ಉದ್ಯೋಗ

ತುಮಕೂರು ಹಾಲು ಒಕ್ಕೂಟದ 219 ಹುದ್ದೆಗಳಿಗೆ ಅರ್ಜಿ ಆಹ್ವಾನ | ಸಂಬಳ 21,400 ರಿಂದ 97,100 ರೂಪಾಯಿ | KMF TUMUL Recruitment 2023

WhatsApp Group Join Now
Telegram Group Join Now

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (ತುಮುಲ್) ಖಾಲಿ ಇರುವ ಒಟ್ಟು 219 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ಸಂಬಳಗಳ, ಶುಲ್ಕ ಇತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ…

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ (ತುಮುಲ್) ಖಾಲಿ ಇರುವ ಒಟ್ಟು 219 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಂಜಿನಿಯರ್, ಎಂಬಿಬಿಎಸ್, ಡಿಪ್ಲೋಮಾ, ಐಟಿಐ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದೇ ಏಪ್ರಿಲ್ 17, 2023 ಅರ್ಜಿ ಸಲ್ಲಿಕೆಯ ಕೊನೆಯ ದಿನವಾಗಿದ್ದು; ನೇರ, ಅಂಚೆ, ಕೋರಿಯರ್ ಮೂಲಕ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತುಮುಲ್ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ವಯೋಮಿತಿ : ದಿನಾಂಕ: 17-04-2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯೋಮಿತಿ 35 ವರ್ಷ ವಯೋಮಿತಿ ಹೊಂದಿರಬೇಕು. ಗರಿಷ್ಠ ವಯೋಮಿತಿಯಲ್ಲಿ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 03 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ: ಗ್ರಾಮ ಪಂಚಾಯತಿ 6,406 ಹುದ್ದೆಗಳಿಗೆ ಪಿಯುಸಿ ಅಭ್ಯರ್ಥಿಗಳ ನೇಮಕಾತಿ

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-3 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 500 ರೂಪಾಯಿ, ಇತರೆ ವರ್ಗದ ಅಭ್ಯರ್ಥಿಗಳಿಗೆ 1,000 ರೂಪಾಯಿ (ಬ್ಯಾಂಕ್ ಶುಲ್ಕ ಪ್ರತ್ಯೇಕ) ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿ೦ಗ್ ಮೂಲಕ ಪಾವತಿಸಬಹುದು.

ಒಟ್ಟು ಹುದ್ದೆಗಳು : ಒಟ್ಟು 35 ಪದನಾಮವುಳ್ಳ ವಿವಿಧ 219 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇರ ನೇಮಕಾತಿ ಹಾಗೂ ಒಕ್ಕೂಟಗಳಲ್ಲಿ ಗುತ್ತಿಗೆದಾರರ ಮೂಲಕ ಕೆಲಸ ನಿರ್ವಹಿಸಿದ ಸಿಬ್ಬಂದಿಗಳಿಗೆ ಅವಕಾಶವಿದೆ. ಈ ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ಸಂಬಳಗಳ ಸಂಪೂರ್ಣ ಮಾಹಿತಿ ಈ ಕೆಳಕಂಡ೦ತಿದೆ…

1. ಸಹಾಯಕ ವ್ಯವಸ್ಥಾಪಕರು

ಸಹಾಯಕ ವ್ಯವಸ್ಥಾಪಕರು ಪ.ವೈ ಮತ್ತು ಕೃ.ಗ, ಮೆಕ್ಯಾನಿಕಲ್ ಎಂಜಿನಿಯರ್, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಎಫ್ ಅಂಡ್ ಎಫ್ ಸೇರಿ ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎಹೆಚ್) ಪದವಿಯನ್ನು ಹೊಂದಿರಬೇಕು. ಕರ್ನಾಟಕ ವೆಟರ್ನರಿ ಕೌನ್ಸಿಲ್ ಪ್ರಮಾಣ ಪತ್ರ ಪಡೆದಿರಬೇಕು. ಸಹಾಯಕ ವ್ಯವಸ್ಥಾಪಕರು (ಅಭಿಯಂತರ) ಹುದ್ದೆಗಳಿಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಎಫ್ ಅಂಡ್ ಎಫ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ವಿಷಯದಲ್ಲಿ ಎಂ.ಎಸ್ಸಿ (ಅಗ್ರಿ) ಪದವಿಯನ್ನು ಅಗ್ರೋನಮಿ/ಸೀಡ್ ಟೆಕ್ನಾಲಜಿಯಲ್ಲಿ ಹೊಂದಿರಬೇಕು.

ವೇತನ:  52,650-97,100 ರೂಪಾಯಿ

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

2. ವೈದ್ಯಾಧಿಕಾರಿ

ವೈದ್ಯಾಧಿಕಾರಿ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಎಂಬಿಬಿಎಸ್ ಪದವಿ ಪಡೆದಿರಬೇಕು ಮತ್ತು ಕರ್ನಾಟಕ ಮೆಡಿಕಲ್ ಕೌನ್ಸಿಲ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಆಸ್ಪತ್ರೆಯಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.

ಬಳ: 52,650-97,100 ರೂಪಾಯಿ

3. ಆಡಳಿತಾಧಿಕಾರಿ

01 ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು; ಇದಕ್ಕೆ ಎಲ್‌ಎಲ್‌ಬಿ ಅಥವಾ ಬಿಎಎಲ್ ಎಲ್‌ಎಲ್‌ಬಿ/ ಎಂಬಿಎ (ಎಚ್‌ಆರ್)/ ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆ ಜೊತೆಗೆ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಂಬಂಧಪಟ್ಟ ಯಾವುದೇ ಕೈಗಾರಿಕೋದ್ಯಮದಲ್ಲಿ ಅಥವಾ ಕಾನೂನು ಸಂಸ್ಥೆಗಳಲ್ಲಿ ಅಥವಾ ಅಸೋಸಿಯೇಷನ್‌ಗಳಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.

ಸ೦ಬಳ: 43,100-83,900 ರೂಪಾಯಿ

ಇದನ್ನೂ ಓದಿ: ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

4. ಖರೀದಿ/ ಉಗ್ರಾಣಾಧಿಕಾರಿ

09 ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಬಿಕಾಂ/ಬಿಬಿಎಂ/ಬಿಬಿಎA ಪದವಿ ಜತೆಗೆ ಎಂಕಾಂ/ಎAಬಿಎ ಇನ್ ಮೆಟೀರಿಯಲ್ ಮ್ಯಾನೇಜ್‌ಮೆಂಟ್/ ಪಿಜಿ ಡಿಪ್ಲೊಮೊ ಇನ್ ಮೆಟೀರಿಯಲ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪಡೆದಿರಬೇಕು. ಸಂಬಂಧಪಟ್ಟ ಕ್ಷೇತ್ರದ ಯಾವುದೇ ಸಂಸ್ಥೆಯಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.

ಸ೦ಬಳ : 43,100-83,900 ರೂಪಾಯಿ

5. ಎಂಐಎಸ್/ಸಿಸ್ಟಂ ಆಫೀಸರ್

03 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಗಿದೆ. ಇದಕ್ಕೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಕಂಪ್ಯೂಟರ್ ಸೈನ್ಸ್ / ಇನ್‌ಫಾರ್ಮೆಷನ್ ಸೈನ್ಸ್ /ಇ&ಸಿ ಪದವಿಯನ್ನು ಪಡೆದಿರಬೇಕು. ಕೈಗಾರೀಕೋದ್ಯ/ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕನಿಷ್ಠ 2 ವರ್ಷ ಕೆಲಸ ನಿರ್ವಹಿಸಿದ ಅನುಭವ ಇರಬೇಕು.

ಸಂಬಳ: 43,100-83,900 ರೂಪಾಯಿ

ಇದನ್ನೂ ಓದಿ: ರೈತರಿಗೆ 5 ಲಕ್ಷ ರೂಪಾಯಿ ಶೂನ್ಯ ಬಡ್ಡಿ ಸಾಲ ಏಪ್ರಿಲ್ 1ರಿಂದ ಜಾರಿ: ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

6. ಲೆಕ್ಕಾಧಿಕಾರಿ

02 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಕಾಂ./ ಎಂಬಿಎ (ಫೈನಾನ್ಸ್) ವಿದ್ಯಾರ್ಹತೆ ಹೊಂದಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿಯಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.

ಬಳ : 43,100-83,900 ರೂಪಾಯಿ

7. ಮಾರುಕಟ್ಟೆ ಅಧಿಕಾರಿ

03 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ/ ಬಿ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಡೇರಿ ಉದ್ದಿಮೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕನಿಷ್ಠ 4 ವರ್ಷಗಳ ಅನುಭವ ಹೊಂದಿರಬೇಕು.

ಸ೦ಬಳ : 43,100-83,900 ರೂಪಾಯಿ

ಇದನ್ನೂ ಓದಿ: 8ನೇ ತರಗತಿ ಪಾಸಾಗಿದ್ದರೆ ಸ್ವಯಂ ಉದ್ಯಮ ಪ್ರಾರಂಭಿಸಲು ಸಿಗಲಿದೆ 25 ಲಕ್ಷ ರೂಪಾಯಿ ಸಾಲ ಸೌಲಭ್ಯ | ಶೇ.35ರಷ್ಟು ಸಬ್ಸಿಡಿ

8. ತಾಂತ್ರಿಕ ಅಧಿಕಾರಿ (ಡಿಟಿ)

11 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಬಿಟೆಕ್ (ಡಿಟಿ) ಪದವಿ ಪಡೆದಿರಬೇಕು. ಕನಿಷ್ಠ 2 ವರ್ಷಗಳ ಅನುಭವ ಇರಬೇಕು.

ಸಂಬಳ : 43,100-83,900 ರೂಪಾಯಿ

9. ತಾಂತ್ರಿಕ ಅಧಿಕಾರಿ (ವಿವಿಧ ವಿಭಾಗ)

03 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅಭಿಯಂತರ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ (ಸಿವಿಲ್) ಪದವಿ, ಎಂಎಸ್ಸಿ (ಕೆಮಿಸ್ಟ್ರಿ) ಸ್ನಾತಕೋತ್ತರ ಪದವಿ/ ಎಂಎಸ್ಸಿ (ಮೈಕ್ರೊಬಯಾಲಜಿ) ಸ್ನಾತಕೋತ್ತರ ಪದವಿ ಪಡೆದು ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿದವರು ಅರ್ಜಿ ಸಲ್ಲಿಸಬಹುದು.

ಸಂಬಳ : 43,100-83,900 ರೂಪಾಯಿ

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

10. ವಿಸ್ತರಣಾಧಿಕಾರಿ ದರ್ಜೆ-3

22 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನದೊಂದಿರಬೇಕು. ತುಮಕೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವ್ಯಾಪ್ತಿಯ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕನಿಷ್ಟ 03 ವರ್ಷಗಳ ಸೇವೆ ಸಲ್ಲಿಸಿರಬೇಕು.

11. ಸಂಬಳ : 33,450-62,600 ರೂಪಾಯಿ

ಕೋ-ಆರ್ಡಿನೇಟರ್ (ಪ್ರೊಡಕ್ಷನ್)

02 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬಳ : 27,650-52,650 ರೂಪಾಯಿ

12. ಟೆಲಿಫೋನ್ ಆಪರೇಟರ್

02 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪದವಿ ಹೊಂದಿರಬೇಕು. ಜೊತೆಗೆ ಟೆಲಿಫೋನ್ ನಿರ್ವಹಣೆಯಲ್ಲಿ ಪ್ರಮಾಣ ಪತ್ರ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಸ೦ಬಳ : 27,650-52,650 ರೂಪಾಯಿ

ಇದನ್ನೂ ಓದಿ: ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

13. ಕಿರಿಯ ತಾಂತ್ರಿಕ

ವಿವಿಧ ಟ್ರೇಡ್‌ನ ಕಿರಿಯ ತಾಂತ್ರಿಕ 59 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯಾ ಟ್ರೇಡ್‌ಗೆ ಅನುಗುಣವಾಗಿ ಮೆಕ್ಯಾನಿಕಲಿನಲ್ಲಿ ಡಿಪ್ಲೊಮಾ ಪದವಿ, ಎಲೆಕ್ಟಿçಕಲ್ & ಎಲೆಕ್ಟ್ರಾನಿಕ್ಸ್ ಡಿಪ್ಲೊಮಾ, ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಡಿಪ್ಲೊಮಾ, ರೆಫ್ರಿಜಿರೇಷನ್ & ಏರ್‌ಕಂಡೀಷನನಿಂಗ್‌ನಲ್ಲಿ ಐಟಿಐ, ಫಿಟ್ಟರ್ ಟ್ರೇಡ್‌ನಲ್ಲಿ ಐಟಿಐ, ವೆಲ್ಡಿಂಗ್ ಟ್ರೇಡ್‌ನಲ್ಲಿ ಐಟಿಐ, ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಟ್ರೇಡ್‌ನಲ್ಲಿ ಐಟಿಐ, ಎಲೆಕ್ಟಾçನಿಕ್ ಮೆಕ್ಯಾನಿಕ್ ಟ್ರೇಡ್‌ನಲ್ಲಿ ಐಟಿಐ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು. ಬಾಯ್ಲರ್ ಹುದ್ದೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಡೈರೆಕ್ಟರ್ ಆಫ್ ಫ್ಯಾಕ್ಟರಿ & ಬಾಯ್ಲರ್ ರವರಿಂದ ಎರಡನೇ ದರ್ಜೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್ ಹೊಂದಿರಬೇಕು.

ಸ೦ಬಳ : 21,400-42,000 ರೂಪಾಯಿ

14. ಚಾಲಕರು

08 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿಯಲ್ಲಿ ತೇರ್ಗಡೆಯಾಗಿರಬೇಕು. ಕನ್ನಡವನ್ನು ಒಂದು ವಿಷಯವಾಗಿ ಓದಿರಬೇಕು ಹಾಗೂ ಎಲ್‌ಎಂವಿ/ಎಚ್‌ಎಂವಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಸ೦ಬಳ : 21,400-42,000 ರೂಪಾಯಿ

ಅರ್ಜಿ ಸಲ್ಲಿಕೆ ದಿನಾಂಕ: ಇದೇ ಏಪ್ರಿಲ್ 17, 2023 ಸಲ್ಲಿಕೆಗೆ ಕೊನೆಯ ದಿನಾಂಕವಾಗಿದ್ದು; ಅರ್ಜಿ ಶುಲ್ಕ ಪಾವತಿಗೂ ಕೂಡ ಏಪ್ರಿಲ್ 17, 2023 ಕೊನೆಯ ದಿನವಾಗಿದೆ.

ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ವಿವಿಧ ಹುದ್ದೆಗಳ ಅರ್ಜಿ ನಮೂನೆ ಹಾಗೂ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಸಹಾಯವಾಣಿ ಸಂಖ್ಯೆ: 9036072155

ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧಿಕೃತ ವೆಬ್‌ಸೈಟ್ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿAgriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!