ಕೃಷಿ

NREGA Subsidy for Horticulture Crops: ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ | ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಿ…

WhatsApp Group Join Now
Telegram Group Join Now

ನರೇಗಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಲಭ್ಯವಿದ್ದು; ಹತ್ತಿರದ ಗ್ರಾಮ ಪಂಚಾಯಿತಿ, ತಾಲ್ಲೂಕು ತೋಟಗಾರಿಕಾ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು…

ನರೇಗಾ ಯೋಜನೆ ಅರ್ಥಾತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಸೌಲಭ್ಯ ಲಭ್ಯವಿದ್ದು; ರೈತರು ಈ ಸವಲತ್ತು ಬಳಸಿಕೊಳ್ಳಲು ತೋಟಗಾರಿಕೆ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕೃಷಿ ಯಂತ್ರೋಪಕರಣ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ | ಅರ್ಜಿ ಸಲ್ಲಿಕೆ ಹೇಗೆ?

ಯಾವ್ಯಾವ ಬೆಳೆಗಳಿಗೆ ಸಹಾಯಧನ?

ಅಡಿಕೆ, ಕಾಳುಮೆಣಸು, ಅಂಗಾ೦ಶ ಬಾಳೆ, ಡ್ರಾಗನ್ ಫ್ರೂಟ್, ದಾಳಿಂಬೆ ಮತ್ತಿತರೆ ಬೆಳೆಗಳನ್ನು ಹೊಸದಾಗಿ ನಾಟಿ ಮಾಡಿದ್ದಲ್ಲಿ ಅಂತಹ ಬೆಳೆಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ  ಉದ್ಯೋಗ ಖಾತ್ರಿ ಯೋಜನೆಯಡಿ ಸಹಾಯಧನ ಕಲ್ಪಿಸಲಾಗಿದೆ.

ಹಳೆಯ ತೆಂಗಿನ ಮತ್ತು ಅಡಿಕೆ ತೋಟದಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸು, ಕೋಕೋ, ಬೆಣ್ಣೆ ಹಣ್ಣು, ಜಾಯಿಕಾಯಿ, ಲವಂಗ ಮುಂತಾದ ಬೆಳೆಗಳನ್ನು ಬೆಳೆಯಲಿಚ್ಚಿಸುವ ರೈತರು ಈ ಸೌಲಭ್ಯ ಪಡೆಯಬಹುದು.

ರೈತರಿಗೆ ಶೂನ್ಯ ಬಡ್ಡಿ ಸಾಲ 5 ಲಕ್ಷ | ಮಧ್ಯಮಾವಧಿ ಸಾಲ 20 ಲಕ್ಷ | ಈ ವರ್ಷದಿಂದಲೇ ಜಾರಿ… 

ರೈತರು ಎಲ್ಲಿ ಅರ್ಜಿ ಸಲ್ಲಿಸಬೇಕು?

ಅನುದಾನದ ಲಭ್ಯತೆಯ ಆಧಾರದಲ್ಲಿ ಈ ಸಹಾಯಧನ ಲಭ್ಯವಿದ್ದು; ಅರ್ಹ ರೈತರು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ತಮ್ಮ ತೋಟಗಳ ವ್ಯಾಪ್ತಿಗೆ ಒಳಪಡುವ ಹತ್ತಿರದ ಗ್ರಾಮ ಪಂಚಾಯಿತಿ, ತಾಲ್ಲೂಕು ತೋಟಗಾರಿಕಾ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿ ಸಹಾಯಧನ ಸೌಲಭ್ಯ ಪಡೆಯಬಹುದಾಗಿದೆ.

ಯಾರೆಲ್ಲ ಸಹಾಯಧನ ಪಡೆಯಬಹುದು?

ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು, ಸಣ್ಣ ಹಿಡುವಳಿ ಪ್ರಮಾಣ ಪತ್ರ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತರು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ ಎಂದು ಕಡೂರು ತೋಟಗಾರಿಕೆ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಜಯದೇವ್ ತಿಳಿಸಿದ್ದಾರೆ.

ಉಚಿತ ಬಸ್ ಪ್ರಯಾಣ ಮಾಡಲು ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ….

ಈ ಸೌಲಭ್ಯ ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಲಭ್ಯವಿದ್ದು ಆಯಾಯ ಪ್ರದೇಶದ ರೈತರು ತಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಹೊಸದಾಗಿ ತೋಟಗಾರಿಗೆ ಬೆಳೆ ಮಾಡಲು ಇಚ್ಛಿಸುವವರು ಹಾಗೂ ಈಗಾಗಲೇ ಹಳೆಯ ತೋಟಗಳಲ್ಲಿ ಅಂತರ್ ಬೆಳೆ ಮಾಡಲು ಬಯಸುವವರು ಈ ಸಹಾಯಧನ ಪಡೆಯಬಹುದು.

ಇದನ್ನೂ ಓದಿ:

ಕೈ ಕೊಟ್ಟ ಮುಂಗಾರು | ರೈತರಿಗೆ ಮಳೆ ತರಿಸಲು ಮುಂದಾದ ರಾಜ್ಯ ಸರಕಾರ

ಜೂನ್ 30ರೊಳಗೆ eKYC ಮಾಡದಿದ್ದರೆ ರೈತರಿಗೆ ವರ್ಷಕ್ಕೆ 10,000 ರೂಪಾಯಿ ನಷ್ಟ!

ಹೊಸ APL, BPL ರೇಷನ್ ಕಾರ್ಡ್ ಪಡೆಯಲು ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಿ…

ರಾಜ್ಯದಲ್ಲಿ ಈ ವರ್ಷ ಕೈ ಕೊಡಲಿದೆಯಾ ಮಳೆ? | ಎಚ್ಚರಿಕೆ ಕೊಟ್ಟ ವಿಶ್ವ ಹವಾಮಾನ ಸಂಸ್ಥೆ

ರೈತರ ಖಾತೆಗೆ ಶೀಘ್ರದಲ್ಲೇ 403 ಕೋಟಿ ರೂಪಾಯಿ ಹಾಲಿನ ಪ್ರೋತ್ಸಾಹಧನ ಹಾಲಿನ ಪ್ರೋತ್ಸಾಹಧನ ಜಮೆ | ನಿಮ್ಮ ಪ್ರೋತ್ಸಾಹಧನ ಸ್ಟೇಟಸ್ ಮೊಬೈಲ್‌ನಲ್ಲೇ ಚೆಕ್ ಮಾಡಿ…

ಇದೋ ರೈತರು ಮೊಬೈಲ್‌ನಲ್ಲೇ ಬೆಳೆವಿಮೆ ಚೆಕ್ ಮಾಡುವ ಸರಳ ವಿಧಾನ

ನಿರಂತರ ಉಚಿತ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!