ಸರಕಾರಿ ಯೋಜನೆ

ಪಿಎಂ ಕಿಸಾನ್ ಯೋಜನೆ ಹಣ 6,000 ದಿಂದ 8,000 ರೂಪಾಯಿಗೆ ಹೆಚ್ಚಳ ಸದ್ಯಕ್ಕಿಲ್ಲ: ಕೇಂದ್ರ ಕೃಷಿ ಸಚಿವರ ಸ್ಪಷ್ಟನೆ | No increase in PM Kisan Yojana amount

WhatsApp Group Join Now
Telegram Group Join Now

2023-24ನೇ ಹಣಕಾಸು ವರ್ಷದಿಂದ ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವವನ್ನು 8,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ ಇದಕ್ಕೆ ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರ ಸಚಿವರು ಸ್ಪಷ್ಟನೆ ನೀಡಿದ್ದಾರೆ…

ಕೇಂದ್ರ ಸರಕಾರದ ಮಹತ್ವದ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) ಅಡಿಯಲ್ಲಿ ರೈತರಿಗೆ ಸಿಗುತ್ತಿರುವ ಹಣಕಾಸು ನೆರವು ಶೀಘ್ರದಲ್ಲಿಯೇ ಹೆಚ್ಚಳವಾಗಲಿದೆ ಎಂಬ ವೈರಲ್ ಸುದ್ದಿಗೆ ಕೇಂದ್ರ ಕೃಷಿ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಈ ಕಾರ್ಡ್ ಇದ್ದರೆ ಸಿಗಲಿದೆ ಹೈನುಗಾರಿಕೆ, ಮೀನುಗಾರಿಕೆ, ಕುರಿ-ಮೇಕೆ-ಕೋಳಿ ಸಾಕಣೆಗೆ 3 ಲಕ್ಷ ಸಾಲ | ಈ ಕಾರ್ಡ್ ಪಡೆಯುವುದು ಹೇಗೆ?

ಏನಿದು ಸುದ್ದಿ?

ಸಮಾನ ಮೂರು ಕಂತುಗಳಲ್ಲಿ ರೈತರಿಗೆ 6,000 ರೂಪಾಯಿ ಹಣವನ್ನು ನೀಡುವ ಪಿಎಂ ಕಿಸಾನ್ ಯೋಜನೆಯ ಹಣಕಾಸು ನೆರವು ಹೆಚ್ಚಳವಾಗಬೇಕು ಎಂಬ ಆಗ್ರಹ ಕೇಳಿ ಬಂದಿದ್ದು; 2023-24ನೇ ಹಣಕಾಸು ವರ್ಷದಿಂದ ಈ ಯೋಜನೆಯಡಿ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು 8,000 ರೂಪಾಯಿಗೆ ಹೆಚ್ಚಿಸಲಾಗಿದೆ ಎಂಬ ಬಲವಾದ ಸುದ್ದಿಗಳು ಹರಿದಾಡುತ್ತಿವೆ.

ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಂಗ ಸಂಸ್ಥೆಯಾಗಿರುವ ಭಾರತೀಯ ಕಿಸಾನ್ ಸಂಘದಿಂದಲೇ ಈ ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಹೀಗಾಗಿ ಪಿಎಂ ಕಿಸಾನ್ ಯೋಜನೆ ಹಣಕಾಸು ನೆರವು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಈಗಾಗಲೇ ಸಮಾನ ಮೂರು ಕಂತುಗಳಲ್ಲಿ ರೈತರಿಗೆ 6,000 ರೂಪಾಯಿ ಹಣವನ್ನು ನೀಡಲಾಗುತ್ತಿದೆ. ಈ ಮೊತ್ತಕ್ಕೆ ಹೆಚ್ಚುವರಿ 2,000 ರೂಪಾಯಿ ಸೇರಿಸಿ ಒಟ್ಟು ವಾರ್ಷಿಕ ಮೂರು ಕಂತುಗಳ ಬದಲು ನಾಲ್ಕು ಕಂತುಗಳಲ್ಲಿ 8,000 ರೂಪಾಯಿ ನೀಡಬೇಕು ಎಂಬುವುದು ಭಾರತೀಯ ಕಿಸಾನ್ ಸಂಘ ಬೇಡಿಕೆಯಾಗಿತ್ತು.

ಇದನ್ನೂ ಓದಿ: ಜಮೀನು ಒತ್ತುವರಿಯಾದರೆ ತಗಾದೆ ಇಲ್ಲದೇ ಹದ್ದುಬಸ್ತು ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ತಜ್ಞರ ಸರಳ ಸಲಹೆ

ಸ್ಪಷ್ಟನೆ ನೀಡಿದ ಕೇಂದ್ರ ಸಚಿವರು

ಈಚೆಗೆ ಸಂಸತ್ತಿನ ಅಧಿವೇಶನದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನೆಯೊಂದು ಚರ್ಚೆಗೆ ಬಂದಾಗ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸದ್ಯ ಕೇಂದ್ರದಲ್ಲಿ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಲೋಕಸಭೆಗೆ ತಿಳಿಸಿದ್ದಾರೆ. ಇದರ ಬಗ್ಗೆ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ಅಂದರೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನೀಡುತ್ತಿರುವ ವಾರ್ಷಿಕ 6,000 ರೂಪಾಯಿಗಳನ್ನು 8,000 ರೂಪಾಯಿಗಳಿಗೆ ಹೆಚ್ಚಿಸುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ಸದರಿ ಪಿಎಂ ಕಿಸಾನ್ ಯೋಜನೆ 2019ರ ಫೆಬ್ರವರಿ 24ರಿಂದ ಜಾರಿಯಲ್ಲಿದೆ. ಈಗಾಗಲೇ 12 ಕಂತುಗಳಲ್ಲಿ ದೇಶದ ರೈತರಿಗೆ ಹಣ ಪಾವತಿಯಾಗಿದೆ.

ಇದನ್ನೂ ಓದಿ: ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

13ನೇ ಕಂತಿನ ಹಣ ಫಲಾನುಭವಿ ರೈತರ ಖಾತೆಗೆ ಜಮೆಯಾಗಲು ದಿನಗಣನೆ ಶುರುವಾಗಿದೆ. 13ನೇ ಕಂತಿನ ಸಹಾಯಧನವನ್ನು ಈ ವರ್ಷದ ಹೋಳಿ ಹಬ್ಬದ ಸಂದರ್ಭದಲ್ಲಿ ನೀಡುವ ಸಾಧ್ಯತೆ ಇದೆ. ಆದರೆ ಇತ್ತೀಚೆಗೆ ಈ ಆರ್ಥಿಕ ನೆರವು ಪಡೆಯಲು ಇಕೆವೈಸಿ ಕಡ್ಡಾಯ ಮಾಡಿದ್ದು; ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಮಾಡದ ರೈತರಿಗೆ ಪಿಎಂ-ಕಿಸಾನ್ ಹಣವನ್ನು ನಿಲ್ಲಿಸಲಾಗಿದೆ. ಈಗಲೂ eKYC ಮಾಡದಿದ್ದರೆ 13ನೇ ಕಂತಿನ ಹಣ ಖಂಡಿತ ನಿಮ್ಮ ಖಾತೆಗೆ ಬರುವುದಿಲ್ಲ. ಹೀಗಾಗಿ ಕೂಡಲೇ ಇಕೆವೈಸಿ ಮಾಡುವ ಮೂಲಕ ಫಲಾನುಭವಿ ರೈತರು ಪಿಎಂ-ಕಿಸಾನ್ ಯೋಜನೆಯ 2,000 ರೂಪಾಯಿ ನೆರವು ಪಡೆಯಲು ಕೃಷಿ ಇಲಾಖೆ ಮತ್ತೊಮ್ಮೆ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ:

ಕುರಿ ಮೇಕೆ ಸಾಕಣೆ ಸಹಾಯಧನಕ್ಕೆ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ | ಫೆಬ್ರವರಿ 24ರೊಳಗೆ ಅರ್ಜಿ ಸಲ್ಲಿಸಿ

ಕೋಳಿ ಸಾಕಣೆ ರೈತರಿಗೆ ಪ್ರತಿ ಕೋಳಿಗೆ 5 ರೂಪಾಯಿ ಪ್ರೋತ್ಸಾಹಧನ | ರಾಜ್ಯ ಬಜೆಟ್‌ನಲ್ಲಿ ಘೋಷಣೆ?

ಪಿಎಂ ಕಿಸಾನ್ 13ನೇ ಕಂತಿನ ಹಣ ಪಡೆಯಬಯಸುವ ರೈತರೇ ನಿಮ್ಮ eKYC ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಕೃಷಿ, ಹೈನುಗಾರಿಕೆ, ಕುರಿ-ಮೇಕೆ ಸಾಕಣೆಗೆ ನರೇಗಾ ಯೋಜನೆಯಲ್ಲಿ 2.5 ಲಕ್ಷ ರೂಪಾಯಿ ಸಹಾಯಧನ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

ಕಾರ್ಮಿಕ ಕಾರ್ಡ್ ರದ್ದು ಅಭಿಯಾನ | ನಿಮ್ಮ ಕಾರ್ಡ್ ರದ್ದಾದರೆ ಏನು ಮಾಡಬೇಕು?

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now

Related Posts

error: Content is protected !!