ಸರಕಾರಿ ಯೋಜನೆ

ಮುಂಗಾರು ಮಳೆಯಿಂದಾದ ಹಾನಿ ಎಷ್ಟು? ಇಲ್ಲಿದೆ ಅಂಕಿಅಂಶಗಳ ಮಾಹಿತಿ… | Rain damage:

WhatsApp Group Join Now
Telegram Group Join Now

ರಾಜ್ಯದ ಎಡೆಬಿಡದೇ ಸುರಿಯುತ್ತಿರುವ ಮಳೆ ಸಾಕಷ್ಟು ಆವಾಂತರ ಸೃಷ್ಟಿಸಿದೆ. ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಯಿಂದಾದ ಜೀವಹಾನಿ, ಬೆಳೆಹಾನಿ, ಮಳೆಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಕುರಿತ ಅಂಕಿಅ೦ಶವನ್ನು ಬಿಡುಗಡೆ ಮಾಡಿದ್ದಾರೆ.

ಪ್ರವಾಹದಂತಹ ಸಂಕಷ್ಟದ ಸಂದರ್ಭದಲ್ಲಿ ರೈತರಿಂದ ಬಲವಂತವಾಗಿ ಸಾಲ ವಸೂಲು ಮಾಡಬಾರದು. ಖಾಸಗಿ ಲೇವಾದೇವಿದಾರರ ಮೇಲೂ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಇದನ್ನೂ ಓದಿ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ | ಊಟ ಮತ್ತು ವಸತಿ ಕೂಡ ಉಚಿತ… 

ಆಗು-ಹೋಗುಗಳ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ನಿಗಾ ವಹಿಸಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ಉಳಿಯಬೇಕು ಜಿಲ್ಲಾಧಿಕಾರಿಗಳಿಗೆ ಅನುದಾನ ಲಭ್ಯವಿದೆ. ಎಸ್​ಡಿಆರ್​ಎಫ್​ನಡಿ ಅನುದಾನವೂ ಇದೆ. ಹೆಚ್ಚಿನ ಅನುದಾನ ಅಗತ್ಯವಿದ್ದರೆ ಪ್ರಸ್ತಾವನೆ ಕಳಿಸಲು ಸೂಚಿಸಿದರು.

ಪ್ರಸ್ತುತ ರಾಜ್ಯದಲ್ಲಿ 313 ಮಿ.ಮೀ. ಮಳೆ ಆಗಿದ್ದು; ಇದು ವಾಡಿಕೆ ಮಳೆಗಿಂತ ಶೇ.37 ರಷ್ಟು ಹೆಚ್ಚು. ಜೂನ್ 1 ರಿಂದ ಈವರೆಗೆ ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 21 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. 6 ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ.

ರಾಜ್ಯದ ಎಲ್ಲ ಜಲಾಶಯಗಳು ಭರ್ತಿಯಾಗುತ್ತಿವೆ. ಒಂದು ವಾರದಲ್ಲಿ ಒಟ್ಟು ಒಳಹರಿವು 227 ಟಿಎಂಸಿ. ಜೂನ್ 1 ರಿಂದ ಈವರೆಗೆ ಒಟ್ಟು 38 ಮಾನವ ಜೀವಹಾನಿ ಆಗಿದೆ. 35 ಜನರು ಗಾಯಗೊಂಡಿದ್ದಾರೆ.

57 ಮನೆಗಳು ಸಂಪೂರ್ಣವಾಗಿ, 208 ಮನೆಗಳು ತೀವ್ರ ಹಾಗೂ 2682 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮಳೆಯಿಂದಾಗಿ 105 ಜಾನುವಾರುಗಳು ಮೃತಪಟ್ಟಿವೆ. 541.39 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಜಲಾವೃತಗೊಂಡಿದೆ.

ಇದನ್ನೂ ಓದಿ: ಮಳೆಯಿಂದಾದ ಬೆಳೆ ಹಾನಿಗೆ ₹28,000 ಪರಿಹಾರ | ಪರಿಹಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಸರಕಾರದ ಶರತ್ತುಗಳೇನು? ಹೆಚ್ಚುವರಿ ದರ ಪಟ್ಟಿ ಇಲ್ಲಿದೆ…

407 ಕಿ.ಮೀ. ರಾಜ್ಯ ಹೆದ್ದಾರಿ, 425 ಕಿ.ಮೀ. ಜಿಲ್ಲಾ ಹೆದ್ದಾರಿ, 1277 ಕಿ.ಮೀ. ಗ್ರಾಮೀಣ ರಸ್ತೆಗಳು ಸೇರಿ ಒಟ್ಟು 2109 ಕಿ.ಮೀ. ರಸ್ತೆ ಹಾನಿಯಾಗಿದೆ. 189 ಸೇತುವೆ, 889 ಶಾಲಾ ಕೊಠಡಿ, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳಿಗೆ ಹಾನಿಯಾಗಿದೆ.

11,995 ವಿದ್ಯುತ್ ಕಂಬಗಳು, 894 ಟ್ರಾನ್ಸ್​ಫಾರ್ಮರ್ ಗಳು ಹಾನಿಯಾಗಿದ್ದು, 215 ಕಿ.ಮೀ. ಉದ್ದದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜೂನ್​ನಲ್ಲಿ ಮಳೆ ಕೊರತೆಯಾದ್ದರಿಂದ ಈ ವರೆಗೆ ಶೇ. 53 ರಷ್ಟು ಬಿತ್ತನೆಯಾಗಿದೆ. ರಾಜ್ಯದಲ್ಲಿ 156 ಲಕ್ಷ ಟನ್ ಮೇವು ದಾಸ್ತಾನು ಇದ್ದು, ಮುಂದಿನ 29 ವಾರಗಳಲ್ಲಿ ಸಾಕಾಗುವಷ್ಟಿದೆ.

ಇದನ್ನೂ ಓದಿ: RationCard: ಹೊಸ ರೇಷನ್ ಕಾರ್ಡ್ ಅರ್ಜಿ ಶೀಘ್ರ ಸ್ವೀಕಾರ ಆಹಾರ ಸಚಿವರ ಸೂಚನೆ

WhatsApp Group Join Now
Telegram Group Join Now

Related Posts

error: Content is protected !!