ಉದ್ಯೋಗ

PUC ಅಭ್ಯರ್ಥಿಗಳಿಂದ ಕಿರಿಯ ಲೆಕ್ಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ | 42,000 ಸಂಬಳ | KPSC Junior Account Assistant Recruitment 2023

WhatsApp Group Join Now
Telegram Group Join Now

ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಲೆಕ್ಕಪತ್ರ ಇಲಾಖೆಯ ಕಿರಿಯ ಲೆಕ್ಕ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಖಚಿತ ವಿದ್ಯಾರ್ಹತೆ ಎಷ್ಟು? ಸಂಬಳ, ಸವಲತ್ತುಗಳೇನು? ವಯೋಮಿತಿ ಎಷ್ಟು? ನೇಮಕ ಹೇಗೆ? ಅರ್ಜಿ ಸಲ್ಲಿಕೆ ಹೇಗೆ? ಇತ್ಯಾದಿ ಸಮಗ್ರ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಳಿಕೆ ಮೂಲ ವೃಂದದ 67 ಕಿರಿಯ ಲೆಕ್ಕ ಸಹಾಯಕರ ಹುದ್ದೆಗೆ ಕರ್ನಾಟಕ ಲೋಕ ಸೇವಾ ಆಯೋಗವು (KPSC) ಅಧಿಸೂಚನೆ ಪ್ರಕಟಿಸಿದೆ. ಇದೇ ಮಾರ್ಚ್ 25 ರಿಂದ ಏಪ್ರಿಲ್ 25ರ ನಡುವಿನ ಒಂದು ತಿಂಗಳ ಅವಧಿಯೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಇವು ಗ್ರೂಪ್ ‘ಸಿ’ಯ ಹುದ್ದೆಗಳಾಗಿದ್ದು, ಬೆಂಗಳೂರಿನಲ್ಲಿ ಸೇವೆ ಸಲ್ಲಿಸಲು ಉಚ್ಛಿಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸುವ ಮೂಲಕ ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತಿ 6,406 ಹುದ್ದೆಗಳಿಗೆ ಪಿಯುಸಿ ಅಭ್ಯರ್ಥಿಗಳ ನೇಮಕಾತಿ

ವಿದ್ಯಾರ್ಹತೆ ಏನು?

ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಈ ಉದ್ಯೋಗವಕಾಶವಿದ್ದು; ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೆ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಪಿಎಸ್‌ಸಿಯು ಸ್ಪಷ್ಟಪಡಿಸಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಏಪ್ರಿಲ್ 25ರ ಒಳಗೆ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ದ್ವಿತೀಯ ಪಿಯುಸಿ ಅನ್ನು ಕಾಮರ್ಸ್ ಕಾಂಬಿನೇಷನ್‌ನಲ್ಲಿ ಓದಿರಬೇಕು. ಅಕೌಂಟೆನ್ಸಿ ಐಚ್ಛಿಕ ವಿಷಯವಾಗಿ ಓದಿರಬೇಕು. (Must have passed PUC in Commerce with Accountency as Optional Subject)

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ವಯೋಮಿತಿ ಎಷ್ಟು?

ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಹಿಂದುಳಿದ ವರ್ಗದ (ಪ್ರವರ್ಗ 2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಸಂಬಳ, ಸವಲತ್ತುಗಳೇನು?

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಳಿಕೆ ಮೂಲ ವೃಂದದ ಕಿರಿಯ ಲೆಕ್ಕ ಸಹಾಯಕರ ಹುದ್ದೆಗೆ 21,400 ರೂಪಾಯಿಯಿಂದ 42,000 ವರೆಗೆ ಮಾಸಿಕ ಸಂಬಳ ಮತ್ತು ಇತರ ಸವಲತ್ತುಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ನೇಮಕ ಹೇಗೆ?

ಈ ಹುದ್ದೆಗಳ ನೇಮಕ ಸಂಬ0ಧ ಯಾವುದೇ ಸಂದರ್ಶನ ಇರುವುದಿಲ್ಲ. ಆದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಈ ಪರೀಕ್ಷೆಯಲ್ಲಿ ಶೇ.35 ರಷ್ಟು ಅಂಕ ಪಡೆದವರು ಮಾತ್ರ ನೇಮಕಕ್ಕೆ ಅರ್ಹರಾಗಿರುತ್ತಾರೆ.

ಪತ್ರಿಕೆ-1 ಪರೀಕ್ಷೆ ಬರೆಯಲು ಒಂದೂವರೆ ಗಂಟೆ ಹಾಗೂ ಪತ್ರಿಕೆ-2ರ ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯ ಪಠ್ಯ ಕ್ರಮವನ್ನು ಆಯೋಗದ ವೆಬ್‌ನಲ್ಲಿ ಒದಗಿಸಲಾಗಿದೆ. ಪ್ರಶ್ನೆ ಪತ್ರಿಕೆಯು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಮುಂದೆ ನೀಡಲಾಗುತ್ತದೆ. ಅಗತ್ಯ ಇರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನೂ ಬರೆದು ಅರ್ಹತೆ ಪಡೆಯಬೇಕಿರುತ್ತದೆ. ಪರೀಕ್ಷಾ ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಪರೀಕ್ಷೆ ಕುರಿತ ವಿವರವಾದ ಮಾಹಿತಿ ಅಧಿಸೂಚನೆ (ಓoಣiಜಿiಛಿಚಿಣioಟಿ)ಯಲ್ಲಿದೆ ಸಂಪೂರ್ಣ ಓದಿಕೊಳ್ಳಿ.

ಇದನ್ನೂ ಓದಿ: ರೈತರಿಗೆ 5 ಲಕ್ಷ ರೂಪಾಯಿ ಶೂನ್ಯ ಬಡ್ಡಿ ಸಾಲ ಏಪ್ರಿಲ್ 1ರಿಂದ ಜಾರಿ: ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂಪಾಯಿ ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಮಾಜಿ ಸೈನಿಕರು ಕೇವಲ 50 ರೂಪಾಯಿ ಮಾತ್ರ ಅರ್ಜಿ ಶುಲ್ಕ ಪಾವತಿಸಬೇಕಿದೆ. ಇನ್ನು ಪರಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆದರೆ ಪ್ರಕ್ರಿಯೆ ಶುಲ್ಕ 35 ರೂಪಾಯಿಗಳನ್ನು ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಬಹುದು.

ಅರ್ಜಿ ಸಲ್ಲಿಕೆ ಹೇಗೆ?

ಮೊದಲಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರೊಫೈಲ್ ಕ್ರಿಯೇಟ್ ಅಥವಾ ಅಪ್‌ಡೇಟ್ ಮಾಡುವುದು. ಬಳಿಕ ಭರ್ತಿ ಮಾಡಿದ ಅರ್ಜಿಯನ್ನು ಅಪ್ಲಿಕೇಶನ್ ಸಬ್‌ಮಿಷನ್ ಮಾಡುವುದು. ನಂತರ ಅಪ್ಲಿಕೇಶನ್ ಶುಲ್ಕ ಪಾವತಿ ಮಾಡುವುದು.

ಇದನ್ನೂ ಓದಿ: 8ನೇ ತರಗತಿ ಪಾಸಾಗಿದ್ದರೆ ಸ್ವಯಂ ಉದ್ಯಮ ಪ್ರಾರಂಭಿಸಲು ಸಿಗಲಿದೆ 25 ಲಕ್ಷ ರೂಪಾಯಿ ಸಾಲ ಸೌಲಭ್ಯ | ಶೇ.35ರಷ್ಟು ಸಬ್ಸಿಡಿ

ಅರ್ಜಿ ಸಲ್ಲಿಕೆಯ ದಿನಾಂಕ:

ಇದೇ ಮಾರ್ಚ್ 25, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು; ಏಪ್ರಿಲ್ 25, 2023 ಅರ್ಜಿ ಹಾಕಲು ಕೊನೆ ದಿನಾಂಕವಾಗಿದೆ. ಅದೇ ರೀತಿ ಏಪ್ರಿಲ್ 26, 2023 ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕವಾಗಿದೆ. ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು.

ಇದನ್ನೂ ಓದಿ: ರೈತರ ಹಸು, ಎಮ್ಮೆ, ಕರುಗಳಿಗೂ ಬಂತು ಪ್ರತ್ಯೇಕ ಹಾಸ್ಟೆಲ್ | ಇಲ್ಲಿಗೆ ದನಗಳನ್ನು ಸೇರಿಸುವುದು ಹೇಗೆ? | ಸಂಪೂರ್ಣ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಉಳಿಕೆ ಮೂಲ ವೃಂದದ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ಅರ್ಜಿ ನಮೂನೆ ಹಾಗೂ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿಗೆ ಆಯೋಗದ ಈ ಕೆಳಗಿನ ದೂರವಾಣಿಯನ್ನು ಸಂಪರ್ಕಿಸಬಹುದು:

  • ಕೇ0ದ್ರ ಕಚೇರಿಯ ಮಾಹಿತಿ ಕೇಂದ್ರ:  : 080-30574957/ 30574901
  • ಪ್ರಾಂತೀಯ ಕಚೇರಿ ಮೈಸೂರು: 0821-2545956
  • ಪ್ರಾಂತೀಯ ಕಚೇರಿ ಬೆಳಗಾವಿ: 0831-2475345
  • ಪ್ರಾಂತೀಯ ಕಚೇರಿ ಮೈಸೂರು ಕಲಬುರಗಿ: 08472-227944
  • ಪ್ರಾಂತೀಯ ಕಚೇರಿ ಶಿವಮೊಗ್ಗ: 08182-228099

ಅರ್ಜಿ ಸಲ್ಲಿಸಲು ಮತ್ತು ಇನ್ನೂ ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ : https://kpsc.kar.nic.in/

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿAgriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!