ಸರಕಾರಿ ಯೋಜನೆ

ಜೇನು ಸಾಕಣೆ: ರೈತರಿಗೆ ಸಿಗಲಿದೆ ಭರ್ಜರಿ ಸಹಾಯಧನ | ಈ ಸೌಲಭ್ಯ ಪಡೆಯುವುದು ಹೇಗೆ? | Bee Farming

WhatsApp Group Join Now
Telegram Group Join Now

ಜೇನು ಸಾಕಣೆ ಮಾಡಲಿಚ್ಛಿಸುವ ರೈತರಿಗೆ ತೋಟಗಾರಿಕಾ ಇಲಾಖೆಯಿಂದ ಜೇನು ಕೃಷಿಗೆ ಭರ್ಜರಿ ಸಬ್ಸಿಡಿ ಸಿಗುತ್ತದೆ. ಯಾವ್ಯಾವ ರೈತರಿಗೆ ಎಷ್ಟೆಷ್ಟು ಸಹಾಯಧನ ಸಿಗಲಿದೆ? ಜೇನು ಸಾಕಣೆಯಿಂದ ರೈತರಿಗಾಗುವ ಲಾಭವೇನು? ಜೇನು ಉದ್ಯಮದಲ್ಲಿ ಲಾಭ ಗಳಿಕೆ ಹೇಗೆ? ಇತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ…

ಜೇನು ಸಾಕಣೆಯನ್ನೇ ಮುಖ್ಯ ಉದ್ಯಮವನ್ನಾಗಿ ಮಾಡಿಕೊಂಡಿರುವ ಶಿರಸಿಯ ಮಧುಕೇಶ್ವರ ಹೆಗಡೆ ಅವರಂಥ ಅನೇಕರು ಬಹುಕೋಟಿ ಆದಾಯ ಗಳಿಸುತ್ತಿದ್ದಾರೆ. ಜೇನು ಸಾಕಾಣಿಕೆಯನ್ನು ಕೃಷಿ ಜತೆಗೆ ಉಪ ಕಸುಬನ್ನಾಗಿ ಮಾಡಿಕೊಂಡಿರುವ ಹಲವರು ವರ್ಷಕ್ಕೆ 20ರಿಂದ 30 ಲಕ್ಷ ರೂಪಾಯಿ ಗಳಿಸುತ್ತಿರುವ ನಿದರ್ಶನಗಳಿವೆ. ತೀರಾ ಸಣ್ಣ ಮಟ್ಟದಲ್ಲಿ ಅಂದರೆ 5-10 ಜೇನು ಪೆಟ್ಟಿಗೆ ಇಟ್ಟುಕೊಂಡಿರುವವರು ಕೂಡ ಹೆಚ್ಚು ಪರಿಶ್ರಮವಿಲ್ಲದೆ ತಿಂಗಳಿಗೆ ಐದಾರು ಸಾವಿರ ರೂಪಾಯಿ ಗಳಿಸುವವರಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಯಂತ್ರಗಳಿಗೆ ಉಚಿತ ಡಿಸೇಲ್ ಪಡೆಯಲು ಮೊಬೈಲ್ ಮೂಲಕವೇ ಹೆಸರು ನೋಂದಣಿ ಮಾಡುವುದು ಹೇಗೆ?

ಹಾಗಂತ ಇವರೆಲ್ಲ ಲಕ್ಷ, ಕೋಟಿ ಬಂಡವಾಳ ಹೂಡಿದವರಲ್ಲ. ಅಸಲಿಗೆ ಜೇನು ಕೃಷಿಗೆ ದೊಡ್ಡ ಮಟ್ಟದ ಬಂಡವಾಳವೇ ಬೇಡ. ಕಡಿಮೆ ಬಂಡವಾಳ ಹೂಡಿ ಬಂಪರ್ ಆದಾಯ ಪಡೆಯುವ ವಿಶಿಷ್ಠ ಉಪ ಕಸುಬು ಇದು. ಜೇನು ಪ್ರಕೃತಿದತ್ತವಾಗಿ ಸೃಜಿಸುವ ಉತ್ಪನ್ನವಾದ್ದರಿಂದ ಇದಕ್ಕೆ ಯಾವುದೇ ರೀತಿಯ ನಿರ್ಧಿಷ್ಟ ಸ್ಥಳವೂ ಬೇಡ. ಜೇನಿಗೆ ಮಕರಂದ ಸವಿಯಲು ಪೂರಕವಾದ ಸ್ಥಳವಾದರೆ ಸಾಕು. ರೈತರು ಜಮೀನಿನ ಒಂದು ಭಾಗದಲ್ಲೇ ಇತರ ಕೃಷಿಯ ಜೊತೆಗೆ ಜೇನು ಸಾಕಾಣಿಕೆಯನ್ನು ನಡೆಸಬಹುದು.

ಹೆಚ್ಚಲಿದೆ ಕೃಷಿ-ತೋಟಗಾರಿಕೆ ಇಳುವರಿ

ಜೇನು ಸಾಕಣೆಯಿಂದ ನೇರ ಆದಾಯ ಮಾತ್ರವಲ್ಲ, ಜೇನು ಪರಾಗಸ್ಪರ್ಶದಿಂದ ಬೆಳೆಯ ಇಳುವರಿ ಹೆಚ್ಚಿಸಿಕೊಳ್ಳುವ ಮೂಲಕ ಪರೋಕ್ಷ ಆದಾಯವನ್ನೂ ಗಳಿಸಬಹುದು. ಜೇನುನೊಣಗಳು ಪರಾಗಸ್ಪರ್ಶ ಕ್ರಿಯೆಗೆ ಸಹಾಯ ಮಾಡುವುದರಿಂದ ಬೆಳೆ ಇಳುವರಿ ಹೆಚ್ಚಾಗುತ್ತದೆ.

ಜೇನುನೊಣಗಳ ಪರಾಗ ಸ್ಪರ್ಶದಿಂದ ವಿವಿಧ ತೋಟಗಾರಿಕೆ ಬೆಳೆಗಳಾದ ತೆಂಗು, ಮಾವು, ಅಡಿಕೆ ಇಳುವರಿಯಲ್ಲಿ ಶೇ.20, ಟೊಮೆಟೋ ಬೆಳೆಯಲ್ಲಿ ಶೇ.25, ದ್ರಾಕ್ಷಿ ಬೆಳೆಯಲ್ಲಿ ಶೇ.35, ಸೌತೆ, ಕುಂಬಳ, ಸೀಬೆಯಲ್ಲಿ ಶೇ.40 ಹಾಗೂ ಕಲ್ಲಂಗಡಿ ಬೆಳೆಯಲ್ಲಿ ಶೇ.80ರಷ್ಟು ಅಧಿಕ ಇಳುವರಿ ಪಡೆಯಬಹುದಾಗಿದೆ. ಅಷ್ಟೇ ಅಲ್ಲದೇ ಏಲಕ್ಕಿ, ನಿಂಬೆ, ತರಕಾರಿ, ಹೂವು, ಔಷಧಿ ಹಾಗೂ ಸುಗಂಧ ದ್ರವ್ಯ ಬೆಳೆಗಳೂ ಸಹ ಪರಾಗ ಸ್ಪರ್ಶದಿಂದ ಲಾಭದಾಯಕ ಪ್ರಯೋಜನ ಹೊಂದಲಿವೆ.

ಇದನ್ನೂ ಓದಿ: ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಸರ್ಕಾರದಿಂದ ಸಿಗುವ ಸವಲತ್ತುಗಳು

ಜೇನು ಸಾಕಾಣಿಕೆಗೆ ಸರ್ಕಾರದಿಂದಲೂ ಬಹಳಷ್ಟು ಸವಲತ್ತುಗಳಿವೆ. ಕೇಂದ್ರ ಸರ್ಕಾರ ಕೆಲವು ವರ್ಷಗಳ ಹಿಂದೆ ಆರಂಭಿಸಿರುವ ಆತ್ಮನಿರ್ಭರ ಯೋಜನೆಯಡಿ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಲ್ಲಿ ಜೇನು ಕೃಷಿಗೆ ಅತ್ಯುತ್ತಮ ಉತ್ತೇಜನ ಸಿಗುತ್ತಿದೆ. ರಾಷ್ಟ್ರೀಯ ಜೇನು ಮಂಡಳಿ (NBB) ನಬಾರ್ಡ್ ಸಹಯೋಗದೊಂದಿಗೆ ಭಾರತದಲ್ಲಿ ಜೇನುಸಾಕಣೆಗೆ ಹಣಕಾಸು ಒದಗಿಸುತ್ತಿದೆ.

ಜೇನು ತುಪ್ಪ ಸಂಸ್ಕರಣೆ ಘಟಕ ನಿರ್ಮಾಣಕ್ಕೂ ನೆರವು ಕಲ್ಪಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಖಾದಿ ಆಯೋಗವೂ ಜೇನು ಕೃಷಿಗೆ ಬಹಳ ದೊಡ್ಡಮಟ್ಟದಲ್ಲಿಯೇ ನೆರವು ನೀಡುತ್ತಿದೆ. ಜೇನು ಸಾಕಣೆಯಿಂದ ಬೆಳೆಯ ಇಳುವರಿ ಸರಾಸರಿ ಶೇ.20ರಿಂದ 30ರ ವರೆಗೆ ಹೆಚ್ಚಳವಾಗುತ್ತದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಜೇನು ಕೃಷಿಗೆ ಸಾಕಷ್ಟು ನೆರವು ನೀಡುತ್ತಿದೆ.

ಇದನ್ನೂ ಓದಿ: ರೈತರೇ ನಿಮ್ಮ ಜಮೀನು ಮೇಲಿನ ಸಾಲ ತೀರಿಸಿಯೂ ಪಹಣಿಯಲ್ಲಿ ಸಾಲ ತೋರಿಸುತ್ತಿದ್ದರೆ ಹೀಗೆ ಮಾಡಿ | ಮೊಬೈಲ್‌ನಲ್ಲೇ ನೋಡಿ ನಿಮ್ಮ ಜಮೀನು ಸಾಲ… 

ತೋಟಗಾರಿಕಾ ಇಲಾಖೆ ಸಹಾಯ

ಜೇನು ಕೃಷಿಯನ್ನು ಮತ್ತಷ್ಟು ಪ್ರಚುರಪಡಿಸಲು ತೋಟಗಾರಿಕೆ ಇಲಾಖೆ ಜೇನು ಸಾಕಣೆಗೆ ವಿವಿಧ ಯೋಜನೆಯಡಿ ಸಹಾಯಧನ ನೀಡುತ್ತಿದೆ. ಅಷ್ಟೇ ಅಲ್ಲದೇ ಉತ್ತಮ ಗುಣಮಟ್ಟದ ಹಾಗೂ ರೋಗ ರಹಿತ ಜೇನು ಕುಟುಂಬಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದಿಸಿ, ವಿತರಿಸುವ ಉದ್ದೇಶದಿಂದ ಖಾಸಗಿ ಮಧುವನಗಳ ಸ್ಥಾಪನೆಗೂ ಮಹತ್ವ ನೀಡಲಾಗಿದೆ.

ಜೇನು ಸಾಕಣೆ ಮಾಡುವ ಸಣ್ಣ ರೈತರಿಗೆ ತೋಟಗಾರಿಕೆ ಇಲಾಖೆ ಶೇ.75 ಸಬ್ಸಿಡಿ ನೀಡುತ್ತಿದೆ. ಎಸ್ಸಿ-ಎಸ್ಟಿ ಸಮುದಾಯದವರಿಗೆ ಶೇ.90 ಸಹಾಯಧನದ ಸೌಲಭ್ಯವೂ ಇದೆ. ಜೇನು ಸಾಕಣೆಗೆ ಪೋತ್ಸಾಹ ನೀಡಲು ತೋಟಗಾರಿಕೆ ಇಲಾಖೆ ಕೋಟಿ ಕೋಟಿ ಅನುದಾನ ಮೀಸಲಿಡುತ್ತದೆ.

ಇದನ್ನೂ ಓದಿ: ರೈತರಲ್ಲಿ ಈ ಕಾರ್ಡ್ ಇದ್ದರೆ ಸುಲಭದಲ್ಲಿ ಸಿಗಲಿದೆ ಸರಕಾರಿ ಸೌಲಭ್ಯ | ಕಾರ್ಡ್ ಪಡೆಯಲು ಮೊಬೈಲ್‌ನಲ್ಲೇ ನೋಂದಾಯಿಸಿ

ಜಮೀನು ಹೊಂದಿರುವ ರೈತರಿಗೆ ಗರಿಷ್ಟ 10 ಜೇನು ಪೆಟ್ಟಿಗೆ, ಕುಟುಂಬ (ಜೇನುನೊಣಗಳ ಸಮೂಹ) ಹಾಗೂ ಸ್ಟ್ಯಾಂಡ್ ಖರೀದಿಗೆ ಸಹಾಯಧನ ಲಭ್ಯವಿದ್ದರೆ, ಜಮೀನು ರಹಿತ ಕುಟುಂಬಗಳಿಗೆ ಗರಿಷ್ಟ 4 ಜೇನು ಪೆಟ್ಟಿಗೆ, ಕುಟುಂಬ (ಜೇನುನೊಣಗಳ ಸಮೂಹ) ಹಾಗೂ ಸ್ಟ್ಯಾಂಡ್ ಖರೀದಿಸಲು ಇಲಾಖೆ ವತಿಯಿಂದ ಸಹಾಯಧನ ಸಿಗಲಿದೆ. ಮಧುವನ ಹಾಗೂ ಜೇನು ಸಾಕಾಣಿಕೆ ಅಭಿವೃದ್ಧಿ ಯೋಜನೆಯಡಿ ಶೇ.75ರಂತೆ 3,375  ರೂಪಾಯಿಗಳ ಸಹಾಯಧನ ಸಹ ನೀಡಲಾಗುತ್ತಿದೆ.

ಜೇನುಕೃಷಿಯನ್ನು ಅಳವಡಿಸಿಕೊಳ್ಳುವುದರಿಂದ ರೈತರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚು ಲಾಭ ಗಳಿಸಬಹುದಾಗಿದೆ. ಅಲ್ಲದೇ ಕೃಷಿಕರಲ್ಲದವರೂ ಸಹ ಜೇನುಕೃಷಿಯನ್ನು ನಡೆಸಬಹುದು. ಹೀಗಾಗಿ ಆಸಕ್ತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಮೂಲಕ ಸರ್ಕಾರದ ಸಹಾಯಧನ ಪಡೆಯಬಹುದಾಗಿದೆ. ಜೇನು ಕೃಷಿ ಬಗ್ಗೆ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9620736384, 0816-2211808

ಸರಕಾರಿ ಯೋಜನೆಗಳ ನಿಖರ ಮಾಹಿತಿಗಾಗಿ ಇಲ್ಲಿ ಕ್ಲಿಕ್  ಮಾಡಿ

ಇದನ್ನೂ ಓದಿ: 

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಕೃಷಿ, ಹೈನುಗಾರಿಕೆ, ಕುರಿ-ಮೇಕೆ ಸಾಕಣೆಗೆ ನರೇಗಾ ಯೋಜನೆಯಲ್ಲಿ 2.5 ಲಕ್ಷ ರೂಪಾಯಿ ಸಹಾಯಧನ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

ಕಾರ್ಮಿಕ ಕಾರ್ಡ್ ರದ್ದು ಅಭಿಯಾನ | ನಿಮ್ಮ ಕಾರ್ಡ್ ರದ್ದಾದರೆ ಏನು ಮಾಡಬೇಕು?

 

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now

Related Posts

error: Content is protected !!