ಉದ್ಯೋಗ

ಮ್ಯಾಂಡೌಸ್ ಚಂಡಮಾರುತದ ಎಫೆಕ್ಟ್ : ರಾಜ್ಯದ 15 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ | Mandous Cyclone Effect

WhatsApp Group Join Now
Telegram Group Join Now

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ಮ್ಯಾಂಡೌಸ್ ಚಂಡಮಾರುತವು ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯತ್ತ ಆಗಮಿಸಿದ್ದು; ಇದರ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಏನಿದು ಮ್ಯಾಂಡೌಸ್ ಚಂಡಮಾರುತ? ಎಲ್ಲೆಲ್ಲಿ ಮಳೆಯಾಗಲಿದೆ? ಸಂಪೂರ್ಣ  ಮಾಹಿತಿ ಇಲ್ಲಿದೆ… 

ಕರ್ನಾಟಕಕ್ಕೂ ಮ್ಯಾಂಡೌಸ್ (Mandous) ಚಂಡಮಾರುತದ ಎಫೆಕ್ಟ್ ತಟ್ಟಿದೆ. ಚಂಡಮಾರುತದ ಭೀತಿ ನಡುವೆ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರದ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 15 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿ ಕರಾವಳಿ ಪ್ರದೇಶದತ್ತ ಸಾಗಿ ಬಂದ ಮ್ಯಾಂಡೌಸ್ ಚಂಡಮಾರುತದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ ಎರಡು ದಿನ ರಾಜ್ಯದಲ್ಲಿ ಮಳೆ ಆರ್ಭಟಿಸಲಿದ್ದು, ಒಟ್ಟು 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.

ಇದನ್ನೂ ಓದಿ: ಡಿಸೆಂಬರ್ 15ರೊಳಗೆ ಅರ್ಜಿ ಸಲ್ಲಿಸಿ ₹3.50 ಲಕ್ಷ ಬೋರ್‌ವೆಲ್ ಸಹಾಯಧನ ಪಡೆಯಿರಿ

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಮಳೆ ಜೊತೆ ಗಾಳಿಯ ವೇಗವು ಹೆಚ್ಚಾಗುವ ಸಾಧ್ಯತೆ ಇದ್ದು, ಕನಿಷ್ಠ ತಾಪಮಾನ ಕೂಡ ಇಳಿಕೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಇನ್ನು ನಂತರ ದಿನವೂ ಇದೇ ಹವಾಮಾನ ಮುಂದುವರೆಯಲಿದ್ದು, ವಾಯುಗುಣದಲ್ಲಿ ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಏಲ್ಲೆಲ್ಲಿ ಮಳೆ ಪ್ರಭಾವ?

ಕರ್ನಾಟಕದ ಮೇಲೆ ಅದರಲ್ಲೂ ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇಲೆ ಮಾಂಡೌಸ್ ಪ್ರಭಾವ ಹೆಚ್ಚಾಗಿರಲಿದೆ. ಡಿಸೆಂಬರ್ 11 ಮತ್ತು 12ರಂದು ಗುಡುಗು ಸಹಿತ ಧಾರಾಕಾರವಾಗಿ ಮಳೆ ಅಬ್ಬರಿಸಲಿದೆ. ಹೀಗಾಗಿ ಎರಡು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಸೇರಿ ಒಟ್ಟು 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ 15 ಜಿಲ್ಲೆಗಳಲ್ಲಿ ಸರಿಸುಮಾರು 11.5 ಸೆಂಟಿ ಮೀಟರ್ ವರೆಗೆ ಮಳೆ ಬರುವ ಮುನ್ಸೂಚನೆ ಇದೆ. ಈ ಎರಡು ದಿನ ಹೊರತಾಗಿ ಉಳಿದ ದಿನಗಳಲ್ಲಿ ಅಷ್ಟಾಗಿ ಮಳೆ ಆಗದೇ ಹಗುರವಾಗಿ ಬರಬಹುದು ಎಂದು ಎನ್ನಲಾಗಿದೆ. ಎಲ್ಲಡೆ ಚಳಿ ಹಾಗೂ ಮೋಡ ಕವಿದ ಮಬ್ಬು ವಾತಾವರಣ ನಿರ್ಮಾಣವಾಗಲಿದೆ.

ಇದನ್ನೂ ಓದಿ: ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ಏನಿದು ಮ್ಯಾಂಡೌಸ್ ಚಂಡಮಾರುತ?

ಮ್ಯಾಂಡೌಸ್ ಎಂಬುವುದು ಅರೇಬಿಕ್ ಪದವಾಗಿದ್ದು, ನಿಧಿ ಪೆಟ್ಟಿಗೆಎಂಬುದು ಇದರ ಅರ್ಥ. ಅರಬ್ ಸಂಯುಕ್ತ ಸಂಸ್ಥಾನವು ಈ ಹೆಸರನ್ನು ಸೂಚಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ಮ್ಯಾಂಡೌಸ್ ಚಂಡಮಾರುತವು ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯತ್ತ ಆಗಮಿಸಿದೆ. ಈ ಸೈಕ್ಲೋನ್ ಗಾಳಿಯ ವೇಗ ಗಂಟೆಗೆ 65ರಿಂದ 75 ಕಿಲೋ ಮೀಟರ್ ವರೆಗೆ ಇದೆ. ಕೆಲವೊಮ್ಮೆ ಇದರ ವೇಗ 80 ಕಿಲೋ ಮೀಟ್ ವರೆಗೆ ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

========================

ಇವುಗಳನ್ನೂ ಓದಿ:

ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ದಿನಕ್ಕೆ 300 ರೂಪಾಯಿ ಭತ್ಯೆ ಸಹಿತ ಉಚಿತ ಮೀನುಗಾರಿಕೆ ತರಬೇತಿ

ಮಣ್ಣಿನ ಆರೋಗ್ಯ ತಪಾಸಣೆ: ರೈತರಿಗೆ ಸಿಗಲಿದೆ ಅಧಿಕ ಆದಾಯ

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಕೂಡಲೇ ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!