ಸುದ್ದಿಗಳು

ಡಿಸೆಂಬರ್ 8ರಿಂದ 10ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ | Rain forecast

WhatsApp Group Join Now
Telegram Group Join Now

ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಡಿಸೆಂಬರ್ 8ರಿಂದ 10ರ ವರೆಗೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮುಂದಿನ ಐದು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 8ರಿಂದ 10ರ ವರೆಗೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಲಿದೆ. ಡಿಸೆಂಬರ್ 6ರಂದು ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಕೋಲಾರ ಹಾಗೂ ರಾಮನಗರದಲ್ಲಿ ಮಳೆಯಾಗಲಿದೆ.

ಈ ಮಳೆಗೆ ಕಾರಣ

ದಕ್ಷಿಣ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಕಳೆದ ಡಿಸೆಂಬರ್ ೪ರ ಭಾನುವಾರ 5.8 ಕಿ.ಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ. ಇದರ ಪರಿಣಾಮ ಡಿಸೆಂಬರ್ 5ರಂದು ಈಶಾನ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಹವಾಮಾನ ವೈಪರೀತ್ಯವು ಪಶ್ಚಿಮ ವಾಯುವ್ಯ ದಿಕ್ಕಿನ ಮೂಲಕ ಸಾಗಿ ಡಿಸೆಂಬರ್ 7ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುತ್ತದೆ. ಮುಂದಿನ ಐದು ದಿನಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದೆಂದು ರಾಜ್ಯ ಹವಾಮಾನ ಕೇಂದ್ರದ ವರದಿ ತಿಳಿಸಿದೆ.

ಎಲ್ಲೆಲ್ಲಿ ಮಳೆಯಾಗಲಿದೆ?

ಮುಂದಿನ ಐದು ದಿನಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲೂ ಮಳೆಯಬ್ಬರ ಕಂಡು ಬರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

========================

ಇವುಗಳನ್ನೂ ಓದಿ:

ಕೇವಲ ₹6,000ಕ್ಕೆ ₹60,000 ಬೆಲೆಯ ಹಸು, ಎಮ್ಮೆ, ಕುರಿ-ಮೇಕೆ ಖರೀದಿಗೆ ಅರ್ಜಿ ಆಹ್ವಾನ

ದಿನಕ್ಕೆ 300 ರೂಪಾಯಿ ಭತ್ಯೆ ಸಹಿತ ಉಚಿತ ಮೀನುಗಾರಿಕೆ ತರಬೇತಿ

ಮಣ್ಣಿನ ಆರೋಗ್ಯ ತಪಾಸಣೆ: ರೈತರಿಗೆ ಸಿಗಲಿದೆ ಅಧಿಕ ಆದಾಯ

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ರೈತರಿಗೆ ₹24,000 ಕೋಟಿ ಶೂನ್ಯ ಬಡ್ಡಿ ಸಾಲ: ಮುಖ್ಯಮಂತ್ರಿ ಘೋಷಣೆ 

ಇನ್ಮುಂದೆ ಸರಕಾರಿ ನೌಕರರಿಗೆ ನಿವೃತ್ತಿಯ ವರೆಗೂ ಸಿಗಲಿದೆ ವಿಮಾ ಸೌಲಭ್ಯ

ಕೆಎಂಎಫ್‌ನಿಂದ ಬಂಪರ್ ಬೆಲೆಗೆ ಮೆಕ್ಕೆಜೋಳ ಖರೀದಿ: ರೈತರೇ ಈ ಅವಕಾಶ ಬಳಸಿಕೊಳ್ಳಿ

ನರೇಗಾ ಯೋಜನೆಯಲ್ಲಿ ರೈತರಿಗೆ ₹2.5 ಲಕ್ಷ ಸಹಾಯಧನ 

ಶೀಘ್ರದಲ್ಲಿಯೇ ಎಲ್ಲ ರೈತರಿಗೂ ಬೆಳೆವಿಮೆ ಪರಿಹಾರ: ನಿಮಗೆ ಎಷ್ಟು ಬೆಳೆವಿಮೆ ಬರಲಿದೆ ಚೆಕ್ ಮಾಡಿಕೊಳ್ಳಿ 

20 ಕುರಿ, 1 ಮೇಕೆ ಗಿಫ್ಟ್: ಮುಖ್ಯಮಂತ್ರಿ ಘೋಷಣೆ | ಈ ಗಿಫ್ಟ್ ಪಡೆಯಲು ಯಾರೆಲ್ಲ ಅರ್ಹರು?

ಬೆಳೆಹಾನಿ ಪರಿಹಾರಕ್ಕೆ ರೈತರಿಗೆ ಆಧಾರವಾದ ಬೆಳೆ ಸಮೀಕ್ಷೆ 

ಗ್ರಾಮ ಪಂಚಾಯತಿಯಲ್ಲಿ ನಿಮ್ಮ ಆಸ್ತಿ ಇ-ಸ್ವತ್ತು ನೋಂದಣಿಗೆ ಈ ಸರಳ ಕ್ರಮ ಅನುಸರಿಸಿ 

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಕೂಡಲೇ ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!