ-01, ಒಬಿಸಿ-04 ಹಾಗೂ ಇಡಬ್ಲ್ಯೂಎಸ್-02 ಸೇರಿ ಒಟ್ಟು 15 ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ.

1909ರಲ್ಲಿ ಮೈಸೂರಿನ ಮಹಾರಾಜರಿಂದ ಶಂಖು ಸ್ಥಾಪನೆಯಾಗಿರುವ ಭಾರತೀಯ ವಿಜ್ಞಾನ ಸಂಸ್ಥೆಯು ಉನ್ನತಮಟ್ಟದ ವಿದ್ಯಾಭ್ಯಾಸಕ್ಕೆ ಹೆಸರುವಾಸಿಯಾಗಿದೆ. ಸಂಶೋಧನೆಗೆ ಕೊಡುವ ಪಿ.ಹೆಚ.ಡಿ, ಎಂ.ಎಸ್ ಪದವಿಗಳು ಹಾಗೂ ಎಂ.ಇ, ಎಂಬಿಎ ಪದವಿ ಶಿಕ್ಷಣವನ್ನು ಇಲ್ಲಿ ನೀಡಲಾಗುತ್ತದೆ. ಇಲ್ಲಿ ಒಟ್ಟು 40 ವಿಭಾಗಗಳಿದ್ದು, ಜಗತ್ತಿನ ಉತ್ತಮ ಮೂಲಸೌಕರ್ಯಗಳನ್ನು ಹೊಂದಿದೆ. ಕ್ಯಾಂಟಿನ್‌ಗಳು, ಜಿಮ್ಖಾನಾ, ಫುಟ್‌ಬಾಲ್ ಮತ್ತು ಕ್ರಿಕೇಟ್ ಮೈದಾನ, ಹೋಟೆಲ್‌ಗಳು, ಮಹಿಳೆ ಹಾಗೂ ಪುರುಷರ ಹಾಸ್ಟೆಲ್‌ಗಳನ್ನು ಇದು ಒಳಗೊಂಡಿದೆ. ಈ ಸಂಸ್ಥೆಯ ಆವರಣದಲ್ಲಿ ಉದ್ಯೋಗಿಗಳಿಗೆ ವಸತಿಗೃಹಗಳು, ಗ್ರಂಥಾಲಯಗಳು, ಶಾಪಿಂಗ್ ಕೇಂದ್ರಗಳು ಹಾಗು ಮಸಾಜ್ ಪಾರ್ಲರ್‌ಗಳನ್ನು ಕೂಡ ಹೊಂದಿದೆ.

ಇದನ್ನೂ ಓದಿ: 1,55,927 ಅರ್ಜಿದಾರರಿಗೆ ಶೀಘ್ರದಲ್ಲಿಯೇ ಸಿಗಲಿದೆ ಹೊಸ BPL ಕಾರ್ಡ್

ವೇತನ ಶ್ರೇಣಿ: ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿಯ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.25,000/- ಸಂಬಳ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು ಡಿಸೆಂಬರ್-2022 ರಂತೆ 50 ವರ್ಷಗಳು. ಯಾವುದೇ ರೀತಿಯ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ವ್ಯಾಪಾರ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಜಿ ಸಲ್ಲಿಕೆ ದಿನಾಂಕ: ನವೆಂಬರ್ 30, 2022ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಹಾಗೂ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

====================================

ಇವುಗಳನ್ನೂ ಓದಿ:

ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

20 ಕುರಿ, 1 ಮೇಕೆ ಗಿಫ್ಟ್: ಮುಖ್ಯಮಂತ್ರಿ ಘೋಷಣೆ | ಈ ಗಿಫ್ಟ್ ಪಡೆಯಲು ಯಾರೆಲ್ಲ ಅರ್ಹರು?

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!