ಶಿಕ್ಷಣ ಸುದ್ದಿಸರಕಾರಿ ಯೋಜನೆ

Application for Morarji Desai Residential School 2024-25 : ಮುರಾರ್ಜಿ ಸೇರಿ ವಿವಿಧ ಉಚಿತ ವಸತಿ ಶಾಲೆಗೆ ಅರ್ಜಿ ಅಹ್ವಾನ | ಹಲವಾರು ವಸತಿ ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಗೆ ಅರ್ಜಿ ಅಹ್ವಾನ |

WhatsApp Group Join Now
Telegram Group Join Now

ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ ಸೇರಿದಂತೆ ವಿವಿಧ ಉಚಿತ ವಸತಿ ಶಾಲೆಗಳ 2024-25 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಆನಲೈನ್ ಅರ್ಜಿ ಆಹ್ವಾನ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ…

Application for Morarji Desai Residential School 2024-25 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಉಚಿತ ವಸತಿ ಶಾಲೆಗಳಾದ ಮುರಾರ್ಜಿ ದೇಸಾಯಿ, ಕಿತ್ತೂರಾಣಿ ಚೆನ್ನಮ್ಮ ಸೇರಿದಂತೆ ವಿವಿಧ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶಾತಿ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: free job training scheme : ಪ್ರತಿಷ್ಟಿತ ಸರಕಾರಿ, ಕಾರ್ಪೊರೇಟ್ ಕಂಪನಿಗಳ ಉದ್ಯೋಗಕ್ಕಾಗಿ ಸರಕಾರದಿಂದ ಉಚಿತ ತರಬೇತಿ | 27,000 ಅಭ್ಯರ್ಥಿಗಳಿಗೆ ಅವಕಾಶ | ಈಗಲೇ ಅರ್ಜಿ ಸಲ್ಲಿಸಿ…

ಯಾವ ಯಾವ ಉಚಿತ ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ : Application for Morarji Desai Residential School 2024-25 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ಉಚಿತ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದು:

 1. ಮೊರಾರ್ಜಿ ದೇಸಾಯಿ ವಸತಿ ಶಾಲೆ
 2. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ
 3. ಏಕಲವ್ಯ ಮಾದರಿ ವಸತಿ ಶಾಲೆ
 4. ಅಟಲ್ ಬಿಹಾರ ವಾಜಪೇಯಿ ವಸತಿ ಶಾಲೆ
 5. ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ
 6. ಡಾ| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ
 7. ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ
 8. ಸಂಗೊಳ್ಳಿ ರಾಯಣ್ಣ ವಸತಿ ಶಾಲೆ
 9. ಕವಿರನ್ನ ವಸತಿ ಶಾಲೆ
 10. ಗಾಂಧಿತತ್ವ ವಸತಿ ಶಾಲೆ
 11. ಶ್ರೀ ನಾರಾಯಣ ಗುರು ವಸತಿ ಶಾಲೆ

ಇದನ್ನೂ ಓದಿ: Loan and subsidy schemes for women : ಮಹಿಳೆಯರಿಗಾಗಿಯೇ ಇರುವ ಸಾಲ ಮತ್ತು ಸಬ್ಸಿಡಿ ಯೋಜನೆಗಳು: ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಯಾರು ಅರ್ಹರು? Eligibility to apply for Karnataka residential school :

ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಪ್ರಸ್ತುತ 5ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು. ವರ್ಗವಾರು ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ ಈ ಕೆಳಗಿನಂತಿರಬೇಕು:

 • ಪ.ಜಾತಿ / ಪರಿಶಿಷ್ಟ ವರ್ಗ – ₹2,50,000
 • ಹಿಂ.ವರ್ಗದ ಪ್ರವರ್ಗ 1 – ₹2,50,000
 • ಹಿಂ.ವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗ – ₹1,00,000

ಆಯ್ಕೆ ವಿಧಾನ? (Selection procedure) : ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ನಿಗದಿತ ದಿನಾಂಕದ೦ದು ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ (Karnataka Examination Authority) 100 ಅಂಕಗಳ ಪ್ರವೇಶಾತಿ ಪರೀಕ್ಷೆ ನಡೆಸಲಾಗುವುದು. ಈ ಪ್ರವೇಶಾತಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆದಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: ಜನವರಿಯಿಂದ ಪದವೀಧರರಿಗೆ ಸಿಗಲಿದೆ ಪ್ರತಿ ತಿಂಗಳು ₹3000 ಸಹಾಯಧನ | ಅರ್ಜಿ ಸಲ್ಲಿಕೆ ಹೇಗೆ? | Karnataka Yuva Nidhi Scheme

ವಿದ್ಯಾರ್ಥಿಗಳಿಗೆ ತಮಗೆ ಇಚ್ಛೆ ಇರುವ ವಸತಿ ಶಾಲೆ ಸಿಗಬೇಕೆಂದರೆ ಏನು ಮಾಡಬೇಕು? : ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ, ಯಾವ ಶಾಲೆಗಳಲ್ಲಿ ದಾಖಲಾತಿ ಬಯಸುತ್ತಿರೋ ಅಂತಹ ವಸತಿ ಶಾಲೆಗಳನ್ನು ನಿಮ್ಮ ಅದ್ಯತಾ ಕ್ರಮದಲ್ಲಿ ನಮೂದಿಸಬೇಕು. ನೀವು ಅರ್ಜಿ ಸಲ್ಲಿಸುವಾಗ ಯಾವ ಯಾವ ಶಾಲೆಗಳನ್ನು ಆಯ್ಕೆ ಮಾಡಿಕೊಂಡಿರುತ್ತಿರೋ ಅಂತಹ ಶಾಲೆಗಳನ್ನು ಮಾತ್ರ ಸೀಟು ಹಂಚಿಕೆ ಪರಿಗಣಿಸಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗಳ ಆಯ್ಕೆಯನ್ನು ನಮೂದಿಸಿ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Required documents for Morarji Residential school application) :

 • ಭಾವಚಿತ್ರ
 • 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ SATS ಸಂಖ್ಯೆ
 • ಆದಾಯ ಪ್ರಮಾಣ ಪತ್ರ
 • ವ್ಯಾಸಂಗ ಪ್ರಮಾಣ ಪತ್ರ
 • ಜಾತಿ ಪ್ರಮಾಣ ಪತ್ರ
 • ಮತ್ತು ಇತರೆ ಅಗತ್ಯ ದಾಖಲಾತಿಗಳು

ಇದನ್ನೂ ಓದಿ: Free IAS, KAS Coaching scheme for OBC students : ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸರ್ಕಾರದಿಂದ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ | Online Applications For Free Upsc Kpsc Banking Exam Coaching

ಅರ್ಜಿ ಸಲ್ಲಿಸುವುದು ಹೇಗೆ? : ನಾವು ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಿಗದಿತ ದಿನಾಂಕದ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ, ನಿಖರವಾದ ಮಾಹಿತಿಯನ್ನು ಭರ್ತಿ ಮಾಡಿ ವಿದ್ಯಾರ್ಥಿಗಳು ಆನ್ ಲೈನ್ ಮುಕಾಂತರ ಅರ್ಜಿ ಸಲ್ಲಿಸಬಹುದು.

ಪ್ರವೇಶ ಪರೀಕ್ಷೆಯ ಮುಖ್ಯ ಮಾಹಿತಿ (Entrance exam details) : ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು 1ನೇ ಫೆಬ್ರವರಿ 2024 ರಂದು ಕೆಳಗೆ ಇರುವ ಜಾಲತಾಣಕ್ಕೆ ಭೇಟಿ ನೀಡಿ ಪರೀಕ್ಷೆಗೆ ಪ್ರವೇಶ ಪತ್ರವನ್ನು (Hall ticket) ಡೌನಲೋಡ್ ಮಾಡಿಕೊಳ್ಳಬೇಕು. ನಂತರ 18ನೇ ಫೆಬ್ರವರಿ 2024, ಭಾನುವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ: Loan Schemes : ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ | ಪಡೆದ ಸಾಲಕ್ಕೆ 70% ಸಬ್ಸಿಡಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

 • ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭ ದಿನಾಂಕ :
  07-12-2023
 • ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೊನೆಯ ದಿನಾಂಕ :
  31-12-2023
 • ಅರ್ಜಿ ಸಲ್ಲಿಸುವ ಜಾಲತಾಣದ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
  (ಅರ್ಜಿ ಸಲ್ಲಿಸಲು ನಿಗದಿತ ದಿನಾಂಕದ೦ದು ಈ ಮೇಲಿನ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ)
 • ಸಹಾಯವಾಣಿ ಸಂಖ್ಯೆ : 080-23460460

Application for Free Residential School 2023-24 has started

PhonePe Loan : ಫೋನ್ ಪೇ ಸಾಲ ಸೌಲಭ್ಯ | ನೀವು ಅರ್ಹರಾ? ಹೀಗೆ ಪರಿಶೀಲಿಸಿ | PhonePe loan details

WhatsApp Group Join Now
Telegram Group Join Now

Related Posts

error: Content is protected !!