ವಿದ್ಯಾರ್ಥಿವೇತನ

ಕಾಲೇಜು ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : 20,000-35,000 ನೇರ ಖಾತೆಗೆ ಫೆಬ್ರವರಿ 28ರೊಳಗೆ ಅರ್ಜಿ ಸಲ್ಲಿಸಿ | Prize Money 2022

WhatsApp Group Join Now
Telegram Group Join Now

ಇದು ಸಮಾಜ ಕಲ್ಯಾಣ ಇಲಾಖೆ ವಿಶೇಷ ಪ್ರೋತ್ಸಾಹಧನ ಯೋಜನೆ. ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ತಾವು ಪಡೆಯುವ ಕೋರ್ಸ್‌ಗಳಿಗೆ ಅನುಸಾರ 20,000 ರೂಪಾಯಿಂದ 35,000 ರೂಪಾಯಿ ತನಕ ಪ್ರೈಜ್‌ಮನಿ ಪಡೆಯಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಈ ಲೇಖನದಲ್ಲಿರುವ ಲಿಂಕ್ ಬಳಸಿ ಆನ್‌ಲೈನ್ ಅರ್ಜಿ ಸಲ್ಲಿಸುವ ಮೂಲಕ ಈ ಸೌಲಭ್ಯವನ್ನು ಪಡೆಯಬಹುದು…

2022-23ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಪಿಯುಸಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ/Social Welfare Department ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಯೋಜನೆಗೆ ಯಾವೆಲ್ಲ ರೈತರು ಅರ್ಹರು? | ಬೇಕಾಗುವ ದಾಖಲೆಗಳೇನು? ಫಲಾನುಭವಿಗಳ ಆಯ್ಕೆ ಹೇಗೆ? | ಜಾತಿವಾರು ರೈತರ ಲೀಸ್ಟ್ ಸಹಿತ ಸಂಪೂರ್ಣ ಮಾಹಿತಿ ಇಲ್ಲಿದೆ

ಅರ್ಜಿ ಸಲ್ಲಿಕೆ ದಿನಾಂಕ

ಅರ್ಜಿ ಸಲ್ಲಿಸಲು ಫೆಬ್ರವರಿ 28,2023 ಕೊನೆಯ ದಿನವಾಗಿದೆ. ಈ ದಿನಾಂಕದೊಳೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಇಲಾಖೆ ಸ್ಪಷ್ಟವಾಗಿ ತಿಳಿಸಿದೆ. ಹೀಗಾಗಿ ಈ ಕೂಡಲೇ ಆನ್‌ಲೈನ್ ಅರ್ಜಿ ಸಲ್ಲಿಸಿ.

ಯಾವ ಕೋರ್ಸ್‌ಗೆ ಎಷ್ಟು ಪ್ರೋತ್ಸಾಹಧನ?

  1.  ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ ವಿದ್ಯಾರ್ಥಿಗಳಿಗೆ – 20,000 ರೂಪಾಯಿ
  2.  ಪದವಿ ವಿದ್ಯಾರ್ಥಿಗಳಿಗೆ – 25,000 ರೂಪಾಯಿ
  3.  ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ – 30,000 ರೂಪಾಯಿ
  4.  ಅಗ್ರಿಕಲ್ಚರ್, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ –  35,000 ರೂಪಾಯಿ

ಕೋರ್ಸ್‌ಗೆ ಶೇಕಡವಾರು ಅಂಕಗಳನ್ನು ನಿರ್ಧರಿಸಲು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸಂಬಂಧಪಟ್ಟ ಉಪ ಕುಲಸಚಿವರು / ರಿಜಿಸ್ಟ್ರಾರ್ / ಪ್ರಾಂಶುಪಾಲರಿಂದ ಸ್ಪಷ್ಟೀಕರಣ ತೆಗೆದುಕೊಳ್ಳಬೇಕು ಮತ್ತು ಅದರಂತೆಯೇ ಅರ್ಜಿಗಳನ್ನು ಮಂಜೂರು ಮಾಡುವುದು ಅಥವಾ ತಿರಸ್ಕರಿಸಲಾಗುವುದು.

ಇದನ್ನೂ ಓದಿ: ಕಾರ್ಮಿಕ ಕಾರ್ಡ್ ರದ್ದು ಅಭಿಯಾನ | ನಿಮ್ಮ ಕಾರ್ಡ್ ರದ್ದಾದರೆ ಏನು ಮಾಡಬೇಕು?

ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಥಿಗಳು ಇಲ್ಲಿ ಕ್ಲಿಕ್ ಮಾಡುವ ಮೂಲಕ ಆನ್‌ಲೈನ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆ/Social Welfare Department ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದರೆ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪುಟ ತೆರೆಯುತ್ತದೆ.

ಆ ಪುಟದಲ್ಲಿ ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ. ಮತ್ತೊಂದು ಪುಟ ತೆರೆದುಕೊಳ್ಳುತ್ತದೆ. ಆ ಪುಟದಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, Submit ನೀಡಿ. ನಂತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಫೋಟೋಗಳನ್ನು ಅಪ್ ಲೋಡ್ ಮಾಡಿ. ಅರ್ಜಿ ಸಲ್ಲಿಸಿದ ಮೇಲೆ ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.

ಇದನ್ನೂ ಓದಿ: ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಆಯುಕ್ತಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಲಿಂಕ್‌ಗಳು

ಉದ್ಯೋಗ ಮಾಹಿತಿClick Here
ಸರಕಾರಿ ಯೋಜನೆClick Here
ಕೃಷಿ ಮಾಹಿತಿClick Here
ವಾಟ್ಸಾಪ್ ಗ್ರುಪ್Click Here
ಟೆಲಿಗ್ರಾಂ ಗ್ರುಪ್Click Here

ಇದನ್ನೂ ಓದಿ: 

3,036 ಪೋಸ್ಟ್‌ಮಾಸ್ಟರ್ ಹುದ್ದೆಗಳಿಗೆ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಮೊಬೈಲ್‌ನಲ್ಲೇ ಚೆಕ್ ಮಾಡಿ

ಕೃಷಿ, ಹೈನುಗಾರಿಕೆ, ಕುರಿ-ಮೇಕೆ ಸಾಕಣೆಗೆ ನರೇಗಾ ಯೋಜನೆಯಲ್ಲಿ 2.5 ಲಕ್ಷ ರೂಪಾಯಿ ಸಹಾಯಧನ

ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ನಿಮಗೆ ಹಣ ಸಿಗುತ್ತೋ ಇಲ್ವೋ? ಮೊಬೈಲ್‌ನಲ್ಲಿ ಚೆಕ್ ಮಾಡಿ

ತೊಗರಿ ನೆಟೆರೋಗ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಪರಿಹಾರ

ಈ ರೈತರಿಗೆ 208 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ಜಮೆ | ನಿಮ್ಮ ಬೆಳೆ ಹಾನಿ ಪರಿಹಾರವನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ… 

ರೈತರ ಬೆಳೆ ನಷ್ಟಕ್ಕೆ 1 ಲಕ್ಷ ರೂಪಾಯಿ ಪರಿಹಾರ | ಯಾವ್ಯಾವ ಬೆಳೆಗೆ ಸಿಗಲಿದೆ ಪರಿಹಾರ?

ರೈತರೇ ಬೆಳೆವಿಮೆ, ಬೆಳೆಹಾನಿ, ಪಿಎಂ ಕಿಸಾನ್ ಹಣದ ಸಂಪೂರ್ಣ ಮಾಹಿತಿಯನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

ರೈತರೇ ನಿಮ್ಮ ಬೆಳೆಸಾಲ ಮನ್ನಾ ಮಾಹಿತಿ ಮೊಬೈಲ್‌ನಲ್ಲೇ ನೋಡಿ

ಜಿರೇನಿಯಂ ಕೃಷಿ: ರೈತರಿಗೆ ಭಾರೀ ಆದಾಯ ತರುವ ವನಸ್ಪತಿ ಬೆಳೆ | ಒಂದು ಟನ್ ಎಲೆಗೆ 12,000 ರೂಪಾಯಿ

WhatsApp Group Join Now
Telegram Group Join Now

Related Posts

error: Content is protected !!