ಸರಕಾರಿ ಯೋಜನೆ

ಡಿಸೆಂಬರ್ 15ರೊಳಗೆ ಅರ್ಜಿ ಸಲ್ಲಿಸಿ ₹3.50 ಲಕ್ಷ ಬೋರ್‌ವೆಲ್ ಸಹಾಯಧನ ಪಡೆಯಿರಿ | Jeevajala irrigation scheme

WhatsApp Group Join Now
Telegram Group Join Now

ಸಣ್ಣ ಮತ್ತು ಅತಿ ಸಣ್ಣ ರೈತರ ನೀರಾವರಿ ವ್ಯವಸ್ಥೆಗಾಗಿ ಜೀವಜಲ ಯೋಜನೆಯಲ್ಲಿ ಕೊಳವೆಬಾವಿ ಮತ್ತು ತೆರದ ಬಾವಿ ಎರಡಕ್ಕೂ ಸಹಾಯಧನ ಹಾಗೂ ಸಾಲಸೌಲಭ್ಯ ಲಭ್ಯವಿದೆ. ಏನಿದು ಜೀವಜಲ ಯೋಜನೆ? ಇದಕ್ಕೆ ಯಾರೆಲ್ಲ ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಮಾಹಿತಿ…

ಸಣ್ಣ ಮತ್ತು ಅತಿ ಸಣ್ಣ ರೈತರ ನೀರಾವರಿ ವ್ಯವಸ್ಥೆಗಾಗಿ ಜೀವಜಲ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು; ಈ ಯೋಜನೆಯ ವಿಶೇಷವೆಂದರೆ ಕೊಳವೆಬಾವಿ ಮತ್ತು ತೆರದ ಬಾವಿ ಎರಡಕ್ಕೂ ಇಲ್ಲಿ ಸಹಾಯಧನ ಹಾಗೂ ಸಾಲಸೌಲಭ್ಯ ಲಭ್ಯವಿದೆ. ಅಷ್ಟೇ ಅಲ್ಲ ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆಗೂ ಇಲ್ಲಿ ಸಂಪೂರ್ಣ ಅನುದಾನ ಸಿಗಲಿದೆ.

2022ನೇ ಸಾಲಿನ ಜೀವಜಲ ನೀರಾವರಿ ಯೋಜನೆಗೆ ರ್ಹ ರೈತರಿಂದ ಅಕ್ಟೋಬರ್ 15, 2022ರಂದು ಅರ್ಜಿ ಆಹ್ವಾನಿಸಲಾಗಿತ್ತು. ನವೆಂಬರ್ 30, 2022 ಅರ್ಜಿ  ಸಲ್ಲಿಕೆಯ ಕೊನೆಯ ದಿನಾಂಕವಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸುವಂತೆ ಸಾರ್ವಜನಿಕರಿಂದ ಆಗ್ರಹ ಕೇಳಿ ಬಂದ ಕಾರಣ ಅರ್ಜಿ ಸಲ್ಲಿಕೆ ಅಂತಿಮ ದಿನಾಂಕವನ್ನು ಇದೇ ಡಿಸೆಂಬರ್ 15, 2022ರ ವರೆಗೂ ವಿಸ್ತರಿಸಲಾಗಿದೆ. ಆಸಕ್ತ, ಅರ್ಹ ಸಣ್ಣ ಮತ್ತು ಅತೀ ಸದಣ್ಣ ರೈತರು ಡಿಸೆಂಬರ್ 15ರೊಳಗೆ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಇದನ್ನೂ ಓದಿ: ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ಏನಿದು ಜೀವಜನ ಯೋಜನೆ?

ಹಿಂದುಳಿದ ವರ್ಗದ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಇರುವ ಗಂಗಾಕಲ್ಯಾಣ ಯೋಜನೆಯ ಮಾದರಿಯಲ್ಲಿ ಸರಕಾರ ಆಯಾಯ ಜಾತಿ, ಸಮುದಾಯದ ರೈತರ ಹಿತಕ್ಕೆ ಪೂರವಾಗಿ ಆಯಾಯ ಜಾತಿ ಸಮುದಾಯದ ನಿಮಗಳದ ಮೂಲಕ ವಿವಿಧ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇವುಗಳಲ್ಲಿ ಜೀವಜಲ ನೀರಾವರಿ ಯೋಜನೆಯೂ ಒಂದು. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದಿಂದ ಈ ಯೋಜನೆ ಅನುಷ್ಠಾನಗೊಳ್ಳಲಿದ್ದು; ಪ್ರವರ್ಗ 3ಬಿ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರ ಇದರ ಪ್ರಯೋಜನ ಪಡೆಯಬಹುದು.

ಈ ಯೋಜನೆಯ ಫಲಾನುಭವಿಗಳು ವೀರಶೈವ-ಲಿಂಗಾಯತ (ಪ್ರವರ್ಗ-3ಬಿ) ಸೇರಿದವರಾಗಿರಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಜತೆಗೆ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.

ಇದನ್ನೂ ಓದಿ: ದಿನಕ್ಕೆ 300 ರೂಪಾಯಿ ಭತ್ಯೆ ಸಹಿತ ಉಚಿತ ಮೀನುಗಾರಿಕೆ ತರಬೇತಿ

ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ

ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಟ ಒಂದು ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಟ ಎರಡು ಎಕರೆ ಜಮೀನು ಇರಬೇಕು.

ಘಟಕ ವೆಚ್ಚ: ರೂ.2.50 ಲಕ್ಷಗಳು ರೂ.2.00 ಲಕ್ಷಗಳ ಸಹಾಯಧನ (ಸಬ್ಸಿಡಿ) ಹಾಗೂ ವಾರ್ಷಿಕ ಶೇ.೪ರ ಬಡ್ಡಿದರದಲ್ಲಿ ರೂ. 50,000/-ಗಳ ಸಾಲ. ರೂ.2.00 ಲಕ್ಷಗಳ ಸಹಾಯಧನದಲ್ಲಿ ಕೊಳವೆ ಬಾವಿ ಕೊರೆಯುವ ವೆಚ್ಚ, ಪಂಪ್ಸೆಟ್ ಅಳವಡಿಕೆ ಹಾಗೂ ಪೂರಕ ಸಾಮಗ್ರಿಗಳ ಸರಬರಾಜಿಗೆ ರೂ.1.50 ಲಕ್ಷಗಳ ವೆಚ್ಚ ಭರಿಸಲಾಗುವುದು.

ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್.ಆರ್.ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ಧೀಕರಣ ವೆಚ್ಚವಾಗಿ, ಪ್ರತಿ ಕೊಳವೆ ಬಾವಿಗೆ ರೂ.50,000/-ಗಳಂತೆ ಪಾವತಿಸಲಾಗುವುದು.

ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.4.00 ಲಕ್ಷಗಳು, ಇದರಲ್ಲಿ ರೂ. 3.50 ಲಕ್ಷಗಳ ಸಹಾಯಧನ ಹಾಗೂ ರೂ.50,000/-ಗಳ ಸಾಲವಾಗಿರುತ್ತದೆ.

ಇದನ್ನೂ ಓದಿ: ಡಿಸೆಂಬರ್ 8ರಿಂದ 10ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಸಾಮೂಹಿಕ ನೀರಾವರಿ ಕೊಳವೆಬಾವಿ ಯೋಜನೆ

ವೀರಶೈವ-ಲಿಂಗಾಯತ ಸಮುದಾಯಕ್ಕೆ (ಪ್ರವರ್ಗ-3ಬಿ) ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವ 8 ಎಕರೆ ಮತ್ತು ಅದಕ್ಕಿಂತ ಹೆಚ್ಚಿನ ಜಮೀನಿಗೆ ಸಾಮೂಹಿಕವಾಗಿ ನೀರಾವರಿ ಸೌಲಭ್ಯ.

ಘಟಕ ವೆಚ್ಚ: 8-15 ಎಕರೆ ಜಮೀನಿಗೆ ರೂ.4.00 ಲಕ್ಷಗಳ ವೆಚ್ಚದಲ್ಲಿ ಎರಡು ಕೊಳವೆ ಬಾವಿ ಹಾಗೂ 15 ಎಕರೆಗಿಂತ ಹೆಚ್ಚು ಜಮೀನು ಒಳಪಡುವ ಘಟಕಗಳಿಗೆ ನಿಗದಿತ ಘಟಕ ವೆಚ್ಚ ರೂ.6.00 ಲಕ್ಷಗಳ ವೆಚ್ಚದಲ್ಲಿ ಮೂರು ಕೊಳವೆ ಬಾವಿಗಳನ್ನು ಕೊರೆಯಿಸಿ ಪಂಪ್‌ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡುವುದು ಹಾಗೂ ವಿದ್ಯುದ್ಧೀಕರಣಕ್ಕೆ ಠೇವಣಿ ಪಾವತಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರಾವರಿ ಸೌಲಭ್ಯ ಒದಗಿಸುವುದು. ಇದು ಪೂರ್ಣ ಅನುದಾನವಾಗಿರುತ್ತದೆ.

ತೆರೆದ ಬಾವಿ ಯೋಜನೆ: ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: ಪಿಯುಸಿ ಅಭ್ಯರ್ಥಿಗಳಿಗೆ ಕೇಂದ್ರ ಸರಕಾರದ ಭರ್ಜರಿ ನೌಕರಿ

ಸಾಮೂಹಿಕ ಏತ ನೀರಾವರಿ ಯೋಜನೆ

ಭೂಮಟ್ಟದಲ್ಲಿ ಶಾಶ್ವತವಾಗಿ ದೊರೆಯುವ ಜಲಸಂಪನ್ಮೂಲಗಳಾದ ನದಿ, ಕೆರೆ, ಹಳ್ಳ  ಇವುಗಳಿಗೆ ಮೋಟಾರ್ ಅಳವಡಿಸಿ ಪೈಪ್‌ಲೈನ್ ಮೂಲಕ ಖುಷ್ಕಿ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು. ಸಾಮೂಹಿಕ ನೀರಾವರಿ ಯೋಜನೆಗೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಸೌಲಭ್ಯ ಒದಗಿಸಲಾಗುವುದು.ಮರುಪಾವತಿ ಅವಧಿ: ಸಾಲದ ಮರುಪಾವತಿ ಅವಧಿ 3 ವರ್ಷಗಳು.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ದೂರವಾಣಿಗೆ 080-22865522 ಸಂಪರ್ಕಿಸಬಹುದು

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ಕಚೇರಿಗಳ ವಿಳಾಸ ಹಾಗೂ ಸಂಪರ್ಕ ಸಂಖ್ಯೆಗೆ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವಿವರಗಳಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

========================

ಇವುಗಳನ್ನೂ ಓದಿ:

ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ದಿನಕ್ಕೆ 300 ರೂಪಾಯಿ ಭತ್ಯೆ ಸಹಿತ ಉಚಿತ ಮೀನುಗಾರಿಕೆ ತರಬೇತಿ

ಮಣ್ಣಿನ ಆರೋಗ್ಯ ತಪಾಸಣೆ: ರೈತರಿಗೆ ಸಿಗಲಿದೆ ಅಧಿಕ ಆದಾಯ

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಕೂಡಲೇ ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!