ಉದ್ಯೋಗ

ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ | Karnataka State Govt Recruitment Budget 2023

WhatsApp Group Join Now
Telegram Group Join Now

2023-24ರ ಬಜೆಟ್‌ನಲ್ಲಿ ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಕಟಿಸುವ ಮೂಲಕ ರಾಜ್ಯ ಸರಕಾರ ಲಕ್ಷ ಸರಕಾರಿ ನೇಮಕಾತಿ ಪ್ರಕ್ರಿಯೆಗೆ ತಯಾರಿ ನಡೆಸಿದೆ.  ಇಲಾಖಾವಾರು ಖಾಲಿ ಇರುವ ಹುದ್ದೆಗಳೆಷ್ಟು? ಈ ಹುದ್ದೆಗಳ ನೇಮಕಾತಿ ಆದೇಶ ಯಾವಾಗ ಹೊರಡಲಿದೆ? ರಾಜ್ಯ ಸರಕಾರ ಉದ್ಯೋಗ ಸೃಷ್ಟಿಗೆ ಕೈಗೊಂಡ ಕ್ರಮಗಳೇನು? ಯಾರಿಗೆಲ್ಲ ಅವಕಾಶ ಸಿಗಲಿದೆ? ಇತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ…

ಸರ್ಕಾರಿ ನೌಕರರಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಯುವ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.58 ಲಕ್ಷ ಹುದ್ದೆಗಳು ಖಾಲಿ ಇದ್ದು; ಈ ಪೈಕಿ ಒಂದು ಲಕ್ಷ ಹುದ್ದೆಗಳನ್ನು ಈ ಒಂದು ವರ್ಷದೊಳಗೆ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಘೋಷಿಸಿದ್ದರು. ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ನ ಸಿ.ಎನ್.ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ್ದ ಅವರು, ಒಟ್ಟು 43 ವಿವಿಧ ಇಲಾಖೆಗಳಲ್ಲಿ ಎ ಯಿಂದ ಡಿ ವೃಂದದವರೆಗೆ ಮಂಜೂರಾಗಿರುವ 7,69,980 ಹುದ್ದೆಗಳಲ್ಲಿ 5,11,272 ಭರ್ತಿಯಾಗಿದ್ದು; 2,58,709 ಹುದ್ದೆಗಳು ಖಾಲಿಯಿವೆ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ಈ ಪೈಕಿ ಗ್ರೂಪ್ ಸಿ ಮತ್ತು ಡಿ ವೃಂದಗಳಲ್ಲಿ ಅಂದಾಜು 82,700 ಹುದ್ದೆಗಳನ್ನು ಹೊರ ಗುತ್ತಿಗೆ ಆಧಾರದಲ್ಲಿ ತುಂಬಲಾಗಿದೆ. ಜತೆಗೆ ಎ ಹಾಗೂ ಬಿ ವೃಂದದ ಹುದ್ದೆಗಳ ಹೆಚ್ಚುವರಿ ಪ್ರಭಾರವಹಿಸಲಾಗಿದೆ ಎಂದು ವಿವರಿಸಿದ್ದರು. ತುರ್ತು ಭರ್ತಿ ಅಗತ್ಯವಿರುವ ಹುದ್ದೆಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿ, ಒಂದು ಲಕ್ಷ ಹುದ್ದೆಗಳ ಭರ್ತಿಗೆ ಪರವಾನಗಿ ನೀಡಲಾಗಿದೆ. ಈ ಬಜೆಟ್‌ನಿಂದ ಮುಂದಿನ ಬಜೆಟ್‌ನ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದರು. ಅಂತೆಯೇ ಇದೀಗ ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು 2013-24 ರ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಅತಿ ಹೆಚ್ಚು ಹುದ್ದೆ ಖಾಲಿ ಇರುವ ಇಲಾಖೆಗಳು

ಪ್ರಾಥಮಿಕ ಶಿಕ್ಷಣ (66,059), ಆರೋಗ್ಯ (34,644), ಒಳಾಡಳಿತ (23,557), ಉನ್ನತ ಶಿಕ್ಷಣ (12,674), ಕಂದಾಯ (10,621), ಪಂಚಾಯತ್ ರಾಜ್ (10,409), ಪಶುಸಂಗೋಪನೆ (9,972), ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (8,063) ಅತಿ ಹೆಚ್ಚು ಹುದ್ದೆ ಖಾಲಿ ಇರುವ ಇಲಾಖೆಗಳಾಗಿವೆ.

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

2023-24ನೇ ಸಾಲಿನಲ್ಲೇ ನೇಮಕಾತಿ ಆದೇಶ

ರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ, ನಾಗರಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಲು ಹಾಗೂ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶವನ್ನು ಒದಗಿಸಲು ನಮ್ಮ ಸರ್ಕಾರವು ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಮಂಡಿಸಲಾದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಮ್ಮ ಸರ್ಕಾರವು ನಿರ್ಧರಿಸಿದೆ. ಈ ಎಲ್ಲಾ ಹುದ್ದೆಗಳ ಆಯ್ಕೆ ಪ್ರಕ್ರಿಯೆಯನ್ನು 2023-24ನೇ ಸಾಲಿನಲ್ಲಿಯೇ ಪೂರ್ಣಗೊಳಿಸಿ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಅವರು ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.

ಇದನ್ನೂ ಓದಿ: 10ನೇ ತರಗತಿ, ಡಿಪ್ಲೊಮಾ ಅಭ್ಯರ್ಥಿಗಳಿಂದ ನ್ಯಾಯಾಲಯದ ಹುದ್ದೆಗಳಿಗೆ ಅರ್ಜಿ ಆಹ್ವಾನ | ತಿಂಗಳಿಗೆ 17,00 ದಿಂದ 52,650 ಸಂಬಳ

25,000 ಜನರಿಗೆ ಉದ್ಯೋಗ ಸೃಜನೆ

ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನೂತನ ಮೆಗಾ ಜವಳಿ ಪಾರ್ಕ್ ಮತ್ತು ರಾಜ್ಯದ 25 ಸ್ಥಳಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ಮೂಲಕ ಸರ್ಕಾರ ಉದ್ಯೋಗಾವಕಾಶ ಕಲ್ಪಿಸಲಿದೆ. ಒಟ್ಟಾರೆಯಾಗಿ ಇದರಿಂದಾಗಿ ಸುಮಾರು 25,000 ಜನರಿಗೆ ಉದ್ಯೋಗ ಸೃಜನೆಯಾಗಲಿದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ವಿವಿಧ ವಲಯಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಕರ್ನಾಟಕ ಉದ್ಯೋಗ ನೀತಿ 2022-25, ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27 ಹಾಗೂ ವಿಶೇಷ ಹೂಡಿಕೆ ಪ್ರದೇಶ ಕಾಯಿದೆ 2022 ಅನ್ನು ಜಾರಿಗೊಳಿಸಲಾಗಿದೆ ಎಂದೂ ಬಜೆಟ್‌ನಲ್ಲಿ ತಿಳಿಸಲಾಗಿದೆ.

ಪ್ರಸ್ತುತ ವರ್ಷದಲ್ಲಿ ರಾಜ್ಯ ಸರ್ಕಾರವು ಅನುಮೋದಿಸಿದ 393 ಕೈಗಾರಿಕಾ ಯೋಜನೆಗಳಿಂದ 2.37 ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆಯೊಂದಿಗೆ ಸುಮಾರು 2 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆಯುವ ನಿರೀಕ್ಷೆ ಇದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ: 3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ವಿದೇಶದಲ್ಲಿ ಉದ್ಯೋಗ ಪಡೆಯಲು ತರಬೇತಿ

ವಿದೇಶಿ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ವತಿಯಿಂದ 8 ಜಿಲ್ಲೆಗಳಲ್ಲಿ ಸಂಪನ್ಮೂಲ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು 4 ಜಿಲ್ಲೆಗಳಲ್ಲಿ ಪೂರ್ವ ನಿರ್ಗಮನದ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಇಲಾಖಾವಾರು ಖಾಲಿ ಹುದ್ದೆಗಳ ವಿವರ

  1. ಕೃಷಿ-6316
  2. ಪಶುಸಂಗೋಪನ- 9,972
  3. ಹಿಂದುಳಿದ ವರ್ಗಗಳ ಕಲ್ಯಾಣ- 8,063
  4. ಸಹಕಾರ- 4,738
  5. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ-5,738
  6. ಇ-ಆಡಳಿತ-75
  7. ಪರಿಸರ ಮತ್ತು ಜೀವಿಶಾಸ್ತ್ರ- 04
  8. ಇಂಧನ- 245
  9. ಆರ್ಥಿಕ- 8,779
  10. ಮೀನುಗಾರಿಕೆ- 777
  11. ಆಹಾರ ಮತ್ತು ನಾಗರೀಕ ಸರಬರಾಜು- 1,187
  12. ಅರಣ್ಯ- 4,562
  13. ಕೈಮಗ್ಗ ಮತ್ತು ಜವಳಿ- 39
  14. ಉನ್ನತ ಶಿಕ್ಷಣ- 12,674
  15. ಒಳಾಡಳಿತ- 23,557
  16. ತೋಟಗಾರಿಕೆ- 3,092
  17. ವಾರ್ತಾ ಇಲಾಖೆ- 319
  18. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ- 60
  19. ಕನ್ನಡ ಮತ್ತು ಸಂಸ್ಕೃತಿ ಇಲಾಖೆ- 423
  20. ಕಾರ್ಮಿಕ- 2,500
  21. ಕಾನೂನು- 8,370
  22. ಭಾರಿ ಮತ್ತು ಮಧ್ಯಮ ಕೈಗಾರಿಕೆ- 353
  23. ಬಾರಿ ನೀರಾವರಿ- 500
  24. ಗಣಿ ಮತ್ತು ಭುವಿಜ್ಞಾನ ಇಲಾಖೆ- 677
  25. ಸಣ್ಣ ನೀರಾವರಿ- 1,095
  26. ಅಲ್ಪಸಂಖ್ಯಾತರ ಕಲ್ಯಾಣ- 3,633
  27. ಸಂಸಂದೀಯ ವ್ಯವಹಾರಗಳು- 435
  28. ಯೋಜನ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ- 1,282
  29. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ- 66,059
  30. ಲೋಕೋಪಯೋಗಿ- 2,063
  31. ಕಂದಾಯ- 10,621
  32. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್- 10,409
  33. ಪರಿಶಿಷ್ಟ ಜಾತಿಗಳ ಕಲ್ಯಾಣ- 9,592
  34. ಪರಿಶಿಷ್ಟ ಪಂಗಡಗಳ ಕಲ್ಯಾಣ- 2,318
  35. ರೇಷ್ಮೆ ಇಲಾಖೆ- 2,802
  36. ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ- 4,216
  37. ಸಣ್ಣ ಕೈಗಾರಿಕೆ- 356
  38. ಪ್ರವಾಸೋದ್ಯಮ- 286
  39. ಸಾರಿಗೆ ಇಲಾಖೆ- 1,602
  40. ನಗರಾಭಿವೃದ್ಧಿ- 839
  41. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ- 3,230
  42. ಯುವಜನ ಸೇವೆಗಳು- 207
  43. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ- 34,644

…ಹೀಗೆ ರಾಜ್ಯ ಸರಕಾರದ 43 ಇಲಾಖೆಗಳಲ್ಲಿ ಒಟ್ಟು 2,58,709 ಹುದ್ದೆಗಳು ಖಾಲಿ ಇದ್ದು; ಇವುಗಳ ಪೈಕಿ ಇದೀಗ ಒಂದು ಲಕ್ಷ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ರಾಜ್ಯ ಸರಕಾರ ಸನ್ನದ್ಧವಾಗಿದ್ದು; ಎಲ್ಲ ಹಂತದ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೂ ಅವಕಾಶ ಸಿಗಲಿದೆ.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

Agriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!