ಉದ್ಯೋಗ

SSLC, PUC ಅಭ್ಯರ್ಥಿಗಳಿಗೆ ಅಬಕಾರಿ ಇಲಾಖೆಯಲ್ಲಿ ಶೀಘ್ರ 1,100 ಹುದ್ದೆಗಳ ನೇಮಕ | Karnataka Excise Department Recruitment 2023

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸಲಿದ್ದು; ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಿದೆ. ಹುದ್ದೆಗಳ ವಿವಿರ, ವೇತನ ಶ್ರೇಣಿ, ನೇಮಕಾತಿ ಪ್ರಕ್ರಿಯೆ, ಖಾಲಿ ಹುದ್ದೆಗಳ ವಿವರ ಕುರಿತ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಖುದ್ದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಮಾಹಿತಿ ನೀಡಿದ್ದು; ಇಷ್ಟರಲ್ಲಿಯೇ ಇಲಾಖೆಯ 1,100 ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಿದೆ. ಅಬಕಾರಿ ಪೇದೆ ಮತ್ತು ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ.

ಈ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಿರುವುದಾಗಿ ಅಬಕಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ. ರಾಜ್ಯ ಸರಕಾರಿ ಹುದ್ದೆಗಳ ಮಟ್ಟಿಗೆ ಇದೊಂದು ಅತಿ ದೊಡ್ಡ ನೇಮಕವಾಗಿದ್ದು; ರಾಜ್ಯ ಸರಕಾರಿ ನೌಕರಿಗಾಗಿ ಕಾದು ಕುಳಿತಿದ್ದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಹಾಗೂ ಪದವಿ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ:  ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ಅಬಕಾರಿ ಇಲಾಖೆಯಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ನೇಮಕಾತಿ ಮಾಡಿಲ್ಲ. ಇದರಿಂದಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಅಕ್ರಮ ಮದ್ಯ ಮಾರಾಟ ಮಾಡುವವರಿಗೆ ಕಡಿವಾಣ ಹಾಕಲು ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದೆ. ಮತ್ತೊಂದೆಡೆ ಹಲವು ವರ್ಷಗಳಿಂದ ಅಬಕಾರಿ ಇಲಾಖೆ ಸೇರಲು ತಯಾರಿ ನಡೆಸಿರುವ ಲಕ್ಷಾಂತರ ಪರೀಕ್ಷಾರ್ಥಿಗಳ ವಯೋಮಿತಿ ಮೀರುತ್ತಿದೆ. ಇದರಿಂದ ಹಲವು ಅಭ್ಯರ್ಥಿಗಳಿಗೆ ಅಬಕಾರಿ ಇಲಾಖೆ ಹುದ್ದೆಗಳಿಂದ ವಂಚಿತರಾಗುವ ಆತಂಕ ಉಂಟಾಗಿದೆ.

ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಿಂದ ಅಕ್ರಮ ಮದ್ಯ ಮಾರಾಟ ನಿಯಂತ್ರಿಸಬಹುದು. ಅಲ್ಲದೇ, ನಿರುದ್ಯೋಗ ಕಡಿಮೆ ಮಾಡುವ ಮೂಲಕ ಹಲವಾರು ವರ್ಷಗಳಿಂದ ಅಬಕಾರಿ ಇಲಾಖೆ ಅಧಿಕಾರಿ ಆಗಬೇಕೆಂಬ ಸಾವಿರಾರು ಅಭ್ಯರ್ಥಿಗಳ ಕನಸು ಈಡೇರಲಿದೆ. ಜತೆಗೆ ಅಕ್ರಮ ಮದ್ಯ ಮಾರಾಟ ಜಾಲವನ್ನು ನಿಯಂತ್ರಿಸಿ, ಆದಾಯವನ್ನು ವೃದ್ಧಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಪಿಯುಸಿ ಅಭ್ಯರ್ಥಿಗಳಿಗೆ ಕೇಂದ್ರ ಸರಕಾರದ ಭರ್ಜರಿ ನೌಕರಿ

ಹುದ್ದೆಗಳ ವಿವರ:

  1. ಅಬಕಾರಿ ಪೇದೆ ಹುದ್ದೆಗಳು: 1,000
  2. ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು: 100

ಸದ್ಯ ರಾಜ್ಯ ಅಬಕಾರಿ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳಲ್ಲಿ ಎ, ಬಿ, ಸಿ ಹಾಗೂ ಡಿ ಶ್ರೇಣಿಯ ಒಟ್ಟು 1,724 ಹುದ್ದೆಗಳು ಖಾಲಿ ಇವೆ. 2021ರ ಸೆಪ್ಟೆಂಬರ್ ಅಂತ್ಯಕ್ಕೆ ಅಬಕಾರಿ ಇಲಾಖೆಯಲ್ಲಿ ಮಂಜುರಾದ ಹುದ್ದೆಗಳು 5,812, ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು 4,057, ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 1724 ಎಂದು ಈ ಹಿಂದೆ ಇಲಾಖಾ ಸಚಿವರು ಮಾಹಿತಿ ನೀಡಿದ್ದರು.

ವೇತನ:

  1. ಅಬಕಾರಿ ಪೇದೆ ಹುದ್ದೆಗೆ ವೇತನ ಶ್ರೇಣಿ: 21,400-42,000 ರೂಪಾಯಿ
  2. ಅಬಕಾರಿ ನಿರೀಕ್ಷಕರು ಹುದ್ದೆಗೆ ವೇತನ ಶ್ರೇಣಿ: 37,900-70,850 ರೂಪಾಯಿ

ವಿದ್ಯಾರ್ಹತೆ:  ಕರ್ನಾಟಕ ಅಬಕಾರಿ ಇಲಾಖೆ ಕರಡು ನೇಮಕಾತಿ ಅಧಿಸೂಚನೆ ಪ್ರಕಾರ, ಪೇದೆ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪಾಸಾಗಿರಬೇಕು. ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪದವಿ ಪಾಸ್ ಮಾಡಿರಬೇಕು.

ಅರ್ಜಿ ಶುಲ್ಕ:  ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶದನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಸದ್ಯ ರಾಜ್ಯ ಅಬಕಾರಿ ಇಲಾಖೆಯ ಮಂಜೂರಾದ ಹುದ್ದೆ ಮತ್ತು ಖಾಲಿ ಇರುವ ಎ, ಬಿ, ಸಿ ಹಾಗೂ ಡಿ ಶ್ರೇಣಿಯ 1,724 ಹುದ್ದೆಗಳ ವಿವರ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

========================

ಇವುಗಳನ್ನೂ ಓದಿ:

ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ಮಣ್ಣಿನ ಆರೋಗ್ಯ ತಪಾಸಣೆ: ರೈತರಿಗೆ ಸಿಗಲಿದೆ ಅಧಿಕ ಆದಾಯ

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ SSLC ಅಭ್ಯರ್ಥಿಗಳಿಂದ ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಅಂಚೆ ಕಚೇರಿಯಲ್ಲಿ ಕೇವಲ ₹399ಕ್ಕೆ ಈ ಪಾಲಸಿ ಮಾಡಿದರೆ ಸಿಗಲಿದೆ ₹10 ಲಕ್ಷ ಆರ್ಥಿಕ ನೆರವು

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಕೂಡಲೇ ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!