ಸರಕಾರಿ ಯೋಜನೆ

ಈ ಯೋಜನೆಗೆ ಸೇರಿದರೆ ಪ್ರತಿ ತಿಂಗಳು ಸಿಗಲಿದೆ ₹3,000 ಪಿಂಚಣಿ | shram yogi mandhan yojana-PM SYM

WhatsApp Group Join Now
Telegram Group Join Now

ಕೇಂದ್ರ ಸರಕಾರದ ಈ ಯೋಜನೆಗೆ ಸೇರ್ಪಡೆಯಾದರೆ ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು ಸೇರಿದಂತೆ ಎಲ್ಲ ರೀತಿಯ ಕಾರ್ಮಿಕರು ಪ್ರತಿ ತಿಂಗಳೂ 3,000 ರೂಪಾಯಿ ಪಿಂಚಣಿ ಪಡೆಯಬಹುದು. ಏನಿದು ಪಿಂಚಣಿ ಯೋಜನೆ? ಈ ಯೋಜನೆಗೆ ಯಾರೆಲ್ಲ ಅರ್ಹರು? ನೋಂದಣಿ ಮಾಡಿಕೊಳ್ಳುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇತ್ಯಾದಿ ವಿವರ ಇಲ್ಲಿದೆ…

ಇದು ದೇಶದ ವಿವಿಧ ವಲಯದ ಅಸಂಘಟಿತ ಕಾರ್ಮಿಕರಿಗಾಗಿಯೇ ಇರುವ ಮಹತ್ವದ ಯೋಜನೆ. 60 ವರ್ಷದ ನಂತರ ಪ್ರತಿ ತಿಂಗಳು 3,000/- ರೂಪಾಯಿ ಪಿಂಚಣಿ ಪಡೆಯುವ ಮೂಲಕ ವೃದ್ಧಾಪ್ಯದಲ್ಲಿ ಯಾರ ಹಂಗೂ ಇಲ್ಲದೇ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಡಲು ನೆರವಾಗುವ ವಿಶಿಷ್ಟ ಯೋಜನೆ ಇದು.

ಯಾರು ಅಸಂಘಟಿತ ಕಾರ್ಮಿಕರು?

ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿಯ ಇತರೆ ಉದ್ಯೋಗಗಳ ಕೆಲಸಗಾರರನ್ನು ಅಸಂಘಟಿತ ಕಾರ್ಮಿಕರೆನ್ನಲಾಗುತ್ತದೆ.

ಇದನ್ನೂ ಓದಿ: ಹೈನುಗಾರಿಕೆ, ಮೀನುಗಾರಿಕೆ ಕುರಿ-ಮೇಕೆ-ಕೋಳಿ ಸಾಕಣೆಗೆ ಗರಿಷ್ಠ ₹3 ಲಕ್ಷ ಸಾಲ

ಈ ಕಾರ್ಮಿಕರಿಗೆ ಅವರ ಜೀವನದ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯೇ ಪ್ರಧಾನಮಂತ್ರಿ ಶ್ರಮ್‌ಯೋಗಿ ಮಾನ್-ಧನ್ (ಪಿಎಂ-ಎಸ್‌ವೈಎಂ) ಯೋಜನೆ.

ಯೋಜನೆಯ ಫಲಾನುಭವಿಗಳು ಯಾರು?

 • ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷದೊಳಗಿರಬೇಕು.
 • ಅವರ ಮಾಸಿಕ ಆದಾಯ ರೂ. 15,000/- ಅಥವಾ ಅದಕ್ಕಿಂತ ಕಡಿಮೆ ಇರಬೇಕು.
 • ಅವರು ಆದಾಯ ತೆರಿಗೆ/ಇ.ಎಸ್.ಐ./ಪಿ.ಎಫ್/ಎನ್.ಪಿ.ಎಸ್. ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು.
 • ಬ್ಯಾಂಕ್ ಉಳಿತಾಯ ಖಾತೆ ಮತ್ತು ಆzರ್ ಸಂಖ್ಯೆ ಹೊಂದಿರಬೇಕು.

ಇದನ್ನೂ ಓದಿ: ಕೋಳಿ ಸಾಕಣೆಗೆ ₹25 ಲಕ್ಷ, ಕುರಿ-ಮೇಕೆ ತಳಿ ಸಂವರ್ಧನೆಗೆ ₹50 ಲಕ್ಷ ಆರ್ಥಿಕ ನೆರವು

ಯೋಜನೆಯ ಸೌಲಭ್ಯಗಳು

 • ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ.
 • ಫಲಾನುಭವಿಯ ವಯಸ್ಸು ೬೦ ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3,000/- ರೂಪಾಯಿಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ.
 • ಚಂದಾದಾರರು 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದಲ್ಲಿ, ಅವರು ಪಾವತಿಸಿರುವ ವಂತಿಕೆಂiiನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ.
 • 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದಲ್ಲಿ ಅವರು ಪಾವಿತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚೋ ಅದನ್ನು ಪಾವತಿಸಲಾಗುವುದು.
 • ಫಲಾನುಭವಿಯ ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು, ಅವರು 60 ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ/ಅವಳ ಸಂಗಾತಿಯುತದ ನಂತರ ಈ ಯೋಜನೆಗೆ ಸೇರಬಹುದಾಗಿದ್ದು ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ ಅಥವಾ ಅವರ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರು.
 • ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತಪಟ್ಟಲ್ಲಿ, ಅವರ ಪತ್ನಿ / ಪತಿ ಮಾತ್ರ ಪಿಂಚಣಿಯ ಶೇ. ೫೦ ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರು.
 • ಯೋಜನೆಯ ವಿದ್ಯುನ್ಮಾನ ಆಧಾರಿತವಾಗಿದ್ದು ಎಸ್.ಎಂ.ಎಸ್. ಮೂಲಕ ಎಲ್ಲಾ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ ಕಾಲ ಕಾಲಕ್ಕೆ ತಿಳಿಸಲಾಗುವುದು.

ಇದನ್ನೂ ಓದಿ: ಹಿಸ್ಸಾ ನಕಾಶೆ, ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಯನ್ನು ಕೇವಲ ಏಳೇ ದಿನಗಳಲ್ಲಿ ಪಡೆಯಿರಿ

ನೋಂದಣಿ ವಿಧಾನ

1. ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್ (ಸಿಎಸ್‌ಸಿ)ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬಹುದು. ಸಿಎಸ್‌ಸಿಗಳ ವಿವರಗಳನ್ನು ಹತ್ತಿರದ ಎಲ್‌ಐಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇಎಸ್‌ಐ ಕಾರ್ಪೋರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಛೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸಗಳು ಹಾಗೂ ಇಲಾಖೆಯ ವೆಬ್ ವಿಳಾಸ http://locator.csccloud.inಗಳಲ್ಲಿ ಪಡೆಯಬಹುದಾಗಿರುತ್ತದೆ.

ಇದನ್ನೂ ಓದಿ:  10 ದಿನಗಳ ಉಚಿತ ಜೇನು ಕೃಷಿ ತರಬೇತಿಗೆ ಅರ್ಜಿ ಆಹ್ವಾನ

2. ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐಎಫ್‌ಎಸ್‌ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್ ಪುಸ್ತಕ, ಚೆಕ್ ಪುಸ್ತಕ, ಬ್ಯಾಂಕ್ ಸ್ಟೇಟ್‌ಮೆಂಟ್ ಅನ್ನು), ತಮ್ಮ ನಾಮನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್‌ಸೆಟ್‌ನೊಂದಿಗೆ ಕಾಮನ್ ಸರ್ವೀಸ್ ಸೆಂಟರ್‌ಗಳಿಗೆ ಹೋಗಬೇಕು.

3. ಕೆಳಗಿನ ಕೋಷ್ಟಕದಲ್ಲಿರುವಂತೆ ವಯಸ್ಸಿಗೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸಬೇಕು. ಯಶಸ್ವಿ ಹಣ ಪಾವತಿ ನಂತರ ಆನ್‌ಲೈನ್ ಶ್ರಮಯೋಗಿ ಪೆನ್ಷನ್ ಸಂಖ್ಯೆಯನ್ನು ನೀಡಲಾಗುತ್ತದೆ. ಸ್ವಿಕೃತಿ ಮತ್ತು ಆಟೋ ಡೆಬಿಟ್ ಮ್ಯಾಂಡೇಟ್ ಅನ್ನು ಫಲಾನುಭವಿಯ ಸಹಿಗೆ ನೀಡಲಾಗುತ್ತದೆ.

ಇದನ್ನೂ ಓದಿ: ಕೃಷಿ ಯಂತ್ರೋಪಕರಣಗಳನ್ನು ಉಚಿತವಾಗಿ ರೈತರಿಗೆ ರೆಡಿ ಮಾಡಿಕೊಡುವ ರೈತ ವಿಜ್ಞಾನಿ

4. ಸಿ.ಎಸ್.ಸಿ.ಗಳಲ್ಲಿ ಸಹಿ ಮಾಡಿರುವ ಫಲಾನುಭವಿಯ ಡೆಬಿಟ್ ಮ್ಯಾಂಡೇಟ್ ಅನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲಾಗುತ್ತದೆ. ಸಿಎಸ್‌ಸಿಗಳಲ್ಲಿ ಶ್ರಮಯೋಗಿ ಕಾರ್ಡ್ ಅನ್ನು ಪ್ರಿಂಟ್ ಮಾಡಿ ಫಲಾನುಭವಿಗೆ ನೀಡಲಾಗುತ್ತದೆ.

4. ಬ್ಯಾಂಕಿನಿಂದ ದೃಢೀಕರಣ ಬಂದ ನಂತರ ಡೆಬಿಟ್ ಮ್ಯಾಂಡೇಟ್ ಅನ್ನು ಆಕ್ಟಿವೇಟ್ ಮಾಡಲಾಗುತ್ತದೆ ಮತ್ತು ತದ ನಂತರದ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಡಿತ ಮಾಡಿಕೊಳ್ಳಲಾಗುತ್ತದೆ. ಪ್ರತಿಯೊಂದು ವ್ಯವಹಾರವನ್ನು ಎಸ್‌ಎಂಎಸ್ ಸಂದೇಶ ಕಳಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಛೇರಿಗಳು, ಎಲ್.ಐ.ಸಿಯ ಶಾಖಾ ಕಛೇರಿಗಳು, ಇಪಿಎಫ್‌ಒ ಮತ್ತು ಇಎಸ್‌ಐಸಿ ಕಛೇರಿಗಳನ್ನು ಸಂಪರ್ಕಿಸಬಹುದು.

ಟೋಲ್ ಫ್ರೀ ಕಾಲ್ ಸೆಂಟರ್ ಸಂಖ್ಯೆ : 1800-267-6888

ಸಮೀಪದ ಸಿ.ಎಸ್.ಸಿ. ಸೆಂಟರ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಹೆಚ್ಚಿನ ಮಹಿತಿಗಾಗೆ ಪ್ರಧಾನ ಮಂತ್ರಿ ಮಾನ್‌ಧನ್ ಯೋಜನೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ 

====================================

ಇವುಗಳನ್ನೂ ಓದಿ:

ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಈ ವಿದ್ಯಾರ್ಥಿಗಳಿಗೆ ಸಿಗಲಿದೆ ವರ್ಷಕ್ಕೆ ₹50,000 ಹಣಕಾಸಿನ ನೆರವು

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ 787 ಕಾನ್ಸ್‌ಟೇಬಲ್ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ 50 ಜನ ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

20 ಕುರಿ, 1 ಮೇಕೆ ಗಿಫ್ಟ್: ಮುಖ್ಯಮಂತ್ರಿ ಘೋಷಣೆ | ಈ ಗಿಫ್ಟ್ ಪಡೆಯಲು ಯಾರೆಲ್ಲ ಅರ್ಹರು?

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!