ಸರಕಾರಿ ಯೋಜನೆ

Karnataka Budget 2023: ನಿರುದ್ಯೋಗಿಗಳಿಗೆ ₹2,000 ಆರ್ಥಿಕ ನೆರವು | ಸ್ವಯಂ ಉದ್ಯೋಗಕ್ಕೆ ₹5 ಲಕ್ಷ ಸಹಾಯಧನ | ವಿದ್ಯಾರ್ಥಿಗಳಿಗೂ ಸಿಗಲಿದೆ ₹1,500 ಭತ್ಯೆ

WhatsApp Group Join Now
Telegram Group Join Now

ನಿರುದ್ಯೋಗಿಗಳಿಗೆ 2,000 ನೆರವು, ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ, ಸ್ವಯಂ ಉದ್ಯೋಗಕ್ಕೆ 5 ಲಕ್ಷ ಸಹಾಯಧನ, ವಿದ್ಯಾರ್ಥಿಗಳಿಗೆ ಬದುಕುವ ದಾರಿ ಯೋಜನೆ, ಮುಖ್ಯಮಂತ್ರಿ ವಿದ್ಯಾಶಕ್ತಿ, ವೃತ್ತಿಶಿಕ್ಷಣ ಶುಲ್ಕ ಪಾವತಿ, ಬಸ್ ಸಂಚಾರ ಯೋಜನೆಗಳನ್ನು ರಾಜ್ಯ ಸರಕಾರ ಘೋಷಿಸಿದೆ. ಈ ಯೋಜನೆಗಳ ಸಮಗ್ರ ಮಾಹಿತಿ ಇಲ್ಲಿದೆ… 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡನೆ ಮಾಡಿರುವ ಕರ್ನಾಟಕ ಬಜೆಟ್ 2023ರಲ್ಲಿ ದೊಡ್ಡ ಸಂಖ್ಯಾಬಲ ಹೊಂದಿರುವ ಮಹಿಳೆಯರು, ಯುವಕರು, ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆಗಳನ್ನು ಘೋಷಿಸಿದ್ದಾರೆ. ಮುಖ್ಯವಾಗಿ ನಿರುದ್ಯೋಗಿ ಯುವಕರನ್ನು ಸೆಳೆಯಲು ಯುವಸ್ನೇಹಿ ಹಾಗೂ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಯೋಜನೆ ಘೋಷಿಸಲಾಗಿದೆ. ಇತ್ತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಬದುಕುವ ದಾರಿ, ಮುಖ್ಯಮಂತ್ರಿ ವಿದ್ಯಾಶಕ್ತಿ ವೃತ್ತಿಶಿಕ್ಷಣ ಶುಲ್ಕ ಪಾವತಿ ಮತ್ತು ಬಸ್ ಸಂಚಾರದಂತಹ ಆಕರ್ಷಕ ಯೋಜನೆಗಳನ್ನು ಉದ್ಘೋಷಿಸಲಾಗಿದೆ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ನಿರುದ್ಯೋಗಿಗಳಿಗೆ 2,000 ನೆರವು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಯುವಕರಿಗೆ ಹೊಸ ಯೋಜನೆಯಡಿ ತಲಾ 2,000 ರೂಪಾಯಿಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲು ಮುಂದಾಗಿದೆ. ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು ಯುವಸ್ನೇಹಿ ಎಂಬ ಹೊಸ ಯೋಜನೆಯಡಿ ತಲಾ 2,000 ರೂಪಾಯಿಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ

ಇನ್ನು ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಯುವ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ, ನಾಗರಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಲು ಹಾಗೂ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶವನ್ನು ಒದಗಿಸಲು ನಮ್ಮ ಸರ್ಕಾರವು ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಮಂಡಿಸಲಾದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಸ್ವಯಂ ಉದ್ಯೋಗಕ್ಕೆ 5 ಲಕ್ಷ ಸಹಾಯಧನ 

ಯುವಜನರ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಯುವ ನೀತಿ 2022 ಅನ್ನು ರೂಪಿಸಲಾಗಿದೆ. ಗ್ರಾಮೀಣ ಯುವಕರ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10,000 ರೂಪಾಯಿಯಂತೆ ಸುತ್ತುನಿಧಿ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ಒಂದು ಲಕ್ಷ ರೂಪಾಯಿ ಒಳಗೊಂಡಂತೆ ಬ್ಯಾಂಕ್‌ಗಳ ಸಹಾಯದೊಂದಿಗೆ 5 ಲಕ್ಷ ರೂಪಾಯಿ ವರೆಗೆ ಸಹಾಯಧನ ನೀಡಲಾಗುವುದು ಎಂದೂ ತಿಳಿಸಲಾಗಿದೆ.

ಬದುಕುವ ದಾರಿ ಯೋಜನೆ

ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ ಮೂರು ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕವಾಗಿ 1,500 ರೂಪಾಯಿಗಳ ಶಿಷ್ಯ ವೇತನವನ್ನು ನೀಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಈ ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳಿಗೆ ಮಾಸಿಕ 1,500 ರೂಪಾಯಿಗಳ ಶಿಶಿಕ್ಷು ಭತ್ಯೆಯನ್ನೂ ನೀಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಇದರ ಜೊತೆಗೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯಡಿ ಸರ್ಕಾರಿ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ಹಾಗೂ ಕನ್ನಡ ಮಾಧ್ಯಮದಲ್ಲಿ ಶಾಲಾ ಶಿಕ್ಷಣ ಪಡೆದ 500 ವಿದ್ಯಾರ್ಥಿಗಳಿಗೆ ಹಳ್ಳಿ ಮುತ್ತು ಯೋಜನೆಯಡಿ ಸರ್ಕಾರದಿಂದ ವೃತ್ತಿಶಿಕ್ಷಣ ಶುಲ್ಕ ಪಾವತಿ ಹಾಗೂ ವಿದ್ಯಾರ್ಥಿಗಳಿಗಾಗಿಯೇ ಹೊಸ ಬಸ್ ಸಂಚಾರದಂತಹ ಯೋಜನೆಗಳನ್ನು ಸಹ ಘೋಷಿಸಲಾಗಿದೆ.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

10ನೇ ತರಗತಿ, ಡಿಪ್ಲೊಮಾ ಅಭ್ಯರ್ಥಿಗಳಿಂದ ನ್ಯಾಯಾಲಯದ ಹುದ್ದೆಗಳಿಗೆ ಅರ್ಜಿ ಆಹ್ವಾನ | ತಿಂಗಳಿಗೆ 17,00 ದಿಂದ 52,650 ಸಂಬಳ

Agriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!