ಸರಕಾರಿ ಯೋಜನೆ

ಹೊಸ ರೇಷನ್ ಕಾರ್ಡ್ ಲೀಸ್ಟ್ ನಲ್ಲಿ ನಿಮ್ಮ ಹೆಸರಿದೆಯಾ? ಮೊಬೈಲ್‌ನಲ್ಲೇ ಚೆಕ್ ಮಾಡಿ… | New Ration Card Application

WhatsApp Group Join Now
Telegram Group Join Now

ಹೊಸ ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ? ರೇಷನ್ ಕಾರ್ಡ್ಗಾಗಿ ಸಲ್ಲಿಸಿದ್ದ ಅರ್ಜಿ ಸ್ಥಿತಿ ಏನಾಯ್ತು? ನಿಮ್ಮ ರೇಷನ್ ಕಾರ್ಡ್ ಆಕ್ಟೀವ್ ಆಗಿದೆಯೋ ಇಲ್ಲವೋ? ಎಂಬ ಗೊಂದಲವನ್ನು ಪರಿಹರಿಸಿಕೊಳ್ಳಿ…

ಹೊಸ ಎಪಿಎಲ್, ಬಿಪಿಎಲ್ ರೇಷನ್ ಕಾರ್ಡ್ಗಳಿಗಾಗಿ ಅರ್ಜಿ ಸಲ್ಲಿಸಿ ಹಲವು ತಿಂಗಳುಗಳು ಕಳೆದಿದ್ದರೂ ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ವರ್ಷದ ಹಿಂದೆಯೇ ಹೊಸ ಪಡಿತರ ಚೀಟಿಗೆಂದು ಅರ್ಜಿ ಸಲ್ಲಿಸಿ ಕಾಯುತ್ತಿರುವ ಲಕ್ಷಾಂತರ ಮಂದಿಗೆ ಈವರೆಗೂ ಪಡಿತರ ಚೀಟಿ ಸಿಕ್ಕಿಲ್ಲ. ಹೊಸ ಪಡಿತರ ಕಾರ್ಡ್ ಅರ್ಜಿ ಸಲ್ಲಿಸಲು ಯಾವುದೇ ನಿರ್ಬಂಧವಿಲ್ಲ, ಆದರೆ ಕಾರ್ಡು ಇಂತಿಷ್ಟೇ ದಿನಕ್ಕೆ ಬರಲಿದೆ ಎಂಬುವುದನ್ನು ಮಾತ್ರ ನಿರೀಕ್ಷಿಸಬೇಡಿ ಎಂಬ ಉತ್ತರ ಇಲಾಖೆಯ ಮೂಲಗಳಿಂದ ಸಿಗುತ್ತದೆ.

ಒಂದು ಜಿಲ್ಲೆಯಲ್ಲಿ ನಿರ್ದಿಷ್ಟ ಪ್ರಮಾಣದಷ್ಟು ಬಿಪಿಎಲ್ ಕಾರ್ಡ್ ಮಾತ್ರ ಇರಬೇಕು ಎಂಬ ನಿಯಮವಿದೆ. ಶೇ.100ರಷ್ಟು ಜನಸಂಖ್ಯೆಯಲ್ಲಿ ಎಲ್ಲರಿಗೂ ಬಿಪಿಎಲ್ ಕಾರ್ಡ್ ನೀಡಲು ಸಾಧ್ಯವಿಲ್ಲ. ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಿದವರಲ್ಲಿ ಎಲ್ಲರೂ ಅರ್ಹರಿದ್ದರೂ ನಿರ್ದಿಷ್ಟ ಪ್ರಮಾಣ ಮೀರದಂತೆ ಅದರಲ್ಲಿ ಹಂತಹ೦ತವಾಗಿ ವಿತರಣೆ ಮಾಡಲಾಗುತ್ತದೆ.

ಇದನ್ನೂ ಓದಿ: 1,750 ರೂಪಾಯಿ ಮಾಸಿಕ ಸಂಬಳದ ಜೊತೆಗೆ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ | ರೈತ ಮಕ್ಕಳೇ ಇದರ ಪ್ರಯೋಜನ ಪಡೆಯಿರಿ

ಕಾರ್ಡ್ ವಿತರಣೆ ಪ್ರಕ್ರಿಯೆ ಹೇಗೆ? 

ಬಿಪಿಎಲ್ ಕಾರ್ಡ್ ಕೋರಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, ಅದನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗುತ್ತದೆ. ಜಿಲ್ಲೆಯಿಂದ ರಾಜ್ಯಕ್ಕೆ ಕಳುಹಿಸಿ, ರಾಜ್ಯದಿಂದ ಅನುಮೋದನೆ ಪಡೆದು ಹಂಚಿಕೆ ಮಾಡಲಾಗುತ್ತದೆ. ಹಂಚಿಕೆ ಮಾಡುವ ಪ್ರಕ್ರಿಯೆಯು ಆಹಾರ ನಿರೀಕ್ಷಕರ ಮೂಲಕ ಮಾಡಲಾಗುತ್ತದೆ. ಆನ್‌ಲೈನ್ ಮೂಲಕವೇ ಪ್ರಕ್ರಿಯೆ ನಡೆಯುವುದರಿಂದ ಇದರ ಲಿಂಕ್ ತೆರೆದುಕೊಳ್ಳುವುದೇ ಸಂಜೆ 5ರ ಅನಂತರ ಮತ್ತು ರಾತ್ರಿ 8ಕ್ಕೆ ಕ್ಲೋಸ್ ಆಗುತ್ತದೆ. ಈ ಅವಧಿಯೊಳಗೆ ಆಹಾರ ನಿರೀಕ್ಷಕರು ಲಾಗಿನ್ ಆಗಿ ಅನುಮೋದನೆ ನೀಡಬೇಕು. ಇದೊಂದು ರೀತಿಯಲ್ಲಿ ರಾತ್ರಿ ಪಾಳಿಯಿದ್ದಂತೆ ಎಂದು ಆಹಾರ ನಿರೀಕ್ಷಕರು ಹೇಳುತ್ತಿದ್ದಾರೆ.

ಹಾಗಂತ ಅನುಮೋದಿತ ಅರ್ಜಿಗಳನ್ನು ಅಂಗೀಕರಿಸಿಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಯಿಂದ ತಿಂಗಳು ಪೂರ್ತಿ ಅವಕಾಶ ನೀಡುವುದಿಲ್ಲ. ಬದಲಾಗಿ ಪ್ರತೀ ತಿಂಗಳ ಅಥವಾ ಎರಡು ಮೂರು ತಿಂಗಳಿಗೆ ಒಮ್ಮೆ 15 ದಿನಗಳ ಅವಕಾಶ ಮಾತ್ರ ನೀಡಲಾಗುತ್ತದೆ. ಈ ಅವಧಿಯಲ್ಲೇ ಅನುಮೋದನೆಯನ್ನು ಆಹಾರ ನಿರೀಕ್ಷಕರು ನೀಡಬೇಕಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಸಮಯ ನೀಡುವುದಿಲ್ಲ. ಹೀಗಾಗಿ ಅರ್ಜಿ ಸಲ್ಲಿಸಿದವರೆಲ್ಲರಿಗೂ ಕಾರ್ಡ್ ಸಿಗಲು ತಡವಾಗುತ್ತಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 8ನೇ ತರಗತಿ ಪಾಸಾಗಿದ್ದರೆ ಸ್ವಯಂ ಉದ್ಯಮ ಪ್ರಾರಂಭಿಸಲು ಸಿಗಲಿದೆ 25 ಲಕ್ಷ ರೂಪಾಯಿ ಸಾಲ ಸೌಲಭ್ಯ | ಶೇ.35ರಷ್ಟು ಸಬ್ಸಿಡಿ

ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ?

ರೇಷನ್ ಕಾರ್ಡ್ಗಾಗಿ ಸಲ್ಲಿಸಿದ್ದ ತಮ್ಮ ಅರ್ಜಿ ಏನಾಯ್ತು? ಹೊಸ ರೇಷನ್ ಕಾರ್ಡ್ ಪಟ್ಟಿಯಲ್ಲಿ ನಮ್ಮ ಹೆಸರಿದೆಯೋ ಇಲ್ಲವೋ? ನಮ್ಮ ರೇಷನ್ ಕಾರ್ಡ್ ಆಕ್ಟೀವ್ ಆಗಿದೆಯೋ ಇಲ್ಲವೋ? ಎಂಬ ಗೊಂದಲ ಅನೇಕರಲ್ಲಿದೆ. ನಿಮ್ಮಲ್ಲಿ ಸ್ಮಾರ್ಟ್ಫೋನ್ ಇದ್ದರೆ ಈ ಗೊಂದಲವನ್ನು ಸುಲಭವಾಗಿ ಪರಿಹರಿಸಿಕೊಳ್ಳಬಹುದು.

ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ? ಇಲ್ಲವೋ? ಎಂಬುವುದನ್ನು ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿದರೆ,

https://ahara.kar.nic.in/Home/EServices

ನಿಮಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಾಲತಾಣದ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಎಡಬದಿಯಲ್ಲಿ ಕಾಣುವ ಮೂರು ಅಡ್ಡ ಗೆರೆಯ ಮೇಲೆ ಒತ್ತಿದರೆ ವಿಧಾನ, ಇ-ಪಡಿತರ ಚೀಟಿ, ಇ-ಸ್ಥಿತಿ, ಇ-ನ್ಯಾಯಬೆಲೆ ಅಂಗಡಿ, ಸಾರ್ವಜನಿಕ ದೂರು & ಬಹುಮಾನ ಯೋಜನೆ, ಎಸ್‌ಎಂಎಸ್, ಅಂಕಿಅ೦ಶ, ಟೆಂಡರ್ ಸೇರಿದಂತೆ ವಿವಿಧ ಸೇವೆಗಳ ಪಟ್ಟಿ ಕಾಣಿಸುತ್ತದೆ. ಅವುಗಳಲ್ಲಿ ಎರಡನೇ ಸಾಲಿನಲ್ಲಿರುವ ಇ-ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿದರೆ ವಿವಿಧ ಆಪ್ಷನ್‌ಗಳು ಕಾಣಿಸುತ್ತದೆ. ಅದರಲ್ಲಿ 8ನೇ ಸಾಲಿನಲ್ಲಿರುವ ಹಳ್ಳಿ ಪಟ್ಟಿ (Village List) ಮೇಲೆ ಕ್ಲಿಕ್ ಮಾಡಬೇಕು. ಆಗ Village List ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು GO ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: 2007 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ: ಪಿಯುಸಿ ಪಾಸ್ ಆದವರಿಗೆ ಅವಕಾಶ | ತಾಲ್ಲೂಕುವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

ಆಗ ನಿಮ್ಮೂರಿನಲ್ಲಿರುವ ಅಷ್ಟೂ ರೇಷನ್ ಕಾರ್ಡ್ ಹೊಂದಿರುವವರ ಪಟ್ಟಿ ಕಾಣುತ್ತದೆ. ರೇಷನ್ ಕಾರ್ಡ್ ನಂಬರ್, ಹೆಸರು, ವಿಳಾಸ ಹಾಗೂ ಯಾವ ಕಾರ್ಡ್ (ಬಿಪಿಎಲ್ ಕಾರ್ಡ್ ಅಥವಾ ಎಪಿಎಲ್ ಕಾರ್ಡ್), ಕುಟುಂಬದಲ್ಲಿ ಎಷ್ಟು ಜನರಿದ್ದಾರೆ ಎಂಬ ವಿವರವಾದ ಮಾಹಿತಿ ಕಾಣುತ್ತದೆ. ಕೆಳಗಡೆ ಇರುವ ಒಂದೊ೦ದೇ ಪುಟ ಸಂಖ್ಯೆ ಮೇಲೆ ಕ್ಲಿಕ್ ಮಾಡುತ್ತ ನಿಮ್ಮ ಹೆಸರನ್ನು ಹುಡುಕಬೇಕು. ಆ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ರೇಷನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದರ್ಥ.

ಇದೇ ರೀತಿ ಪಡಿತರ ಚೀಟಿ ತೋರಿಸು ಆಪ್ಷನ್ ಮೇಲೆ ಕ್ಲಿಕ್ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸುವ ಮೂಲಕ ನಿಮ್ಮ ರೇಷನ್ ಕಾರ್ಡ್ ಆಕ್ಟಿವ್ ಇದೆಯೋ ಇಲ್ಲವೋ ಎಂಬುದನ್ನು ಕೂಡ ಚೆಕ್ ಮಾಡಬಹುದು. ಇನ್ನು ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ, ಅದರಲ್ಲಿ ಕಾಣುವ ಹೊಸ ಹಾಲಿ ಪಡಿತರ ಚೀಟಿಯ ಸ್ಥಿತಿ ಮೇಲೆ ಕ್ಲಿಕ್ ಮಾಡಿ, ನಿಮ್ಮ ಜಿಲ್ಲೆಯ ಪಟ್ಟಿ ಕ್ಲಿಕ್ ಮಾಡಿದರೆ, ಹೊಸ ಪಡಿತರ ಚೀಟಿಗೆ ಸಲ್ಲಿಸಲಾದ ಅರ್ಜಿಯ ಸ್ಥಿತಿ, ಪಡಿತರ ಚೀಟಿ ವಿವರ, ಪಡಿತರ ಚೀಟಿಯ ಬದಲಾವಣೆಯ ಕೋರಿಕೆ ಸ್ಥಿತಿ, ಪಡಿತರ ನಿರಾಕರಣೆ ನೋಂದಣಿ ಇತ್ಯಾದಿ ವಿವರಗಳ ಪಟ್ಟಿ ತೆರೆದುಕೊಳ್ಳುತ್ತದೆ. ನಿಮಗೆ ಬೇಕಾದ ವಿವರದ ಮೇಲೆ ಒತ್ತಿ ಮಾಹಿತಿ ಪಡೆದುಕೊಳ್ಳಬಹುದು.

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

PUC ಅಭ್ಯರ್ಥಿಗಳಿಂದ ಗ್ರಾಮ ಪಂಚಾಯತಿ ಹುದ್ದೆಗಳಿಗೆ ಅರ್ಜಿ ಆಹ್ವಾನ | 2,000 ಹುದ್ದೆಗಳು ಶೀಘ್ರದಲ್ಲೇ ನೇಮಕಾತಿ

ಒಂದು ಲಕ್ಷ ಸರಕಾರಿ ಹುದ್ದೆಗಳ ನೇಮಕಾತಿಗೆ ತಯಾರಿ ಶುರು: ಇಲಾಖಾವಾರು ಖಾಲಿ ಹುದ್ದೆಗಳ ಪಟ್ಟಿ ಇಲ್ಲಿದೆ…

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿAgriculture Budget 2023: ರೈತರಿಗೆ ರೂ.5 ಲಕ್ಷ ಬಡ್ಡಿ ಇಲ್ಲದ ಸಾಲ, ಹೊಸ ಸಬ್ಸಿಡಿ ಯೋಜನೆಗಳ ಕಂಪ್ಲೀಟ್ ಡಿಟೇಲ್ಸ್

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!