ಉದ್ಯೋಗ

ಪಿಯುಸಿ, ಪದವಿ ಶಿಕ್ಷಣ ಪಡೆದವರಿಗೆ 596 ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment 2022

WhatsApp Group Join Now
Telegram Group Join Now

ರೈಲ್ವೆ ಇಲಾಖೆಯು ಒಟ್ಟು 596 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ದ್ವೀತಿಯ ಪಿಯುಸಿ ಮತ್ತು ಪದವಿ ಪಡೆದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ವಯೋಮಿತಿ, ಅರ್ಜಿ ಸಲ್ಲಿಕೆ ಲಿಂಕ್ ಇತ್ಯಾದಿ ಮಾಹಿತಿ ಇಲ್ಲಿದೆ…

ದ್ವೀತಿಯ ಪಿಯುಸಿ ಮತ್ತು ಪದವಿ ಪಡೆದ ಅಭ್ಯರ್ಥಿಗಳಿಗೆ ರೈಲ್ವೆ ಸಚಿವಾಲಯ ಉದ್ಯೋಗವಕಾಶ ಕಲ್ಪಿಸಿದೆ. ಇಲಾಖೆಯ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ (General Departmental Competitive Examination-GDCE) ಮೂಲಕ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ರೈಲ್ವೆ ಇಲಾಖೆಯ ವಿವಿಧ ವಿಭಾಗದ ಒಟ್ಟು 596 ಹುದ್ದೆಗಳ ಭರ್ತಿಗೆ ಇಲಾಖೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ವಿಶೇಷವೆಂದರೆ ಈ ಹುದ್ದೆಗಳಿಗೆ ರೈಲ್ವೆ ಇಲಾಖೆಯಲ್ಲಿ ಸೇವಾ ನಿರತರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ: ಡಾರ್ಪರ್ ಕುರಿ ಸಾಕಣೆ: ಲೋಕಲ್ ಕುರಿಗೆ ಕ್ರಾಸ್ ಮಾಡಿ ಗಳಿಸಿ ಕೋಟ್ಯಾಂತರ ಆದಾಯ

ಸ್ಟೆನೋಗ್ರಾಫರ್ (ಇಂಗ್ಲಿಷ್), ಸೀನಿಯರ್ ಕಮ್ಯುನಿಕೇಷನ್ ಕ್ಲರ್ಕ್ ಕಂ ಟಿಕೆಟ್ ಕ್ಲರ್ಕ್, ಗೂಡ್ಸ್ ಗಾರ್ಡ್, ಸ್ಟೇಷನ್ ಮಾಸ್ಟರ್, ಜೂನಿಯರ್ ಅಕೌಂಟ್ ಅಸಿಸ್ಟಂಟ್, ಜೂನಿಯರ್ ಕಮ್ಯುನಿಕೇಷನ್ ಕ್ಲರ್ಕ್ ಕಂ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಹುದ್ದೆಗಳ ನೇಮಕಕ್ಕೆ ದ್ವೀತಿಯ ಪಿಯುಸಿ ಮತ್ತು ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯ ಈ ಹುದ್ದೆಗಳಿಗೆ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ನವೆಂಬರ್ 28ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕಳೆದ ಅಕ್ಟೋಬರ್ 28, 2022ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ನವೆಂಬರ್ 28, 2022ರ ಸಂಜೆ 06 ಗಂಟೆವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದನ್ನೂ ಓದಿ: SSLC-PUC ಆದವರಿಗೆ ಅಂಚೆ ಇಲಾಖೆಯಲ್ಲಿ ₹35,000 ಸಂಬಳದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ ಮತ್ತು ಅರ್ಹತೆ

ಸ್ಟೆನೋಗ್ರಾಫರ್ (ಇಂಗ್ಲಿಷ್) 8 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಈ ಹುದ್ದೆಗೆ ಪಿಯುಸಿ ಜತೆಗೆ, ಸ್ಟೆನೋಗ್ರಾಫಿ ತರಬೇತಿ ಪಡೆದಿರಬೇಕು.

ಸೀನಿಯರ್ ಕಮ್ಯುನಿಕೇಷನ್ ಕ್ಲರ್ಕ್ ಕಂ ಟಿಕೆಟ್ ಕ್ಲರ್ಕ್ 154 ಹುದ್ದೆಗಳಿದ್ದು; ಈ ಹುದ್ದೆಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಗೂಡ್ಸ್ ಗಾರ್ಡ್ 46 ಹುದ್ದೆಗಳಿದ್ದು; ಈ ಹುದ್ದೆಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಸ್ಟೇಷನ್ ಮಾಸ್ಟರ್ 75 ಹುದ್ದೆಗಳಿದ್ದು; ಈ ಹುದ್ದೆಗಳಿಗೂ ಕೂಡ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿದ್ದಾರೆ.

ಜೂನಿಯರ್ ಅಕೌಂಟ್ ಅಸಿಸ್ಟಂಟ್ 150 ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗಳಿಗೂ ಕೂಡ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿದ್ದಾರೆ.

ಜೂನಿಯರ್ ಕಂಮ್ಯುನಿಕೇಷನ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ 126 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಈ ಹುದ್ದೆಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು.

ಅಕೌಂಟ್ಸ್ ಕ್ಲರ್ಕ್ 37 ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿದ್ದರೆ ಸಾಕು.

ಇದನ್ನೂ ಓದಿ: ರೈತರೇ ಬೆಳೆ ವಿಮೆ ಗ್ಯಾರಂಟಿ ಪರಿಹಾರಕ್ಕೆ ಈ ಕ್ರಮ ಅನುಸರಿಸಿ

ವಯೋಮಿತಿ

  1. ಸಾಮಾನ್ಯ ಅಭ್ಯರ್ಥಿಗಳಿಗೆ 42 ವರ್ಷ
  2. ಒಬಿಸಿ ಅಭ್ಯರ್ಥಿಗಳಿಗೆ 45 ವರ್ಷ
  3. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 47 ವರ್ಷ

ನೇಮಕ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಕೇಂದ್ರ ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಈ ಎಲ್ಲ ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಉದ್ಯೋಗ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ…

ಇದನ್ನೂ ಓದಿ: ಸಣ್ಣ ವ್ಯಾಪಾರ ಹಾಗೂ ವಾಣಿಜ್ಯ ವಾಹನ ಖರೀದಿಗೆ ₹10 ಲಕ್ಷ ಸಾಲ ಸೌಲಭ್ಯ

WhatsApp Group Join Now
Telegram Group Join Now

Related Posts

error: Content is protected !!