ಉದ್ಯೋಗ

NIACL Assistant Recruitment 2024 : ಭಾರತೀಯ ವಿಮಾ ಕಂಪನಿಯಲ್ಲಿ 300 ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

ವಿಮಾ ಕಂಪನಿಯಲ್ಲಿ ಖಾಲಿ ಇರುವ 300 ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಮಾಸಿಕ 37,000 ಸಂಬಳವಿರುವ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾರ್ವಜನಿಕ ವಲಯದ ಪ್ರಮುಖ ಇನ್ಸೂರೆನ್ಸ್ ಕಂಪನಿಗಳಲ್ಲಿ ಒಂದಾದ ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್’ನಲ್ಲಿ ಖಾಲಿ ಇರುವ ಹಲವಾರು ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ, ಪ್ರಮುಖ ದಿನಾಂಕಗಳು, ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಲಿಂಕ್, ಸಹಾಯವಾಣಿ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.

ಇದನ್ನೂ ಓದಿ: HDFC Parivartan scholarship 2023-24 : 75,000 ರೂಪಾಯಿ ವರೆಗೆ ಉಚಿತ ವಿದ್ಯಾರ್ಥಿವೇತನ | 1ನೇ ತರಗತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಅವಕಾಶ

NIACL Assistant Recruitment 2024 : ಸಂಕ್ಷಿಪ್ತ ವಿವರ

  • ನೇಮಕಾತಿ ಸಂಸ್ಥೆ : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್
  • ಖಾಲಿ ಹುದ್ದೆಗಳು : 300 ಹುದ್ದೆಗಳು
  • ಹುದ್ದೆಗಳ ಹೆಸರು : ಸಹಾಯಕ (Assistant)
  • ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
  • ಉದ್ಯೋಗ ಸ್ಥಳ : ಭಾರತದಾದ್ಯಂತ

ವಿದ್ಯಾರ್ಹತೆ ಮತ್ತು ಇತರೆ ಅರ್ಹತೆಗಳು

NIACL Assistant Recruitment 2024 ವಿಮಾ ಕಂಪನಿಯಲ್ಲಿ ಖಾಲಿ ಇರುವ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಪದವಿಯ ಜೊತೆ 10ನೇ ತರಗತಿಯಲ್ಲಿ ಅಥವಾ ಪದವಿ ಶಿಕ್ಷಣದಲ್ಲಿ ಇಂಗ್ಲಿಷ್ ಭಾಷೆಯನ್ನು ಒಂದು ವಿಷಯವಾಗಿ ಓದಿರಬೇಕು.

ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆಯಾ ರಾಜ್ಯದ ರಾಜ್ಯ ಭಾಷೆಯನ್ನು ಓದಲು ಬರೆಯಲು ತಿಳಿದಿರುವುದು ಕಡ್ಡಾಯವಾಗಿರುತ್ತದೆ. ಆದ್ದರಿಂದ ಕರ್ನಾಟಕದಲ್ಲಿರುವ ಖಾಲಿ ಹುದ್ದೆಗಳಿಗೆ ಕನ್ನಡ ಬಲ್ಲವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಇದನ್ನೂ ಓದಿ: ಫೈರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 10ನೇ ತರಗತಿ ಪಾಸಾದವರಿಗೆ ಅವಕಾಶ | Ministry of defence recruitment 2024

ಮಾಸಿಕ ಸಂಬಳ ಮತ್ತು ವಯೋಮಿತಿ

NIACL Assistant Recruitment 2024 ಮೊದಲೇ ತಿಳಿಸಿರುವಂತೆ ಸಹಾಯಕ ಹುದ್ದೆಗಳಿಗೆ ಅಂತಿಮವಾಗಿ ನೇಮಕವಾದ ಅಭ್ಯರ್ಥಿಗಳಿಗೆ ಆರಂಭದಲ್ಲಿ 37,000 ರೂಪಾಯಿ ಮಾಸಿಕ ಸಂಬಳ ನೀಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 21 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷದೊಳಗಿರಬೇಕು. ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಲಿಕೆ ನೀಡಲಾಗುವುದು.

ಇದನ್ನೂ ಓದಿ: BPNL Recruitment 2024 : ಪಶುಪಾಲನಾ ನಿಗಮದಲ್ಲಿ SSLC, PUC ಪಾಸಾದವರಿಗೆ 1884 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಈಗಲೇ ಅರ್ಜಿ ಸಲ್ಲಿಸಿ…

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ನಿಗದಿತ ದಿನಾಂಕದ೦ದು ಎರಡು ಹಂತದಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು. ಮೊದಲನೇ ಹಂತದಲ್ಲಿ ಪೂರ್ವಭಾವಿ ಪರೀಕ್ಷೆ ನಡೆಸಿ, ಈ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ. ನಂತರ ಮುಖ್ಯ ಪರೀಕ್ಷೆಯ ಎಲ್ಲಾ ವಿಷಯಗಳಲ್ಲಿ ಅರ್ಹತೆಯನ್ನು ಪಡೆದ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷಾ ಪರೀಕ್ಷೆಯನ್ನು ನಡೆಸಿ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 01-02-2024
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15-02-2024

ಅಧಿಸೂಚನೆ : Download
ಅರ್ಜಿ ಸಲ್ಲಿಸಲು ಲಿಂಕ್ : Click here
ಸಹಾಯವಾಣಿ : 18002091415

NIACL Assistant Recruitment 2024

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಹುದ್ದೆಗಳಿಗೆ 10ನೇ ತರಗತಿ, PUC ಪಾಸಾದವರಿಂದ ಅರ್ಜಿ | Mandya DCC Bank recruitment 2024

WhatsApp Group Join Now
Telegram Group Join Now

Related Posts

error: Content is protected !!