ಉದ್ಯೋಗ

PUC ಅಭ್ಯರ್ಥಿಗಳಿಂದ ರಸಗೊಬ್ಬರ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ | RCFL Recruitment 2023

WhatsApp Group Join Now
Telegram Group Join Now

ರಾಷ್ಟ್ರೀಯ ಕೆಮಿಕಲ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್ (RCFL) PUC ಪಾಸ್ ಆದ ಅಭ್ಯರ್ಥಿಗಳಿಂದ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮತ್ತು ನೇಮಕಾತಿ ಅಧಿಸೂಚನೆ ಕುರಿತ ಮಾಹಿತಿ ಇಲ್ಲಿದೆ…

ರಾಷ್ಟ್ರೀಯ ಕೆಮಿಕಲ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್ (RCFL) ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಕ್ಸ್-ರೇ ತಂತ್ರಜ್ಞ, ತಂತ್ರಜ್ಞ (ಮೆಕ್ಯಾನಿಕಲ್), ಟ್ರೈನಿ ಮತ್ತು ಆಪರೇಟರ್ (ರಾಸಾಯನಿಕ) ಸೇರಿದಂತೆ ಒಟ್ಟು 248 ಖಾಲಿ ಹುದ್ದೆಗಳಿದ್ದು ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಇದನ್ನೂ ಓದಿ: PUC ಅಭ್ಯರ್ಥಿಗಳಿಂದ ಕೇಂದ್ರ ರೈಲ್ವೆಯಲ್ಲಿ 2,422 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದಾದ್ಯಂತ ಇರುವ ಅಭ್ಯರ್ಥಿಗಳು ರಾಷ್ಟ್ರೀಯ ಕೆಮಿಕಲ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್ ನೇಮಕಾತಿಗೆ ಅರ್ಹರಾಗಿರುತ್ತಾರೆ. ಈ ಉದ್ಯೋಗಕ್ಕಾಗಿ ಇತರ ರಾಜ್ಯ ಕೋಟಾ ಲಭ್ಯವಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತದ ವಿವಿಧ ರಾಜ್ಯಗಳಿಗೆ ಪೋಸ್ಟ್ ಮಾಡಲಾಗುತ್ತದೆ.

ಹುದ್ದೆಗಳ ವಿವರ: ಎಕ್ಸ್-ರೇ ತಂತ್ರಜ್ಞ, ತಂತ್ರಜ್ಞ (ಮೆಕ್ಯಾನಿಕಲ್), ಟ್ರೈನಿ ಮತ್ತು ಆಪರೇಟರ್ (ರಾಸಾಯನಿಕ) ಸೇರಿದಂತೆ ಒಟ್ಟು ೨೪೮ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ / ವಿಶ್ವವಿದ್ಯಾಲಯಗಳಿಂದ 12ನೇ ತರಗತಿ, ಡಿಪ್ಲೋಮಾ, B.Sc ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿದ ಅಥವಾ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಸದ್ಯದಲ್ಲೇ ಒಂದು ಲಕ್ಷ ರಾಜ್ಯ ಸರಕಾರಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ವಯೋಮಿತಿ: ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು ಹಾಗೂ ಗರಿಷ್ಠ ವಯಸ್ಸಿನ ಮಿತಿ 34 ವರ್ಷಗಳಾಗಿದ್ದು; OBC ಅಭ್ಯರ್ಥಿಗಳಿಗೆ 03 ವರ್ಷಗಳು ಮತ್ತು  SC/ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ /OBC ಅಭ್ಯರ್ಥಿಗಳಿಗೆ 700 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು; SC/ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳು ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ತ್ತು ವ್ಯಾಪಾರ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಇದನ್ನೂ ಓದಿ: ಪಿಎಂ ಕಿಸಾನ್ 13ನೇ ಕಂತು ಶೀಘ್ರ ಬಿಡುಗಡೆ: ನಿಮ್ಮೂರಿನ ಯಾರಿಗೆಲ್ಲ ಹಣ ಸಿಗಲ್ಲ ಮೊಬೈಲ್‌ನಲ್ಲೇ ಚೆಕ್ ಮಾಡಿ

ಅರ್ಜಿ ಸಲ್ಲಿಕೆ ದಿನಾಂಕ: ರಾಷ್ಟ್ರೀಯ ಕೆಮಿಕಲ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್ (RCFL) ನೇಮಕಾತಿಗೆ ಇದೇ ಡಿಸೆಂಬರ್ 30, 2023ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು; ಜನವರಿ 16, 2023 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?: ರಾಷ್ಟ್ರೀಯ ಕೆಮಿಕಲ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್ (RCFL)ಅಧಿಕೃತ ವೆಬ್‌ಸೈಟ್ ಭೇಟಿ ಅರ್ಜಿ ಸಲ್ಲಿಸುವ ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಕೆಮಿಕಲ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್ (RCFL) ಹುದ್ದೆಗಳ ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಕೆಮಿಕಲ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್ (RCFL)ಅಧಿಕೃತ ವೆಬ್‌ಸೈಟ್ ಭೇಟಿ ನೀಡಲಿ ಇಲ್ಲಿ ಕ್ಲಿಕ್ ಮಾಡಿ

ಗಮನಿಸಿ: ಉದ್ಯೋಗ ನೀಡುವ ಸುಳ್ಳು ಭರವಸೆ, ನಕಲಿ ವೆಬ್‌ಸೈಟ್/ ಅಧಿಸೂಚನೆ(ಪ್ರಕಟಣೆ)ಗಳಿಂದ ಎಚ್ಚರವಾಗಿರಿ. ಅಧಿಕೃತ ವೆಬ್‌ಸೈಟ್ ಮೂಲಕವೇ ಅರ್ಜಿ ಸಲ್ಲಿಸಿ. ಬಹುಮುಖ್ಯವಾಗಿ ಅಧಿಸೂಚನೆಯನ್ನು ಎಚ್ಚರಿಕೆಯಿಂದ ವಿವರವಾಗಿ ಓದಿ ಈ ಹುದ್ದೆಗಳಿಗೆ ನೀವು ಅರ್ಹರೆ? ಎಂಬುವುದನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ ಮತ್ತು ಕೂಡಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: ರೈತ ಮಕ್ಕಳೇ ಡಿಸೆಂಬರ್ 31ರೊಳಗೆ ಅರ್ಜಿ ಸಲ್ಲಿಸಿ ₹2,500ದಿಂದ ₹11,000 ವಿದ್ಯಾರ್ಥಿವೇತನ ಪಡೆಯಿರಿ

ಸಮಗ್ರ ಮಾಹಿತಿಗಾಗಿ ನಮ್ಮ ಟೆಲಿಗ್ರಾಂ ಗ್ರುಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Related Posts

error: Content is protected !!