ಉದ್ಯೋಗ

Karnataka State Police Recruitment : 4,547 ಕಾನ್‌ಸ್ಟೇಬಲ್ ಮತ್ತು ಪಿಎಸ್‌ಐ ಹುದ್ದೆಗಳಿಗೆ ಪಿಯುಸಿ, ಪದವಿಧರರ ನೇಮಕ | ರಾಜ್ಯ ಪೊಲೀಸ್ ಇಲಾಖೆಯಲ್ಲಿ 17,828 ಹುದ್ದೆಗಳು ಖಾಲಿ

WhatsApp Group Join Now
Telegram Group Join Now

ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ 17,828 ಹುದ್ದೆಗಳ ಪೈಕಿ ಬರೋಬ್ಬರಿ 4,547 ಕಾನ್‌ಸ್ಟೇಬಲ್ ಮತ್ತು ಪಿಎಸ್‌ಐ ಹುದ್ದೆಗಳ ನೇಮಕಾತಿ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಸದರಿ ಹುದ್ದೆಗಳ ನೇಮಕಾತಿ ಮತ್ತು ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ…

Karnataka State Police Recruitment : ಪೋಲಿಸ್ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರವು ಶುಭ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವೃಂದಗಳಲ್ಲಿ 17 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇರುವ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಕಳೆದ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಲಿಖಿತ ರೂಪದ ಅಧಿಕೃತ ಉತ್ತರ ನೀಡಿದ್ದಾರೆ.

ಪಿಯುಸಿ ಪಾಸಾಗಿರುವ ಮತ್ತು ಪದವಿ ಅಥವಾ ತತ್ಸಮಾನಮಾನ ವಿದ್ಯಾರ್ಹತೆ ಪೂರೈಸಿರುವ ಅಭ್ಯರ್ಥಿಗಳಿಗೆ ಇದೊಂದು ಭರ್ಜರಿ ಅವಕಾಶವಾಗಿದೆ. ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಯಾವಾಗ? ಸದ್ಯಕ್ಕೆ ಎಷ್ಟು ಹುದ್ದೆಗಳ ನೇಮಕಾತಿ ನಡೆಯಲಿದೆ ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ…

ಇದನ್ನೂ ಓದಿ: District court Peon recruitment 2023 : SSLC ಪಾಸಾದವರಿಂದ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ | 41 ಹುದ್ದೆಗಳು

ಪೊಲೀಸ್ ಹುದ್ದೆಗಳ ಸಂಪೂರ್ಣ ವಿವರ

 • ಒಟ್ಟು ಮಂಜೂರಾಗಿರುವ ಹುದ್ದೆಗಳು :
  1,13,502 ಹುದ್ದೆಗಳು
 • ಕರ್ತವ್ಯ ನಿರ್ವಹಿಸುತ್ತಿರುವವರ ಸಂಖ್ಯೆ :
  95,674 ಹುದ್ದೆಗಳು
 • ಖಾಲಿ ಇರುವ ಹುದ್ದೆಗಳ ಸಂಖ್ಯೆ :
  17,828 ಹುದ್ದೆಗಳು

ಖಾಲಿ ಹುದ್ದೆಗಳ ಭರ್ತಿ ಯಾವಾಗ?
ಡಿಸೆಂಬರ್ 5, 2023ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಶ್ರವಣಬೆಳಗೋಳದ ಶಾಸಕ ಬಾಲಕೃಷ್ಣ ಸಿನ್ ಎನ್ ಅವರ ‘ಚುಕ್ಕೆ ಗುರುತಿಲ್ಲದ ಪ್ರಶ್ನೆ’ಗೆ ಗೃಹ ಸಚಿವರಾದ ಜಿ. ಪರಮೇಶ್ವರ್ ಅವರು ನೇಮಕಾತಿ ಪ್ರಕ್ರಿಯೆ ಕುರಿತ ಲಿಖಿತ ರೂಪದ ಸ್ಪಷ್ಟನೆ ನೀಡಿದ್ದಾರೆ. ಇದರನ್ವಯ ಮುಂದಿನ ಆರು ತಿಂಗಳ ಒಳಗಾಗಿ 4,547 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ.

‘ಚುಕ್ಕೆ ಗುರುತಿಲ್ಲದ ಪ್ರಶ್ನೆ’ಗೆ ಗೃಹ ಸಚಿವರ ನಿಖಿತ ದಾಖಲೆ ಪ್ರಕಾರ ಸರ್ಕಾರವು ಮುಂದಿನ ಆರು ತಿಂಗಳ ಒಳಗಾಗಿ ಖಾಲಿ ಇರುವ ಹುದ್ದೆಗಳಲ್ಲಿ 4,547 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಗೊಳಿಸಲಿದೆ. 4,547 ಹುದ್ದೆಗಳಲ್ಲಿ 1,547 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಹುದ್ದೆಗಳು ಮತ್ತು 3,000 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ: SSLC ಪಾಸಾದವರಿಗೆ ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ | CCL Data Entry Operator Recruitment 2023

ಹಂತ ಹಂತವಾಗಿ ನೇಮಕ
ಖಾಲಿ ಹುದ್ದೆಗಳ ಭರ್ತಿ ಮಾಡಿಕೊಂಡ ನಂತರ ಕಾನ್‌ಸ್ಟೇಬಲ್ ಮತ್ತು ಸಬ್’ಇನ್ಸ್‌ಪೆಕ್ಟರ್ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಅವಶ್ಯಕತೆ ಇದ್ದು ಒಂದೇ ಸಮಯದಲ್ಲಿ ಎಲ್ಲಾ ಹುದ್ದೆಗಳಿಗೂ ಭರ್ತಿ ಮಾಡಲು ಆಗುವುದಿಲ್ಲ. ಆದ್ದರಿಂದ ಮೊದಲ ಹಂತದಲ್ಲಿ 3,000 ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಗಿದ ನಂತರ ಮುಂದಿನ ಹಂತದಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ನಿವೃತ್ತಿ, ನಿಧನದಿಂದ ಖಾಲಿ ಆಗಿರುವ ಹುದ್ದೆಗಳ ನೇಮಕಾತಿಯ ಬಗ್ಗೆ ಕಾನೂನು ತಿದ್ದುಪಡಿಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವರಾದ ಜಿ. ಪರಮೇಶ್ವರ್ ಅವರ ಸ್ಪಷ್ಟನೆ ನೀಡಿದರು.

ಇನ್ನೂ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಹಗರಣ ನಡೆದಿದ್ದರಿಂದ, ಹಗರಣ ನಡೆಯದಂತೆ ನೋಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮರು ಪರೀಕ್ಷೆಯನ್ನು 23ನೇ ಜನವರಿ 2024ರಂದು ಬೆಂಗಳೂರಿನಲ್ಲಿ ಮಾತ್ರ ನಡೆಸಲಿದೆ. ಒಟ್ಟು 16 ವರ್ಷನ್‌ಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿದ್ದು ಹಗರಣಗಳನ್ನು ತಡೆಗಟ್ಟಲು ಇದು ಸಹಕಾರಿಯಾಗಿದೆ. ಈ ಒಂದು ನೇಮಕಾತಿ ಪ್ರಕ್ರಿಯೆ ಮುಗಿದ ನಂತರ 402 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 10ನೇ ತರಗತಿ ಪಾಸಾದವರಿಗೆ ಚಾಲಕ ಮತ್ತು ಜವಾನ ಹುದ್ದೆಗಳ ನೇಮಕಾತಿ | ಸಂಬಳ ₹52,650 | Raichur district court recruitment 2023

ಯಾವ್ಯಾವ ಗ್ರೂಪ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಯಾವ ಹಂತದಲ್ಲಿದೆ?
ಪೊಲೀಸ್ ಇಲಾಖೆಯಲ್ಲಿರುವ ರಿಕ್ತ (ಖಾಲಿ) ಸ್ಥಾನಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಹೇಳಿರುವ ಗೃಹ ಸಚಿವರು ‘ಚುಕ್ಕೆ ಗುರುತಿಲ್ಲದ ಪ್ರಶ್ನೆ’ಗೆ ನೀಡಿದ ಲಿಖಿತ ರೂಪದ ಉತ್ತರದಲ್ಲಿ ಯಾವ್ಯಾವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂಬುವುದುದನ್ನು ಈ ಕೆಳಗಿನಂತೆ ವಿವರಿಸಲಾಗಿದೆ:

1. ಗ್ರೂಪ್ ‘ಎ’ ಮತ್ತು ‘ಬಿ’ ವೃಂದಕ್ಕೆ ಸಂಬ೦ಧಿಸಿದ೦ತೆ ನೇಮಕಾತಿ ಮತ್ತು ಅರ್ಹ ಅಭ್ಯರ್ಥಿಗಳು ಲಭ್ಯವಾದಂತೆಲ್ಲ ಮುಂಬಡ್ತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಯು ಚಾಲ್ತಿಯಲ್ಲಿರುತ್ತದೆ. ಪ್ರಸ್ತುತ ಲಭ್ಯವಿರುವ ವೃಂದ ಬಲದ ಅಧಿಕಾರಿಗಳಿಗೆ ಖಾಲಿ ಇರುವ ಸ್ಥಳಗಳಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸುವ ಮುಖಾಂತರ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಿ, ಆಡಳಿತ ಸುಗಮವಾಗಿ ನಡೆಯಲು ತೊಂದರೆಯಾಗದ೦ತೆ ವ್ಯವಸ್ಥೆ ಮಾಡಲಾಗಿರುತ್ತದೆ.

ಇದನ್ನೂ ಓದಿ: SSLC ಪಾಸಾದರಿಂದ ರಕ್ಷಣಾ ವಿಭಾಗದ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 25 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ | ಮಹಿಳೆಯರಿಗೂ ಅವಕಾಶ | SSC GD Constable recruitment 2023

2. ಗ್ರೂಪ್ ‘ಸಿ’ ಹುದ್ದೆಗಳಲ್ಲಿ ಕಳೆದ ಮೂರು ವರ್ಷಗಳ ಖಾಲಿ ಸ್ಥಾನಗಳನ್ನೊಳಗೊಂಡ೦ತೆ ಹಾಲಿ ಖಾಲಿ ಸ್ಥಾನಗಳು ಸೇರಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೈಗೊಳ್ಳಲಾಗಿದೆ. ಕೆಳಕಂಡ೦ತೆ ಕ್ರಮ ಕೈಗೊಳ್ಳಲಾಗಿದೆ…

 • ಪಿಎಸ್‌ಐ (ಸಿವಿಲ್) 545+402 ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ನ್ಯಾಯಾಲಯದ ತೀರ್ಪಿನ ಅನ್ವಯ ಸರ್ಕಾರದ ಆದೇಶ ಸಂಖ್ಯೆ: ಒಇ 73 ಪಿಇಐ 2022 ದಿನಾಂಕ: 13-11-2023ರಲ್ಲಿ 545 ಪಿಎಸ್‌ಐ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ಆದೇಶಿಸಿದ್ದು, ಪ್ರಾಧಿಕಾರವು ಲಿಖಿತ ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಿರುತ್ತದೆ.
 • ಪಿಎಸ್‌ಐ (ಸಿವಿಲ್) 402 ಹುದ್ದೆಗಳಿಗೆ ಸಂಬ೦ಧಿಸಿದ೦ತೆ ಈಗಾಗಲೇ ಇಲಾಖೆಯಿಂದ ದೈಹಿಕ ಪರೀಕ್ಷೆಯನ್ನು ನಡೆಸಲಾಗಿದ್ದು ಮರು ಲಿಖಿತ ಪರೀಕ್ಷೆಯನ್ನು ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.
 • ಆರ್‌ಎಸ್‌ಐ (ಸಿಎಆರ್/ಡಿಎಆರ್) ಹುದ್ದೆಗಳಲ್ಲಿ ಈಗಾಗಲೇ 71 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.
 • ಸ್ಟೆ.ಆರ್‌ಎಸ್‌ಐ (ಕೆಎಸ್‌ಆರ್‌ಪಿ) ಹುದ್ದೆಗಳಲ್ಲಿ 70 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.
 • ಪಿಎಸ್‌ಐ (ಕೆಎಸ್‌ಐಎಸ್‌ಎಫ್) ಹುದ್ದೆಗಳಲ್ಲಿ 63 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿರುತ್ತದೆ.
 • 1,591 ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹಾಗೂ 3,484 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಪ್ರಸ್ತುತ 420 ಕಲ್ಯಾಣ-ಕರ್ನಾಟಕ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗಿರುತ್ತದೆ. 454 ಕಲ್ಯಾಣ-ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರಿಕ್ಷೆಯನ್ನು ದಿನಾಂಕ: 10-12-2023 ರಂದು ನಿಗದಿಪಡಿಸಲಾಗಿರುತ್ತದೆ.

Karnataka State Police Recruitment 2024-25

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 17,828 ವೃಂದವಾರು ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ…

ಇದನ್ನೂ ಓದಿ: ಕರ್ನಾಟಕ ಆಹಾರ ಇಲಾಖೆಯಲ್ಲಿ 1000+ ಹುದ್ದೆಗಳ ನೇಮಕ: SSLC, PUC, ಪದವೀಧರರಿಗೆ ಭರ್ಜರಿ ಅವಕಾಶ | Karnataka Food Department Recruitment 2023

Forest guard recruitment 2023 : PUC ಮುಗಿಸಿದವರಿಂದ ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 540 ಹುದ್ದೆಗಳಿಗೆ ನೇಮಕಾತಿ |

WhatsApp Group Join Now
Telegram Group Join Now

Related Posts

error: Content is protected !!