ಸರಕಾರಿ ಯೋಜನೆ

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ | karnataka postal circle recruitment 2023

WhatsApp Group Join Now
Telegram Group Join Now

ಕರ್ನಾಟಕದ ವಿವಿಧ ಜಿಲ್ಲೆಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ 3,036 ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವ ಅಂಚೆ ಕಚೇರಿಯಲ್ಲಿ ಎಷ್ಟು ಹುದ್ದೆಗಳು? ಇವು ಯಾರ‍್ಯಾರಿಗೆ ಮೀಸಲಾಗಿದೆ? ಎಂಬ ಮಾಹಿತಿ ಇಲ್ಲಿದೆ

ಭಾರತೀಯ ಅಂಚೆ ಇಲಾಖೆಯು ದೇಶದಾದ್ಯಂತ ಖಾಲಿ ಇರುವ 40,889 ಪೋಸ್ಟ್ ಮಾಸ್ಟರ್ ಅಥವಾ ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆ ಓದಲು, ಬರೆಯಲು, ಮಾತನಾಡಲು ಬಲ್ಲ ಅಭ್ಯರ್ಥಿಗಳಿಗೆ 3,036 ಹುದ್ದೆಗಳು ಮೀಸಲಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಇದೇ ಫೆಬ್ರವರಿ 16ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಸಂಬಳ ಎಷ್ಟು?: ಗ್ರಾಮೀಣ ಡಾಕ್ ಸೇವಕ್ ಹುದ್ದೆಯನ್ನು ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (BPM), ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್, ಡಾಕ್ ಸೇವಕ್ ಎಂದು ವಿಂಗಡಿಸಲಾಗಿದ್ದು; ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ 12,000 ರಿಂದ 29,380 ರೂಪಾಯಿ ಸಂಬಳ ನೀಡಲಾಗುತ್ತದೆ. ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್ ಹಾಗೂ ಡಾಕ್ ಸೇವಕ್  (ABPM/Dak Sevak) ಹುದ್ದೆಗಳಿಗೆ 10,000 ರಿಂದ 24,470 ರೂಪಾಯಿಗಳ ವರೆಗೆ ಮಾಸಿಕ ಸಂಬಳ ನಿಗಿದಿ ಮಾಡಲಾಗಿದೆ.

ವಯೋಮಿತಿ: ಅಭ್ಯರ್ಥಿಗಳು ಫೆಬ್ರವರಿ 16, 2023ರಂತೆ ಕನಿಷ್ಠ 18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ 40 ವರ್ಷಗಳು ಮೀರಬಾರದು.

ವಯೋಮಿತಿ ಸಡಿಲಿಕೆ:  OBC ಅಭ್ಯರ್ಥಿಗಳಿಗೆ 03 ವರ್ಷಗಳು, SC/ST ಅಭ್ಯರ್ಥಿಗಳಿಗೆ 05 ವರ್ಷಗಳು, PwD (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷಗಳು, PwD (OBC) ಅಭ್ಯರ್ಥಿಗಳಿಗೆ 13 ವರ್ಷಗಳು, PwD (SC/ST) ಅಭ್ಯರ್ಥಿಗಳಿಗೆ 15 ವರ್ಷಗಳು

ಇದನ್ನೂ ಓದಿ: SSLC ಪಾಸಾದವರಿಂದ HAL ಫೈಯರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ತುಮಕೂರಿನಲ್ಲಿ ಕೆಲಸ

ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಪಾಸ್ ಆಗಿರಬೇಕು. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಉತ್ತೀರ್ಣರಾಗಿರಬೇಕು. ಬಹುಮುಖ್ಯವಾಗಿ ಅರ್ಜಿದಾರರು ಸ್ಥಳೀಯ ಭಾಷೆಯನ್ನು ಓದಲು, ಬರೆಯಲು ಮತ್ತು ಮಾತನಾಡಲು ಬಲ್ಲವರಾಗಿರಬೇಕು. ಜತೆಗೆ ಕಂಪ್ಯೂಟರ್ ಬಳಸಲು ತಿಳಿದಿರಬೇಕು. ಸೈಕಲ್ ಹೊಡೆಯಲು ಬರುತ್ತಿರಬೇಕು.

ಜಿಲ್ಲಾವಾರು ಹುದ್ದೆಗಳನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರಾಜ್ಯದ ವಿವಿಧ ವಿಭಾಗೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ 3,036 ಹುದ್ದೆಗಳನ್ನು ಮೀಸಲಾತಿಯನ್ವಯ ಹಂಚಿಕೆ ಮಾಡಲಾಗಿದೆ. ಖಾಲಿ ಇರುವ ಈ ಹುದ್ದೆಗಳು ಯಾರಿಗೆ ಮೀಸಲಾಗಿದೆ ಎಂಬ ಮಾಹಿತಿಯನ್ನು ಮೊಬೈಲ್‌ನಲ್ಲಿಯೇ ಚೆಕ್ ಮಾಡಬಹುದು.

ಕರ್ನಾಟಕದ ಯಾವ್ಯಾವ  ಜಿಲ್ಲೆಯಲ್ಲಿ ಪೋಸ್ಟ್‌ಮ್ಯಾನ್ ಹುದ್ದೆಗಳು ಖಾಲಿ ಇವೆ ಎಂಬುದನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. Idian Post ವೆಬ್‌ಸೈಟ್‌ನ Karnataka Circle / GDS Online Engagement ಪುಟ ತರೆದುಕೊಳ್ಳುತ್ತದೆ. ಅದರಲ್ಲಿ ಕಾಣುವ Select Divisionನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿ ಬಲಭಾಗದಲ್ಲಿರುವ View Post ಬಟನ್ ಒತ್ತಿದರೆ ನಿಮ್ಮ ಜಿಲ್ಲೆಯಲ್ಲಿ ಎಲ್ಲೆಲ್ಲಿ ಅಂಚೆ ಕಚೇರಿಗಳಿವೆ? ಎಷ್ಟು ಹುದ್ದೆಗಳಿವೆ? ಎಂಬ ಮಾಹಿತಿ ತರೆದುಕೊಳ್ಳುತ್ತದೆ. ಇದರಲ್ಲಿ ಯಾವ ಅಂಚೆ ಕಚೇರಿ, ಯಾವ ಹುದ್ದೆ, ಯಾರಿಗೆ ಮೀಸಲಾಗಿದೆ ಎಂಬ ಮಾಹಿತಿಯನ್ನು ನೋಡಬಹುದು.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ | 1.4 ಲಕ್ಷ ವಿದ್ಯಾರ್ಥಿಗಳು ನಿರೀಕ್ಷೆಯಲ್ಲಿ

ಅರ್ಜಿ ಸಲ್ಲಿಕೆ ದಿನಾಂಕ: ಭಾರತೀಯ ಅಂಚೆ ಇಲಾಖೆಯ ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಪೋಸ್ಟ್ ಮಾಸ್ಟರ್ ಹಾಗೂ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಇದೇ ಜನವರಿ 27, 2023ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ 16 ಫೆಬ್ರವರಿ 2023

ಸಹಾಯವಾಣಿ ಸಂಖ್ಯೆ: 080-22850002

ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ: https://indiapostgdsonline.cept.gov.in/

ನಿಖರ ಉದ್ಯೋಗ Newsಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ

ಇದನ್ನೂ ಓದಿ: 

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

ಕಾರ್ಮಿಕ ಕಾರ್ಡ್ ರದ್ದು ಅಭಿಯಾನ | ನಿಮ್ಮ ಕಾರ್ಡ್ ರದ್ದಾದರೆ ಏನು ಮಾಡಬೇಕು?

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!